ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ನಟ ದರ್ಶನ್ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅವರಿಗೆ ಅಗತ್ಯವಿರುವ ಶಸ್ತ್ರಚಿಕಿತ್ಸೆ ಇನ್ನೂ ಆಗಿಲ್ಲ. ಹೈಕೋರ್ಟ್ ನೀಡಿದ ಆರು ವಾರಗಳ ಗಡುವಿಗೆ ಇನ್ನು ನಾಲ್ಕು ವಾರಗಳು ಬಾಕಿ ಇವೆ.

ನಿಜಕ್ಕೂ ದರ್ಶನ್​ಗೆ ಆಪರೇಷನ್‌ ಅವಶ್ಯಕತೆ ಇದೆಯೇ? 12 ದಿನ ಕಳೆದರೂ ನಡೆದಿಲ್ಲ ಶಸ್ತ್ರಚಿಕಿತ್ಸೆ
ದರ್ಶನ್
Follow us
Kiran HV
| Updated By: ರಾಜೇಶ್ ದುಗ್ಗುಮನೆ

Updated on: Nov 11, 2024 | 10:32 AM

ನಟ ದರ್ಶನ್ ಅವರು ಜಾಮೀನು ಪಡೆದು ಎರಡು ವಾರ ಕಳೆಯುತ್ತಾ ಬಂದಿದೆ. ಅದಾದ ಬಳಿಕ ದರ್ಶನ್ ಅವರು ಆಸ್ಪತ್ರೆ ಸೇರಿದ್ದಾರೆ. ದರ್ಶನ್​ಗೆ ಆಪರಷೇನ್ ಅಗತ್ಯ ಇದೆ ಎಂದು ವಕೀಲರು ಬಲವಾಗಿ ವಾದಿಸಿದ್ದರು. ಆದರೆ, ಈವರೆಗೆ ದರ್ಶನ್ ಆಪರೇಷನ್ ಮಾಡಿಸಿಕೊಂಡಿಲ್ಲ. ಇದು ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ದರ್ಶನ್ ಅವರನ್ನು ಬಳ್ಳಾರಿಯ ಜೈಲಿನಲ್ಲಿ ಇಡಲಾಗಿತ್ತು. ಅಲ್ಲಿ ಅವರಿಗೆ ತೀವ್ರ ಬೆನ್ನು ನೋವು ಕಾಡಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆ ವೈದ್ಯರು, ದರ್ಶನ್‌ಗೆ ಅಪರೇಷನ್ ಅವಶ್ಯಕತೆ ಎಂದು ವರದಿ ನೀಡಿದ್ದರು. ಈ ವರದಿಯನ್ನೇ ಆಧರಿಸಿ ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು. ದರ್ಶನ್​ಗೆ ಶಸ್ತ್ರಚಿಕಿತ್ಸೆಗೆ ಅವಕಾಶ ನೀಡಬೇಕು ಎಂದಿದ್ದರು. ಅಂತೆಯೇ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಇದುವರೆಗೂ ದರ್ಶನ್‌ಅಪರೇಷನ್ ಮಾಡಿಸಿಕೊಂಡಿಲ್ಲ.

ಸದ್ಯ ಆಸ್ಪತ್ರೆಯಲ್ಲಿ ದರ್ಶನ್‌ಗೆ ಚಿಕಿತ್ಸೆ ಮುಂದುವರಿದಿದೆ. ದರ್ಶನ್‌ ಫಿಸಿಯೋ ಥೆರೆಪಿ ಮಾಡಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಇದಲ್ಲದೆ, ಆಸ್ಪತ್ರೆಯಲ್ಲಿ ಸ್ಕ್ಯಾನ್ ಕೂಡ ಮಾಡಿಸಿದ್ದಾರೆ. ಈ ವಿಚಾರದ ಕುರಿತು ಸಾಮಾಜಿಕ ವಲಯದಲ್ಲಿ ಚರ್ಚೆ ಆಗುತ್ತಿದೆ.

ಕರ್ನಾಟಕ ಹೈಕೋರ್ಟ್​ ದರ್ಶನ್​​ಗೆ ನೀಡಿರುವುದು ಕೇವಲ ಆರು ವಾರಗಳ ಗಡುವು ಮಾತ್ರ. ಈಗಾಗಲೇ ಅದರಲ್ಲಿ ಎರಡು ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಒಂದೊಮ್ಮೆ ಕೊನೆಯ ಹಂತದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರೆ ವಿಶ್ರಾಂತಿಗಾಗಿ ದರ್ಶನ್ ಕೋರ್ಟ್ ಬಳಿ ಮತ್ತಷ್ಟು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ‘ದರ್ಶನ್​ಗೆ ಸರ್ಜರಿ ಇಷ್ಟ ಇಲ್ಲ’: ಕಾರಣ ತಿಳಿಸಿದ ಸುಮಲತಾ ಅಂಬರೀಷ್

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಜೂನ್ 11ರಂದು ಬಂಧಿತರಾದರು. ಸುಮಾರು 130 ದಿನಗಳ ಕಾಲ ಅವರು ಜೈಲಿನಲ್ಲೇ ಇದ್ದರು. ಅವರ ಜಾಮೀನು ಅರ್ಜಿ ಕೆಳ ಹಂತದ ಕೋರ್ಟ್​ನಲ್ಲಿ ರದ್ದಾಗಿತ್ತು. ಹೀಗಾಗಿ, ಹೈಕೋರ್ಟ್ ಮೊರೆ ಹೋಗಿದ್ದ ದರ್ಶನ್​, ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.

ಇತ್ತೀಚೆಗೆ ಸುಮಲತಾ ಅವರು ದರ್ಶನ್ ಬಗ್ಗೆ ಮಾತನಾಡಿದ್ದರು. ‘ದರ್ಶನ್​ಗೆ ಬೆನ್ನು ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಳ್ಪಟ್ಟೆ. ಸರ್ಜರಿ ಮಾಡಿದರೆ ರಿಕವರಿ ಸಾಕಷ್ಟು ಸಮಯ ಬೇಕಾಗುತ್ತದೆ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ