ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ದರ್ಶನ್ ಎಲ್ಲಿಯೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. ಆಗೊಮ್ಮೆ ಈಗೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುವುದರ ಹೊರತಾಗಿ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಕಾಣಿಸಿಕೊಂಡಿಲ್ಲ. ‘ಕಾಟೇರ’ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆದರೆ ಇದೀಗ ತಮ್ಮ ಆಪ್ತನಿಗಾಗಿ ಮತ್ತೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ದರ್ಶನ್.
ದರ್ಶನ್ ಆಪ್ತ ಧನ್ವೀರ್ ನಟಿಸಿರುವ ‘ವಾಮನ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟ ದರ್ಶನ್ ಭಾಗವಹಿಸಲಿದ್ದಾರೆ. ಮಾರ್ಚ್ 27 ರಂದು ಪ್ರಸನ್ನ ಚಿತ್ರಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಟ ದರ್ಶನ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗಿ ಆಗಲಿದ್ದಾರೆ. ಭಾರಿ ಸಂಖ್ಯೆಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
‘ಕಾಟೇರ’ ಸಿನಿಮಾದ ಸಕ್ಸಸ್ ಮೀಟ್ನ ಬಳಿಕ ಇದೇ ಮೊದಲ ಬಾರಿಗೆ ನಟ ದರ್ಶನ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ‘ಕಾಟೇರ’ ಸಕ್ಸಸ್ ಮೀಟ್ನಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಮಾತನಾಡಿದ್ದರು. ಅದಾದ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದರು ನಟ ದರ್ಶನ್. ಜೈಲಿನಿಂದ ಹೊರಬಂದ ಬಳಿಕ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿರುವ ‘ರಾಯಲ್’ ಸಿನಿಮಾ ವೀಕ್ಷಿಸಿದ್ದರು. ಅದಾದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ಅಂದು ದರ್ಶನ್ ಏನು ಮಾತನಾಡಲಿದ್ದಾರೆ ಎಂಬುದು ಸಹ ಕುತೂಹಲ ಕೆರಳಿಸಿದೆ.
ಇದನ್ನೂ ಓದಿ:ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನ ಸೇರುತ್ತಾರೆ, ಆತ್ಮರಕ್ಷಣೆಗಾಗಿ ಗನ್ ಬೇಕು: ದರ್ಶನ್ ತೂಗುದೀಪ
ನಟ ಧನ್ವೀರ್, ದರ್ಶನ್ರ ಆಪ್ತರಾಗಿದ್ದು, ದರ್ಶನ್ ಜೈಲಿಗೆ ಹೋದಾಗಿನಿಂದಲೂ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗಲೂ ಸಹ ಕುಟುಂಬದ ಸದಸ್ಯರ ಹೊರತಾಗಿ ಧನ್ವೀರ್ ಅವರನ್ನು ಮಾತ್ರವೇ ದರ್ಶನ್ ಭೇಟಿ ಆಗಿದ್ದರು. ಜೈಲಿನಿಂದ ಹೊರಬಂದ ಬಳಿಕವೂ ಸಹ ಧನ್ವೀರ್, ದರ್ಶನ್ ಅವರ ಜೊತೆಗೇ ಇದ್ದು ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ಹಾಗಾಗಿ ಆ ಋಣಸಂದಾಯಕ್ಕಾಗಿ ನಟ ದರ್ಶನ್ ಅವರು, ಇದೀಗ ಧನ್ವೀರ್ನ ಹೊಸ ಸಿನಿಮಾದ ಪ್ರಚಾರ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಮಾರ್ಚ್ 27 ರಂದು ಸಂಜೆ 4 ಗಂಟೆಗೆ ಪ್ರಸನ್ನ ಚಿತ್ರಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ