Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?

ಅಶ್ವಿನಿ ಬಗ್ಗೆ ಅವಹೇಳನಕಾರಿಯಾಗಿ ಮಾಡಿದ ಪೋಸ್ಟ್ ವಿಚಾರ ದರ್ಶನ್ ಅವರ ಗಮನಕ್ಕೂ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಮಾತನಾಡಿದ್ದಾರೆ.

Exclusive: ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್; ಕೊಟ್ಟ ಸೂಚನೆ ಏನು?
ದರ್ಶನ್-ಅಶ್ವಿನಿ
Follow us
Malatesh Jaggin
| Updated By: ರಾಜೇಶ್ ದುಗ್ಗುಮನೆ

Updated on: Apr 05, 2024 | 11:07 AM

ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಕುರಿತು ಅವಹೇಳನಕಾರಿಯಾಗಿ ಮಾಡಲಾದ ಪೋಸ್ಟ್ ಒಂದು ಸಖತ್ ವೈರಲ್ ಆಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಗಜಪಡೆ’ ಹೆಸರಿನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಇದನ್ನು ಹಾಕಲಾಗಿರುವುದರಿಂದ ಇದು ಯಾರೋ ದರ್ಶನ್ ಅಭಿಮಾನಿ ಮಾಡಿದ್ದು ಎಂದು ಹೇಳಲಾಗಿತ್ತು. ಈ ವಿಚಾರದಲ್ಲಿ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಯಾರೋ ಕಿಡಿಗೇಡಿಗಳ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

ಪೋಸ್ಟ್​ನಲ್ಲಿ ಏನಿತ್ತು?

ಆರ್​ಸಿಬಿ ಅನ್​ಬಾಕ್ಸಿಂಗ್ ಈವೆಂಟ್​ನಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಭಾಗಿ ಆಗಿದ್ದರು. ಒಳ್ಳೆಯ ಕೆಲಸಕ್ಕೆ ಪತಿ ಇಲ್ಲದ ಅಶ್ವಿನಿ ಅವರನ್ನು ಕರೆಸಿದ್ದೇ ತಪ್ಪು ಎಂದು ಬರೆಯಲಾಗಿತ್ತು. ಜೊತೆಗೆ ಆರ್​ಸಿಬಿ ನಿರಂತರವಾಗಿ ಸೋಲುತ್ತಿರುವುದು ಇದೇ ಕಾರಣಕ್ಕೆ ಎಂದು ಹೇಳಲಾಗಿತ್ತು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಆರ್​ಸಿಬಿ ಸೋಲಿಗೆ ಅಶ್ವಿನಿ ಕಾರಣವೆಂದ ದರ್ಶನ್​ ಫ್ಯಾನ್ಸ್; ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು

ದರ್ಶನ್ ಗಮನಕ್ಕೂ ಬಂದಿದೆ..

ದರ್ಶನ್ ಅವರ ಗಮನಕ್ಕೂ ಈ ವಿಚಾರ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ಪುನೀತ್ ಅವರು ಮಾತನಾಡಿದ್ದಾರೆ. ‘ಅಶ್ವಿನಿ ಬಗ್ಗೆ ಹಾಕಲಾದ ಪೋಸ್ಟ್ ನೋಡಿ ದರ್ಶನ್ ಬೇಸರ ಮಾಡಿಕೊಂಡಿದ್ದಾರೆ. ಅವರು ನಮಗೆ ಹಲವು ವರ್ಷಗಳ ಹಿಂದೆಯೇ ಸೂಚನೆ ಒಂದನ್ನು ನೀಡಿದ್ದರು. ಯಾರು ಏನೇ ಮಾಡಿದರೂ ಸೋಶಿಯಲ್ ಮೀಡಿಯಾ ಮೂಲಕ ಉತ್ತರಿಸಬಾರದು, ಅವಹೇಳನಕಾರಿ ಪೋಸ್ಟ್ ಮಾಡಬಾರದು ಎಂದು ಹೇಳಿದ್ದಾರೆ’ ಎಂದಿದ್ದಾರೆ ಪುನೀತ್.

ಇದನ್ನೂ ಓದಿ: ಆಡಿ ಕ್ಯೂ 7 ಕಾರು ಖರೀದಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್, ಬೆಲೆ ಎಷ್ಟು ಕೋಟಿ?

‘ಸಿನಿಮಾ ಪ್ರಚಾರಕ್ಕೆ ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಲು ದರ್ಶನ್ ಸೂಚನೆ ನೀಡಿದ್ದಾರೆ. ಹೀಗಾಗಿ ಇದು ಫೇಕ್ ಖಾತೆ. ಆತ ದರ್ಶನ್ ಅಭಿಮಾನಿ ಆಗಿರಲು ಸಾಧ್ಯವೇ ಇಲ್ಲ. ದರ್ಶನ್ ಅವರು ಅಭಿಮಾನಿಗಳಿಗೆ ಈ ರೀತಿ ಹೇಳಿರಲು ಸಾಧ್ಯವೇ ಇಲ್ಲ. ಅವರು ಮಹಿಳೆಯರಿಗೆ ಸಾಕಷ್ಟು ಗೌರವ ನೀಡುತ್ತಾರೆ’ ಎಂದಿದ್ದಾರೆ ಪುನೀತ್. ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾಗ ಅವರ ಕೈಗೆ ಪೆಟ್ಟಾಗಿತ್ತು. ಅವರು ಈಗ ಆಪರೇಷನ್ ಮಾಡಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಅತ್ಯಂತ ಕಳವಳಕಾರಿಯಾಗಿದೆ: ಸಿಟಿ ರವಿ
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಬಿಜೆಪಿ ಚುನಾವಣೆಯಲ್ಲಿ ಸೋತಾಗಲೂ ಅಪ್ಪ-ಮಗ ಹೊಣೆ ಹೊರಬೇಕು: ಯತ್ನಾಳ್
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಸಹೋದರನ ಮದುವೆಗೆ 35 ಅಡಿ ಉದ್ದದ ನೋಟಿನ ಮಾಲೆ ಉಡುಗೊರೆಯಾಗಿ ನೀಡಿದ ಅಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಡಿಸೆಂಬರ್ 5 ರಂದು ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜನೆ: ರಾಜಣ್ಣ
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಗ್ಯಾರಂಟಿ ಯೋಜನೆಗಳಿಗಾಗಿ ಹಣವನ್ನು ಪ್ರತ್ಯೇಕವಾಗಿರಿಸಲಾಗಿದೆ: ಸತೀಶ್
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಡಿಕೆ ಶಿವಕುಮಾರ್ ನೀಡಿದ ಎಚ್ಚರಿಕೆಯಿಂದ ಭಯಗೊಂಡರೇ ಗವಿಯಪ್ಪ?
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಆಶಯಗಳಿಗೆ ವಿರುದ್ಧವಾಗಿ ಪೇಜಾವರ ಶ್ರೀ ಸಂವಿಧಾನ ಬದಲಿಸಬೇಕೆನ್ನುತ್ತಾರೆ:ಸಿಎಂ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ
ಬಸನಗೌಡ ಯತ್ನಾಳ್ ಸ್ವಪ್ರತಿಷ್ಠೆಗಾಗಿ ಹೋರಾಟ ಮಾಡುತ್ತಿದ್ದಾರೆ: ಯಡಿಯೂರಪ್ಪ