ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ; ಕಾನೂನು ಸಮರಕ್ಕೆ ವಿಜಯಲಕ್ಷ್ಮೀ ರೆಡಿ 

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಪಟ್ಟಣಗೆರೆಯಲ್ಲಿರುವ ಶೆಡ್​ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ; ಕಾನೂನು ಸಮರಕ್ಕೆ ವಿಜಯಲಕ್ಷ್ಮೀ ರೆಡಿ 
ದರ್ಶನ್-ಪವಿತ್ರಾ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಾಜೇಶ್ ದುಗ್ಗುಮನೆ

Updated on: Sep 06, 2024 | 9:03 AM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಆಗಿದೆ. ಈಗಾಗಲೇ ಈ ಪ್ರಕರಣದಲ್ಲಿ ಚಾರ್ಜ್​ಶೀಟ್ ಸಲ್ಲಿಕೆಗೂ ಮೊದಲು ಪವಿತ್ರಾ ಗೌಡ ಹಾಗೂ ಇತರರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅವುಗಳು ರಿಜೆಕ್ಟ್ ಆಗಿದ್ದವು. ಈಗ ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ. ವಿಜಯಲಕ್ಷ್ಮೀ ಅವರು ಸೆಪ್ಟೆಂಬರ್ 5ರಂದು ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಬೇಲ್ ವಿಚಾರವಾಗಿ ಚರ್ಚೆ ಮಾಡಿದ್ದಾರೆ.

ಗುರುವಾರ (ಸೆಪ್ಟೆಂಬರ್ 5) ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್​ ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ಮಾಡಿದ್ದರು. ಈ ವೇಳೆ ಮಹತ್ವದ ಚರ್ಚೆ ನಡೆದಿದೆ. ಮಾತುಕತೆ ವೇಳೆ ಜಾರ್ಜ್‌ ಶೀಟ್​ನಲ್ಲಿರುವ ಅಂಶಗಳ ಬಗ್ಗೆ ದರ್ಶನ್​ಗೆ ಮಾಹಿತಿ ನೀಡುವ ಕೆಲಸ ಆಗಿದೆ. ಇದಕ್ಕೂ ಮೊದಲು ದರ್ಶನ್ ಅವರು ದೂರವಾಣಿ ಮೂಲಕ ವಕೀಲರ ಜೊತೆ ಮಾತನಾಡಿದ್ದರು. ಈ ವೇಳೆ ಜಾಮೀನಿನ ವಿಚಾರವಾಗಿ ಚರ್ಚೆ ನಡೆದಿದೆ.

ವಿಜಯಲಕ್ಷ್ಮೀ ಜೊತೆ ವಕೀಲರು ಬೇಲ್ ಅರ್ಜಿ ಕಳುಹಿಸಿದ್ದರು. ವಕೀಲರ ಜೊತೆ ಮಾತುಕತೆ ಬಳಿಕ ಬೇಲ್ ದರ್ಶನ್ ಅರ್ಜಿಗೆ ಸಹಿಹಾಕಿದ್ದರು. ವಿಜಯಲಕ್ಷ್ಮೀ ಹಾಗೂ ದಿನಕರ್ ಸಹಿ ಪಡೆದು ಹೋದ ಬಳಿಕ ಜೈಲಿಗೆ ನೋಟರಿ ಬಂದಿದೆ. ಸರ್ಕಾರಿ ನೋಟರಿಯವರು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀನು ಅರ್ಜಿ ಹಾಗೂ ಅಫಿಡವಿಟ್ ರೆಡಿ ಮಾಡಿದ್ದಾರೆ.

ಇದನ್ನೂ ಓದಿ: ವಾಹನಗಳ ಮೇಲೆ ಪ್ರಚೋದನಾಕಾರಿ ಬರಹ, ಸ್ಟಿಕ್ಕರ್ ಅಂಟಿಸಿದರೆ ದಂಡ: ದರ್ಶನ್ ಅಭಿಮಾನಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಆರ್​ಟಿಒ

ವಿಜಯಲಕ್ಷ್ಮೀ ಅವರು ದರ್ಶನ್ ಅರೆಸ್ಟ್ ಆದ ಬಳಿಕ ಸಾಕಷ್ಟು ನೊಂದಿದ್ದಾರೆ. ನಾನಾ ದೇವಾಲಯಗಳಿಗೆ ಅವರು ಭೇಟಿ ನೀಡುತ್ತಾ ಇದ್ದಾರೆ. ಇತ್ತೀಚೆಗೆ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಬಂದಿದ್ದರು ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.