ರೇಣುಕಾ ಸ್ವಾಮಿ ಕೇಸ್: ದರ್ಶನ್ ಸ್ವ-ಇಚ್ಛಾ ಹೇಳಿಕೆ, ಕೊಲೆಯಲ್ಲಿ ತನ್ನ ಪಾತ್ರ ವಿವರಿಸಿದ ನಟ

|

Updated on: Jun 19, 2024 | 10:17 AM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಪೊಲೀಸರು ಸತತ ವಿಚಾರಣೆ ಮಾಡುತ್ತಲೇ ಇದ್ದಾರೆ. ಸ್ಥಳ ಮಹಜರು, ಸಾಕ್ಷ್ಯಗಳ ಸಂಗ್ರಹದಲ್ಲಿ ನಿರತರಾಗಿದ್ದಾರೆ. ಇದರ ನಡುವೆ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.

ರೇಣುಕಾ ಸ್ವಾಮಿ ಕೇಸ್: ದರ್ಶನ್ ಸ್ವ-ಇಚ್ಛಾ ಹೇಳಿಕೆ, ಕೊಲೆಯಲ್ಲಿ ತನ್ನ ಪಾತ್ರ ವಿವರಿಸಿದ ನಟ
ರೇಣುಕಾ ಸ್ವಾಮಿ ಕೊಲೆ: ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್
Follow us on

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ (Darshan Thoogudeepa) ಬಂಧನವಾಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಕಳೆದ ಎಂಟು ದಿನದಿಂದಲೂ ದರ್ಶನ್ ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ಸತತ ವಿಚಾರಣೆ, ತನಿಖೆಗಳು ನಡೆಯುತ್ತಲೇ ಇವೆ. ಇದರ ನಡುವೆ ದರ್ಶನ್ ಪೊಲೀಸರ ಮುಂಚೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದು, ರೇಣುಕಾ ಸ್ವಾಮಿ ಕೊಲೆಯಲ್ಲಿ ತಮ್ಮ ಪಾತ್ರ ಏನೆಂಬುದನ್ನು ಪೊಲೀಸರಿಗೆ ವಿವರಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದು, ರೇಣುಕಾ ಸ್ವಾಮಿ ಕೊಲೆಯಲ್ಲಿ ತಮ್ಮ ಪಾತ್ರದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ನೀಡಿದ್ದಾರೆ. ಕೊಲೆಯಲ್ಲಿ ತಾವು ಭಾಗಿ ಆಗಿರುವ ವಿಷಯದಿಂದ ಹಿಡಿದು, ಹಲ್ಲೆ ಮಾಡಿದ್ದು, ಹಲ್ಲೆ ಮಾಡಿದ ರೀತಿ, ಪ್ರಕರಣದಲ್ಲಿ ತಮ್ಮ ಹೆಸರು ಮುನ್ನೆಲೆಗೆ ಬರದಂತೆ ತಡೆಯಲು ಮಾಡಿದ್ದ ಪ್ರಯತ್ನ, ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಪ್ರದೋಶ್​ಗೆ 30 ಲಕ್ಷ ರೂಪಾಯಿ ಹಣ ನೀಡಿದ್ದು, ಆ ನಂತರ ಪ್ರಭಾವಿಗಳನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ನೀಡಿದ್ದು ಎಲ್ಲವನ್ನೂ ಹೇಳಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ದರ್ಶನ್ ಪ್ರಕರಣ: ಮಹಜರು ಮಾಡಿದ ಸ್ಥಳ ಹಾಗೂ ವಶಪಡಿಸಿಕೊಂಡ ವಸ್ತುಗಳ ವಿವರ

ಈ ಪ್ರಕರಣದಲ್ಲಿ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದವರ ಸಂಖ್ಯೆ ಹೆಚ್ಚಿದೆ. ಅದರಲ್ಲಿ ದರ್ಶನ್ ಸಹ ಒಬ್ಬರಾಗಿದ್ದು, ಸ್ವ-ಇಚ್ಛೆ ಹೇಳಿಕೆ ದಾಖಲಿಸಿದಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಆಗಬಹುದೆಂಬ ನಿರೀಕ್ಷೆಯಿಂದ ಹಾಗೂ ಪೊಲೀಸ್ ಕಸ್ಟಡಿಯನ್ನು ಆದಷ್ಟು ಬೇಗ ಅಂತ್ಯಗೊಳಿಸುವ ದೃಷ್ಟಿಯಿಂದ ದರ್ಶನ್ ಹೀಗೆ ಮಾಡಿರಬಹುದು ಎನ್ನಲಾಗುತ್ತಿದೆ. ಏನೇ ಆಗಲಿ, ದರ್ಶನ್​ರ ಸ್ವ-ಇಚ್ಛಾ ಹೇಳಿಕೆಯಿಂದ ಪ್ರಕರಣ ಇನ್ನಷ್ಟು ಸುಲಭವಾಗಿದ್ದು, ಹೇಳಿಕೆಯ ಅನುಸಾರ ಪೊಲೀಸರು ಸಾಕ್ಷ್ಯಗಳನ್ನಷ್ಟೆ ಒಂದು ಮಾಡಬೇಕಿದೆ. ಅದರಲ್ಲಿ ಹಲವು ಸಾಕ್ಷ್ಯಗಳನ್ನು ಪೊಲೀಸರು ಈಗಾಗಲೇ ವಶಪಡಿಸಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದರು. ಅದೇ ದಿನ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳ ಬಂಧನವಾಗಿತ್ತು. ಈಗ ಬಂಧಿತರ ಸಂಖ್ಯೆ 20 ದಾಟಿದೆ. ರೇಣುಕಾ ಸ್ವಾಮಿಗೆ ದರ್ಶನ್ ಮತ್ತು ಗ್ಯಾಂಗ್ ತೀವ್ರ ಚಿತ್ರಹಿಂಸೆ ನೀಡಿತ್ತು ಎಂಬುದು ಸಹ ತನಿಖೆಯಿಂದ ಹೊರಬಂದಿದೆ. ನಾಳೆ ಅಂದರೆ ಜೂನ್ 20 ಕ್ಕೆ ದರ್ಶನ್​ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 am, Wed, 19 June 24