‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

ಕಾಡಾನೆ ಕಾರ್ಯಾಚರಣೆ ವೇಳೆ ಅರ್ಜುನ ಆನೆ ಮೃತಪಟ್ಟಿದೆ. ಮೃತಪಟ್ಟ ಆನೆಯ ಅಂತ್ಯಸಂಸ್ಕರಾ ನಡೆದಿದೆ. ಆದರೆ, ಸಮಾಧಿಗೆ ದಿಕ್ಕು-ದೆಸೆ ಇಲ್ಲದಂತೆ ಆಗಿದೆ. ಈ ಕಾರಣದಿಂದ ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ ಎಂದು ದರ್ಶನ್ ಅವರು ಮನವಿ ಮಾಡಿಕೊಂಡಿದ್ದಾರೆ.

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ
ಅರ್ಜುನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 03, 2024 | 7:00 AM

ನಟ ದರ್ಶನ್ (Darshan) ಅವರಿಗೆ ಪ್ರಾಣಿಗಳ ಮೇಲೆ ಇರುವ ಪ್ರೀತಿ ಅಪಾರವಾದುದ್ದು. ಇದು ಪದೇ ಪದೇ ಸಾಬೀತು ಆಗುತ್ತಲೇ ಇರುತ್ತದೆ. ಅವರು ಫಾರ್ಮ್​​ಹೌಸ್​ನಲ್ಲಿ ಸಾಕಷ್ಟು ಹಸುಗಳನ್ನು ಸಾಕಿದ್ದಾರೆ. ಪ್ರಾಣಿ-ಪಕ್ಷಿಗಳಿಗೂ ಆಶ್ರಯ ಕೊಟ್ಟಿದ್ದಾರೆ. ಈಗ ದರ್ಶನ್ ಅವರು ಒಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿಗೆ ಒಂದು ವ್ಯವಸ್ಥೆ ಆಗಬೇಕು ಎನ್ನುವ ಕೋರಿಕೆಯನ್ನು ಅವರು ಇಟ್ಟಿದ್ದಾರೆ.

ಕಳೆದ ವರ್ಷ ನವೆಂಬರ್ 23ರಂದು ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯಲ್ಲಿ ಅರ್ಜುನ, ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟೂ 6 ಆನೆಗಳು ಇದ್ದವು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. 9 ಆನೆಗಳನ್ನು ಹಿಡಿಯಲು ಟಾರ್ಗೆಟ್ ಇಟ್ಟುಕೊಳ್ಳಲಾಗಿತ್ತು. ಆರು ಆನೆಗಳನ್ನು ಆಗಲೇ ಹಿಡಿಯಲಾಗಿತ್ತು. ಏಳನೇ ಆನೆಯನ್ನು ಟಾರ್ಗೆಟ್ ಮಾಡುವಾಗ ಅರ್ಜುನ ಮೃತಪಟ್ಟಿದ್ದ. ನಂತರ ಹಾಸನದಲ್ಲಿ ಆನೆಯ ಅಂತ್ಯಕ್ರಿಯೆ ನಡೆಸಲಾಗಿತ್ತು. ಈಗ ದರ್ಶನ್ ಕಡೆಯಿಂದ ವಿಶೇಷ ಮನವಿ ಬಂದಿದೆ.

ಇದನ್ನೂ ಓದಿ: ಅರ್ಜುನ ಆನೆ ಸಾವು, ಕೊನೆ ಕ್ಷಣದಲ್ಲಿ ಆಗಿದ್ದೇನು?;ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ. ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು’ ಎಂದು ದರ್ಶನ್ ಬರೆದುಕೊಂಡಿದ್ದಾರೆ.

‘ಚಾಮುಂಡೇಶ್ವರಿ ತಾಯಿಯ ದಸರಾ ವೈಭವದ ಸಾರೋಟುಗಾರ ಅರ್ಜುನನ ಸಮಾಧಿ ಮರೆತೇ ಬಿಟ್ಟರೇ ಹೇಗೆ? ಸಂಬಂಧ ಪಟ್ಟವರು ನಮ್ಮ ಗಜರಾಜ ಅರ್ಜುನನ ಮರೆಯದಿರಲಿ’ ಎಂದು ಕೆಲವರು ಕಮೆಂಟ್ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್