ದರ್ಶನ್ ಫ್ಯಾನ್ಸ್ ಸಮ್ಮುಖದಲ್ಲಿ ಬಿಡುಗಡೆ ಆಗಲಿದೆ ‘ದಿ ಡೆವಿಲ್’ ಮೋಷನ್ ಪೋಸ್ಟರ್

ಜುಲೈ 19ರ ಶನಿವಾರ ರಾತ್ರಿ 8 ಗಂಟೆಗೆ ‘ದಿ ಡೆವಿಲ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಆಗಲಿದೆ. ಅತ್ತಿಬೆಲೆಯಲ್ಲಿ ನಟ ದರ್ಶನ್ ಅವರ ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೇ, ಸೋಶಿಯಲ್ ಮೀಡಿಯಾದಲ್ಲಿ ಕೂಡ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಲಿದೆ.

ದರ್ಶನ್ ಫ್ಯಾನ್ಸ್ ಸಮ್ಮುಖದಲ್ಲಿ ಬಿಡುಗಡೆ ಆಗಲಿದೆ ‘ದಿ ಡೆವಿಲ್’ ಮೋಷನ್ ಪೋಸ್ಟರ್
Darshan Thoogudeepa

Updated on: Jul 15, 2025 | 10:16 PM

ನಟ ದರ್ಶನ್ (Darshan Thoogudeepa) ಅವರ ಅಭಿಮಾನಿಗಳು ‘ದಿ ಡೆವಿಲ್’ (The Devil) ಸಿನಿಮಾಗಾಗಿ ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಿದೆ. ಈ ಚಿತ್ರದಿಂದ ಬರುವ ಪ್ರತಿ ಅಪ್​ಡೇಟ್ ಕೂಡ ಅಭಿಮಾನಿಗಳ ಪಾಲಿಗೆ ಥ್ರಿಲ್ ನೀಡುತ್ತಿದೆ. ಈಗ ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ (The Devil Motion Poster) ಬಿಡುಗಡೆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹಂಚಿಕೊಳ್ಳಲಾಗಿದೆ. ಮೋಷನ್ ಪೋಸ್ಟರ್ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಈ ಪೋಸ್ಟರ್ ಅನಾವರಣ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

‘ನೀವೆಲ್ಲರೂ ಕಾತುರದಿಂದ ಕಾಯುತ್ತಿರುವ ನಮ್ಮ‘ದಿ ಡೆವಿಲ್’ ಚಿತ್ರದ ಮೋಷನ್ ಪೋಸ್ಟರ್ ಇದೇ ಜುಲೈ 19ರ ಶನಿವಾರದಂದು ಸಂಜೆ 8 ಗಂಟೆಗೆ ನಮ್ಮ ಸೋಶಿಯಲ್ ಮೀಡಿಯಾ ಪೇಜ್ ಹಾಗೂ ಅತ್ತಿಬೆಲೆಯಲ್ಲಿ ನಮ್ಮ ನಲ್ಮೆಯ ಸೆಲೆಬ್ರಿಟೀಸ್ ಸಮ್ಮುಖದಲ್ಲೂ ಬಿಡುಗಡೆ ಆಗಲಿದೆ. ನಿಮ್ಮ ಪ್ರೀತಿ, ಪ್ರೋತ್ಸಾಹ ಸದಾ ಹೀಗೆ ಇರಲಿ’ ಎಂದು ಚಿತ್ರತಂಡದವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
ದರ್ಶನ್ ದೇವಾಲಯ ಭೇಟಿಗೆ ಟ್ವಿಸ್ಟ್, ದರ್ಶನ್ ಜೊತೆಗಿದ್ದ ಮತ್ತೊಬ್ಬ ಆರೋಪಿ
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಭಿಮಾನಿಗಳು ಮಾಡಿದ ಸಮಾಜ ಸೇವೆಯ ಚಿತ್ರಗಳ ಹಂಚಿಕೊಂಡ ದರ್ಶನ್
ಹಣ ವಾಪಸ್ ಕೊಡಿಸಿ: ನ್ಯಾಯಾಲಯದ ಮೊರೆ ಹೋದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಆರೋಪಿ ಆಗಿದ್ದಾರೆ. ಈ ಕೇಸ್​ನಲ್ಲಿ ಅವರು ಜೈಲು ವಾಸ ಅನುಭವಿಸಿ, ನಂತರ ಜಾಮೀನು ಪಡೆದು ಹೊರಗೆ ಬಂದರು. ಈ ವಿವಾದ ಆದ ಬಳಿಕ ಬರುತ್ತಿರುವ ದರ್ಶನ್ ಅವರ ಮೊದಲ ಸಿನಿಮಾ ಆದ್ದರಿಂದ ‘ದಿ ಡೆವಿಲ್’ ಸಿನಿಮಾ ಹೈಪ್ ಸೃಷ್ಟಿ ಮಾಡುತ್ತಿದೆ. ಅದ್ದೂರಿಯಾಗಿ ಶೂಟಿಂಗ್ ಮಾಡಲಾಗುತ್ತಿದೆ.

‘ದಿ ಡೆವಿಲ್’ ಸಿನಿಮಾಗೆ ಹಲವು ಕಡೆಗಳಲ್ಲಿ ಶೂಟಿಂಗ್ ನಡೆಯುತ್ತಿದೆ. ಹಾಡಿನ ಚಿತ್ರೀಕರಣಕ್ಕಾಗಿ ದರ್ಶನ್ ಅವರು ಥೈಲ್ಯಾಂಡ್​ಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ ಶೂಟಿಂಗ್ ಮುಗಿದ ಬಳಿಕ ವಿದೇಶದಲ್ಲಿ ಶೂಟಿಂಗ್ ಆರಂಭ ಮಾಡಲಾಗಿದೆ. ಕೋರ್ಟ್ ಅನುಮತಿ‌ ಪಡೆದು ಚಿತ್ರೀಕರಣಕ್ಕಾಗಿ ದರ್ಶನ್ ಅವರು ವಿದೇಶಕ್ಕೆ ಹಾರಿದ್ದಾರೆ. 10 ದಿನಗಳ ಕಾಲ ಅವರು ಥೈಲ್ಯಾಂಡ್​ನಲ್ಲೇ ಉಳಿಯಲಿದ್ದಾರೆ.

ಇದನ್ನೂ ಓದಿ: ಎದೆ ಮೇಲೆ ದರ್ಶನ್ ಫೋಟೋ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

‘ಮಿಲನ’ ಸಿನಿಮಾ ಖ್ಯಾತಿಯ ನಿರ್ದೇಶಕ ಪ್ರಕಾಶ್ ವೀರ್ ಅವರ ‘ದಿ ಡೆವಿಲ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ನಟಿ ರಚನಾ ರೈ ಅವರು ಈ ಚಿತ್ರದಲ್ಲಿ ಹೀರೋಯಿನ್ ಆಗಿ ಅಭಿನಯಿಸುತ್ತಿದ್ದಾರೆ. ನಟಿ ಶರ್ಮಿಳಾ ಮಾಂಡ್ರೆ ಅವರಿಗೂ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವಿದೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.