ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಒಂದು ತಿಂಗಳು; ಜಾಮೀನಿಗಾಗಿ ಚಾತಕ ಪಕ್ಷಿಯಂತೆ ಕಾದ ದಾಸ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ ಮೂವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಈಗ ದರ್ಶನ್ ಕೂಡ ಜಾಮೀನಿನ ನೀರೀಕ್ಷೆಯಲ್ಲಿ ಇದ್ದಾರೆ.

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಒಂದು ತಿಂಗಳು; ಜಾಮೀನಿಗಾಗಿ ಚಾತಕ ಪಕ್ಷಿಯಂತೆ ಕಾದ ದಾಸ
ದರ್ಶನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 27, 2024 | 11:42 AM

ನಟ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿ ಒಂದು ತಿಂಗಳು ಕಳೆದಿದೆ. ಬೆಂಗಳೂರು ಕೇಂದ್ರ ಕಾರಗೃಹದಲ್ಲಿ ದರ್ಶನ್ ಹಾಯಾಗಿ ಇದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ಅವರಿಗೆ ಖುಷಿಯಿಂದ ಇರೋಕೆ ಸಾಧ್ಯವಾಗುತ್ತಿಲ್ಲ. ಅವರಿಗೆ ತೀವ್ರ ಬೆನ್ನು ನೋವು ಕಾಡುತ್ತಿದೆ. ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಒಂದು ತಿಂಗಳೇ ಕಳೆದಿದೆ. ಇಂದು (ಸೆಪ್ಟೆಂಬರ್ 27) ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಪ್ರಕರಣದ ಎ1 ಪವಿತ್ರಾಗೌಡ, ಎ2 ದರ್ಶನ್, ಲಕ್ಷ್ಮಣ್, ನಾಗರಾಜ್, ವಿನಯ್, ರವಿಶಂಕರ್ ಹಾಗೂ ಪವನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇತ್ತೀಚೆಗಷ್ಟೇ ದರ್ಶನ್​ ಅವರು ಬೇಲ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆಗೆ ಬರೋ ಸಾಧ್ಯತೆ ಇದೆ. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದರು. ಹೀಗಾಗಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 27ಕ್ಕೆ ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದರು.

ಇದನ್ನೂ ಓದಿ: ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ ಮೂವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಈಗ ದರ್ಶನ್ ಕೂಡ ಜಾಮೀನಿನ ನೀರೀಕ್ಷೆಯಲ್ಲಿ ಇದ್ದಾರೆ.

ಐಟಿ ವಿಚಾರಣೆ

ಗುರುವಾರ ಬಳ್ಳಾರಿ ಜೈಲಿಗೆ ಐಟಿ ಅಧಿಕಾರಿಗಳು ಬಂದಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದರ್ಶನ್​ನ ವಿಚಾರಣೆ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಹಣದ ವ್ಯವಹಾರ ನಡೆದಿದೆ. ಕೇಸ್ ಮುಚ್ಚಿ ಹಾಕಲು ಲಕ್ಷಾಂತರ ರೂಪಾಯಿ ಬಳಕೆ ಆಗಿದೆ. ಹಣದ ಮೂಲವನ್ನು ಐಟಿ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್