ಬೆಂಗಳೂರಿನ ಆಸ್ಪತ್ರೆಯಲ್ಲಿ ದರ್ಶನ್​ಗೆ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ? ಇಲ್ಲಿದೆ ಫೋಟೋ

ದರ್ಶನ್ ಅವರು ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದರು. ಸದ್ಯ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಆಸ್ಪತ್ರೆಯಲ್ಲಿ ದರ್ಶನ್​ಗೆ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ? ಇಲ್ಲಿದೆ ಫೋಟೋ
ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Dec 02, 2024 | 8:32 AM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆದರು. ಅವರು ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದರು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಈಗ ಅವರಿಗೆ ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಟಿವಿ9 ಕನ್ನಡಕ್ಕೆ ಸಿಕ್ಕಿದೆ. ಆ ಬಗ್ಗೆ ಈ ಸ್ಟೋರಿಯಲ್ಲಿ ಮಾಹಿತಿ ಇದೆ.

ದರ್ಶನ್ ಅವರು ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದರು. ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಯಿತು. ಹೀಗಾಗಿ, ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್​ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಸದ್ಯ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಜಿಎಸ್​ನ ವಿಶೇಷ ಕೋಣೆಯಲ್ಲಿ ದರ್ಶನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಅಧಿಕ ರಕ್ತದೊತ್ತಡ ಇರುವ ಕಾರಣ ದರ್ಶನ್​ಗೆ ಇನ್ನೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ ಎಂದು ವೈದ್ಯರ ವರದಿ ಹೇಳಿದೆ. ಈಗ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಿಕ್ಕಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ; ಶಸ್ತ್ರ ಚಿಕಿತ್ಸೆ ವಿಳಂಬಕ್ಕೆ ಸಿಕ್ತು ಕಾರಣ

ಸದ್ಯ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ದರ್ಶನ್ ಅವರ ಪರ ವಕೀಲರು ಕೊಲೆಯಲ್ಲಿ ದರ್ಶನ್ ಭಾಗಿತ್ವ ಇಲ್ಲ ಎಂದು ವಾದ ಮಂಡಿಸುತ್ತಾ ಇದ್ದಾರೆ. ಡಿಸೆಂಬರ್ 3ಕ್ಕೆ ಅರ್ಜಿ ವಿಚಾರಣೆ ಮುಂದೂಡಲ್ಪಟ್ಟಿದೆ. ಸರ್ಕಾರಿ ಪರ ವಕೀಲರು ವಾದ ಮಂಡನೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.