AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ತೋರಿದ ಸ್ಯಾಂಡಲ್​ವುಡ್​ ಸ್ಟಾರ್ಸ್: ಯಾರ್ಯಾರು ಏನಂದ್ರು?

ಚಿತ್ರರಂಗದವರು ಕರ್ನಾಟಕದ ಪರ ಧ್ವನಿ ಎತ್ತುವುದಿಲ್ಲ ಎಂದು ಅನೇಕರು ಆರೋಪಿಸಿದ್ದಿದೆ. ಆದರೆ, ನಾಡು, ನುಡಿ, ನೀರಿನ ವಿಚಾರ ಬಂದಾಗ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದಾರೆ. ಅದೇ ರೀತಿ, ಕಾವೇರಿ ವಿಚಾರದಲ್ಲಿ ಹಲವು ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈ ವಿವಾದ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಒಗ್ಗಟ್ಟು ತೋರಿದ ಸ್ಯಾಂಡಲ್​ವುಡ್​ ಸ್ಟಾರ್ಸ್: ಯಾರ್ಯಾರು ಏನಂದ್ರು?
ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು
Follow us
ರಾಜೇಶ್ ದುಗ್ಗುಮನೆ
|

Updated on: Sep 21, 2023 | 11:11 AM

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಮಧ್ಯೆ ಮೊದಲಿನಿಂದಲೂ ವಿವಾದ ಆಗುತ್ತಲೇ ಬರುತ್ತಿದೆ. ಕರ್ನಾಟಕದಲ್ಲೇ ಸರಿಯಾದ ರೀತಿಯಲ್ಲಿ ಮಳೆ ಆಗುತ್ತಿಲ್ಲ. ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಲು ಆದೇಶ ಬಂದಿರುವುದು ಕರ್ನಾಟಕದವರ ಕೋಪಕ್ಕೆ ಕಾರಣ ಆಗಿದೆ. ಮಂಡ್ಯ ಭಾಗದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಸ್ಯಾಂಡಲ್​ವುಡ್​ನ (Sandalwood) ಅನೇಕರು ಧ್ವನಿ ಎತ್ತಿದ್ದಾರೆ.

ಚಿತ್ರರಂಗದವರು ಕರ್ನಾಟಕದ ಪರ ಧ್ವನಿ ಎತ್ತುವುದಿಲ್ಲ ಎಂದು ಅನೇಕರು ಆರೋಪಿಸಿದ್ದಿದೆ. ಆದರೆ, ನಾಡು, ನುಡಿ, ನೀರಿನ ವಿಚಾರ ಬಂದಾಗ ಅನೇಕ ಸೆಲೆಬ್ರಿಟಿಗಳು ಧ್ವನಿ ಎತ್ತಿದ್ದಾರೆ. ಅದೇ ರೀತಿ, ಕಾವೇರಿ ವಿಚಾರದಲ್ಲಿ ಹಲವು ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈ ವಿವಾದ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸುದೀಪ್ ಟ್ವೀಟ್

‘ಸ್ನೇಹಿತರೆ ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಶಿವಣ್ಣ ಮಾತು

‘ರೈತ ದೇಶದ ಬೆನ್ನೆಲುಬು. ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಮಳೆ ಕಡಿಮೆ ಆಗಿದೆ. ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಎರಡೂ ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಬಗ್ಗೆ ಒಳ್ಳೆಯ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಶಿವರಾಜ್​ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆ ಬಳಿಕ ಕಾವೇರಿ ಪರ ಆನ್​ಲೈನ್ ಬೆಂಬಲ; ವ್ಯಕ್ತಪಡಿಸಲಾರಂಭಿಸಿದ ನಟರು

ದುನಿಯಾ ವಿಜಯ್

‘ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು. ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ. ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ’ ಎಂದಿದ್ದಾರೆ ದುನಿಯಾ ವಿಜಯ್.

ಉಪೇಂದ್ರ

‘ಈಗಾಗಲೇ ಸರಿಯಾಗಿ ಮಳೆಯಾಗದೇ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ’ ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.

ದರ್ಶನ್

‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ