ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್

ನಟ ದರ್ಶನ್​ ಅವರು ಈಗ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಅವರು ಈಗ ಜೈಲಿನಲ್ಲಿ ಕಂಬಿ ಎಣಿಸುವಂತಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣವೇ ಇಷ್ಟಕ್ಕೆಲ್ಲ ಕಾರಣ. ಅವರನ್ನು ಕುಟುಂಬದವರು ಆಗಾಗ ಭೇಟಿ ಮಾಡಿ ಬರುತ್ತಿದ್ದಾರೆ.

ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್
ಕುಟುಂಬದ ಜೊತೆ ದರ್ಶನ್
Follow us
|

Updated on: Jul 11, 2024 | 10:45 AM

ನಟ ದರ್ಶನ್ ಅವರು ಸದ್ಯ ಜೈಲಿನಲ್ಲಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪ ಅವರ ಮೇಲೆ ಇದೆ. ಸದ್ಯ ಜೈಲಲ್ಲಿ ದರ್ಶನ್ ಚಡಪಡಿಕೆ ಮುಂದುವರಿದಿದೆ. ಅವರಿಗೆ ಊಟ ಒಗ್ಗುತ್ತಿಲ್ಲ. ನಿದ್ದೆ ಬರುತ್ತಿಲ್ಲ. ಈ ಮಧ್ಯೆ ಜೈಲಿನಲ್ಲಿರುವ ದರ್ಶನ್ ಅವರನ್ನು ಕುಟುಂಬದವರು ಮೂರು ಬಾರಿ ಭೇಟಿ ಮಾಡಿದ್ದಾರೆ. ಜುಲೈ 11ರಂದು ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಸೇರಿದಂತೆ ಕುಟುಂಬಸ್ಥರು ಬಂದು ದರ್ಶನ್ ಅವರನ್ನು ಭೇಟಿ ಮಾಡಿ, ಧೈರ್ಯ ಹೇಳಿದ್ದಾರೆ.

ದರ್ಶನ್ ಭೇಟಿಯಾದಾಗ ವಿಜಯಲಕ್ಷ್ಮಿ ಧೈರ್ಯ ತುಂಬಿದ್ದರು. ಬಟ್ಟೆ, ಹಣ್ಣುಗಳನ್ನು ನೀಡಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದಾರೆ.

ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್ ಹೇಳಿಕೊಂಡಿದ್ದಾರೆ. ವಕೀಲರ ಮೂಲಕ ಕೋರ್ಟ್​​ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ದರ್ಶನ್​ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಸದ್ಯ ಮನೆ ಊಟ ಕೊಡುವ ಬಗ್ಗೆ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಜುಲೈ 18ರಂದು ಈ ಬಗ್ಗೆ ನಿರ್ಧಾರ ಆಗಲಿದೆ. ಹೊರಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆಯೂ ಪತ್ನಿಯ ಬಳಿ ಕೇಳಿ ದರ್ಶನ್ ತಿಳಿದುಕೊಂಡಿದ್ದಾರೆ. ಜಾಮೀನು ಪ್ರಕ್ರಿಯೆ ಬಗ್ಗೆಯೂ ಕುಟುಂಬಸ್ಥರ ಜೊತೆಗೆ ಚರ್ಚೆ ನಡೆದಿದೆ.

ಇದನ್ನೂ ಓದಿ: ‘ತಪ್ಪಾಗಿದ್ರೆ ಶಿಕ್ಷೆ ಆಗಲಿ’; ದರ್ಶನ್ ಪ್ರಕರಣದ ಬಗ್ಗೆ ಧನಂಜಯ್ ಮಾತು

ಮಗನ ಕಂಡು ದರ್ಶನ್ ಖುಷಿಯಾಗಿದ್ದರು. ಮತ್ತೆ ರಾತ್ರಿಯಾಗುತ್ತಿದ್ದಂತೆ ದರ್ಶನ್ ಮೌನಕ್ಕೆ ಶರಣಾಗಿದ್ದಾರೆ. ಇತರ ಜೈಲು ಸಿಬ್ಬಂದಿ ಜೊತೆ ಅವರು ಬರೆಯುತ್ತಿಲ್ಲ. ವರ್ಕೌಟ್ ಇಲ್ಲದೆ, ಸರಿಯಾದ ಆಹಾರ ಇಲ್ಲದೆ ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗಿದ್ದಾರೆ. ಕುಟುಂಬದವರು ಬಂದು ಧೈರ್ಯ ಹೇಳಿದರೂ ದರ್ಶನ್ ಚಡಪಡಿಕೆ ನಿಂತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ