ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ತೂಗುದೀಪ್ ಬಂಧನವಾಗಿದೆ. ರೇಣುಕಾ ಸ್ವಾಮಿಯನ್ನು ಕೊಂದ ಬಳಿಕ ಆತನ ಶವವನ್ನು ಎಸೆಯಲು ಹಾಗಲು ಕೊಲೆ ಆರೋಪ ಹೊತ್ತುಕೊಳ್ಳಲು ಗ್ಯಾಂಗ್ ಒಂದಕ್ಕೆ 30 ಲಕ್ಷ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್
Follow us
|

Updated on: Jun 12, 2024 | 9:38 AM

ರೇಣುಕಾ ಸ್ವಾಮಿ (Renuka Swamy) ಕೊಲೆ ಆರೋಪದಲ್ಲಿ ನಟ ದರ್ಶನ್ (Darshan), ಪವಿತ್ರಾ ಗೌಡ (Pavitra Gowda) ಸೇರಿ 13 ಜನರ ಬಂಧನವಾಗಿದೆ. ನಿನ್ನೆ ರಾತ್ರಿಪೂರ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿ ಸಮಯ ಕಳೆದಿದೆ. ಇದರ ನಡುವೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಹಲವು ಆಘಾತಕಾರಿ ವಿಷಯಗಳು ಹೊರಬರುತ್ತಿವೆ. ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದರು ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ ಮೂವತ್ತು ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಇದನ್ನೂ ಓದಿ:ದರ್ಶನ್ ಆದ್ರೂ ಆಗಲಿ, ಯಾರಾದ್ರೂ ಆಗಲಿ, ನನಗೆ ನ್ಯಾಯ ಬೇಕು: ರೇಣುಕಾ ಸ್ವಾಮಿ ಪತ್ನಿ ಕಣ್ಣೀರು

ಪೊಲೀಸರು ತನಿಖೆ ಚುರುಕು ಗೊಳಿಸಿದಂತೆ ಹಣ ಪಡೆದಿದ್ದ ಗ್ಯಾಂಗ್​ನವರು ರಾತ್ರಿ ಯಿಡೀ ದರ್ಶನ್ ಗ್ಯಾಂಗ್​ ಜೊತೆ ಮೊಬೈಲ್ ಮೂಲಕ ಸಂಭಾಷಣೆ ಮಾಡಿರುವ ವಿಚಾರವೂ ಬಹಿರಂಗಗೊಂಡಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

ಈಗ ಆ ಶವ ವಿಲೇವಾರಿ ಗ್ಯಾಂಗ್ ಸಹ ದರ್ಶನ್ ಜೊತೆಗೆ ಜೈಲಿನಲ್ಲಿದೆ. ಶೆಡ್​ನಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರು, ದರ್ಶನ್​ಗೆ ಗ್ಯಾಂಗ್​ ಅನ್ನು ಪರಿಚಯಿಸಿದವರು, ರೇಣುಕಾ ಸ್ವಾಮಿಯನ್ನು ಅಪಹರಿಸಿಕೊಂಡು ಬಂದವರು ಎಲ್ಲವರನ್ನೂ ಪೊಲೀಸರು ಬಂಧಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ