ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರಿಗೆ ಜೈಲಿನ ಊಟ ದೇಹಕ್ಕೆ ಒಗ್ಗುತ್ತಿಲ್ಲ. ಭೇದಿ, ಅತಿಸಾರ ಮತ್ತಿತ್ಯಾದಿ ಸಮಸ್ಯೆ ಉಂಟಾಗುತ್ತಿದೆ, ಜೊತೆಗೆ ದೇಹದ ತೂಕ ಇಳಿಕೆ ಆಗುತ್ತಿದೆ ಎಂದು ಅವರ ಪರ ವಕೀಲರು ಹೇಳಿದ್ದರು. ಹೀಗಾಗಿ ಅವರು ಮನೆ ಊಟ, ಬಟ್ಟೆಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಅರ್ಜಿಯನ್ನು ರಿಜೆಕ್ಟ್ ಮಾಡಿತ್ತು. ಈಗ ಮನೆ ಊಟ, ಬಟ್ಟೆ, ಹಾಸಿಗೆಗಾಗಿ ಮತ್ತೆ ಹೈಕೋರ್ಟ್ಗೆ ನಟ ದರ್ಶನ್ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ.
ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಮೊದಲು ಮನೆಯಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅನುಮತಿ ನಿರಾಕರಿಸಿತ್ತು. ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಿ ನಟ ದರ್ಶನ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಎದುರು ದರ್ಶನ್ ಅವರ ಪರ ವಕೀಲರು ಯಾವ ರೀತಿಯ ವಾದ ಮಂಡಿಸುತ್ತಾರೆ ಎಂಬುದನ್ನು ನೋಡಬೇಕಿದೆ.
ದರ್ಶನ್ಗೆ ಮನೆ ಊಟ ಹಾಗೂ ಹಾಸಿಗೆ ನೀಡಬೇಕು ಎಂದು ದರ್ಶನ್ ಪರ ವಕೀಲರು ಈ ಮೊದಲು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ತಾಂತ್ರಿಕ ಕಾರಣ ನೀಡಿ ದರ್ಶನ್ ಪರ ವಕೀಲರು ಹಿಂಪಡೆದಿದ್ದರು. ಪ್ರಕರಣದ ಕುರಿತಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಬೇಕಿದೆ. ಈ ಹಿನ್ನೆಲೆಯಲ್ಲಿ ಹಳೆಯ ಅರ್ಜಿಯನ್ನು ವಾಪಸ್ ಪಡೆದು ಕೊಳ್ಳಲಾಗಿತ್ತು. ಈಗ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿ ಅನೇಕರು ಬಂಧನಕ್ಕೆ ಒಳಗಾಗಿದ್ದಾರೆ. ಶೀಘ್ರವೇ ದರ್ಶನ್ ಅವರ ನ್ಯಾಯಾಂಗ ಬಂಧನ ಪೂರ್ಣಗೊಳ್ಳಲಿದೆ. ಅವರನ್ನು ಮತ್ತೆ ಪೊಲೀಸರು ಕೋರ್ಟ್ ಎದುರು ಹಾಜರುಪಡಿಸಲಿದ್ದಾರೆ. ಈಗಾಗಲೇ ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಕೆ ಆಗದ ಕಾರಣ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.