ರಾಜಸ್ಥಾನದಲ್ಲಿ ‘ದಿ ಡೆವಿಲ್’ ಶೂಟಿಂಗ್; ದರ್ಶನ್ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ ತಂಡ

|

Updated on: Mar 25, 2025 | 8:27 PM

‘ದಿ ಡೆವಿಲ್’ ಸಿನಿಮಾದ ಕೆಲಸಗಳಿಗೆ ಚುರುಕು ಮುಟ್ಟಿಸಲಾಗಿದೆ. ಬಿರುಸಿನಿಂದ ಶೂಟಿಂಗ್ ಮಾಡಲಾಗುತ್ತಿದೆ. ಕಾರಣಾಂತರಗಳಿಂದ ವಿಳಂಬ ಆಗಿದ್ದ ಚಿತ್ರೀಕರಣಕ್ಕೆ ಮರುಚಾಲನೆ ನೀಡಿದ್ದು, ರಾಜಸ್ಥಾನದಲ್ಲಿ ಶೂಟಿಂಗ್ ನಡೆಯುತ್ತಿದೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್, ರಚನಾ ರೈ ಹಾಗೂ ಇನ್ನುಳಿದ ಕಲಾವಿದರು ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

ರಾಜಸ್ಥಾನದಲ್ಲಿ ‘ದಿ ಡೆವಿಲ್’ ಶೂಟಿಂಗ್; ದರ್ಶನ್ ಅಭಿಮಾನಿಗಳಿಗೆ ಅಪ್​ಡೇಟ್ ನೀಡಿದ ತಂಡ
Darshan Thoogudeepa
Follow us on

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ (The Devil Movie) ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಹಲವು ವಿಘ್ನಗಳು ಎದುರಾಗಿದ್ದರಿಂದ ಶೂಟಿಂಗ್ ವಿಳಂಬ ಆಯಿತು. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದರಿಂದ ಅನೇಕ ತಿಂಗಳ ಕಾಲ ಶೂಟಿಂಗ್ (The Devil Movie Shooting) ಸ್ಥಗಿತಕೊಂಡಿತ್ತು. ಆದರೆ ಇತ್ತೀಚೆಗೆ ಅವರು ಮೈಸೂರಿನಲ್ಲಿ ಮತ್ತೆ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಈಗ ಮತ್ತೊಂದು ಹಂತದ ಶೂಟಿಂಗ್ ಬಗ್ಗೆ ‘ದಿ ಡೆವಿಲ್’ ಸಿನಿಮಾ ತಂಡ ಮಾಹಿತಿ ಹಂಚಿಕೊಂಡಿದೆ.

‘ದಿ ಡೆವಿಲ್’ ಸಿನಿಮಾದ ಶೂಟಿಂಗ್ ಬಿರುಸಿನಿಂದ ಸಾಗುತ್ತಿರುವುದಕ್ಕೆ ಅಭಿಮಾನಿಗಳಿಗೆ ಖುಷಿ ಆಗಿದೆ. ‘ಶ್ರೀ ಜೈ ಮಾತಾ ಕಂಬೈನ್ಸ್’ ಮೂಲಕ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಪ್ರಕಾಶ್ ವೀರ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕಾಗಿ ರಾಜಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ, ಮಾತಿನ ಭಾಗದ ಶೂಟಿಂಗ್ ನಡೆಯುತ್ತಿದೆ. ದರ್ಶನ್ ಜೊತೆ ರಚನಾ ರೈ, ಅಚ್ಯುತ್ ಕುಮಾರ್, ಮಹೇಶ್ ಮಂಜ್ರೇಕರ್ ಸೇರಿದಂತೆ ಅನೇಕ ಕಲಾವಿದರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ.

ಈ ಸಿನಿಮಾದಲ್ಲಿ ದರ್ಶನ್ ಅವರಿಗೆ ಜೋಡಿಯಾಗಿ ರಚನಾ ರೈ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ತುಳಸಿ, ಮಹೇಶ್ ಮಂಜ್ರೇಕರ್, ಶ್ರೀನಿವಾಸ್ ಪ್ರಭು , ಶೋಭರಾಜ್ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಸುಧಾಕರ್ ಎಸ್. ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಬಿ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಮೋಹನ್ ಬಿ. ಕೆರೆ ಅವರ ಕಲಾ ನಿರ್ದೇಶನ, ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ದರ್ಶನ್ ಪೂಜೆ ಮಾಡಿಸಿದ ಕೇರಳದ ಭಗವತಿ ದೇವಾಲಯದ ಮಹತ್ವವೇನು?

ದರ್ಶನ್ ಅವರಿಗೆ ಬೆನ್ನು ನೋವು ಇದೆ. ಹಾಗಾಗಿ ಮೊದಲಿನಂತೆ ಆ್ಯಕ್ಷನ್ ಸನ್ನಿವೇಶಗಳ ಶೂಟಿಂಗ್ ಮಾಡುವುದು ಕಷ್ಟ. ಆ ಕಾರಣದಿಂದ ಸದ್ಯಕ್ಕೆ ಮಾತಿನ ಭಾಗದ ಚಿತ್ರೀಕರಣವನ್ನು ಮುಗಿಸಿಕೊಳ್ಳಲಾಗುತ್ತಿದೆ. ದರ್ಶನ್ ಅವರು ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರ ನಡುವೆಯೂ ಅವರು ಚಿತ್ರೀಕರಣಕ್ಕೆ ಸಮಯ ನೀಡುತ್ತಿದ್ದಾರೆ. ‘ದಿ ಡೆವಿಲ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.