ಹೊಸ ಸಿನಿಮಾ ಆರಂಭಕ್ಕೆ ಮುನ್ನ ತಿರುಪತಿಗೆ ಭೇಟಿಕೊಟ್ಟ ದರ್ಶನ್

Darshan: ‘ಡೆವಿಲ್’ ಸಿನಿಮಾದ ಆರಂಭಕ್ಕೂ ಮುನ್ನ ನಟ ದರ್ಶನ್ ತಿರುಪತಿಗೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಅವರ ಕೆಲವು ಗೆಳೆಯರು ಸಹ ಜೊತೆಯಲ್ಲಿದ್ದರು.

ಹೊಸ ಸಿನಿಮಾ ಆರಂಭಕ್ಕೆ ಮುನ್ನ ತಿರುಪತಿಗೆ ಭೇಟಿಕೊಟ್ಟ ದರ್ಶನ್
Follow us
ಮಂಜುನಾಥ ಸಿ.
|

Updated on: Feb 09, 2024 | 3:32 PM

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಇನ್ನೂ ಕೆಲವು ಕಡೆಗಳಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ದರ್ಶನ್​ ವೃತ್ತಿ ಜೀವನದಲ್ಲಿಯೇ ‘ಕಾಟೇರ’ ಅತ್ಯುತ್ತಮ ಸಿನಿಮಾ ಎಂದು ಸಹ ಕೆಲವು ವಿಮರ್ಶಕರು ಹೇಳಿದ್ದಾರೆ. ಸಿನಿಮಾದ ಯಶಸ್ಸನ್ನು ಸಂಭ್ರಮ ಇನ್ನೂ ಮುಗಿದಿಲ್ಲ ಅಷ್ಟರಲ್ಲಿಯೇ ದರ್ಶನ್ ತಮ್ಮ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಕನ್ನಡದ ಜನಪ್ರಿಯ ನಿರ್ದೇಶಕ ಮಿಲನಾ ಪ್ರಕಾಶ್ ಅವರ ಹೊಸ ಸಿನಿಮಾದಲ್ಲಿ ದರ್ಶನ್ ನಟಿಸಲಿದ್ದಾರೆ. ಸಿನಿಮಾದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದ್ದು, ಅದಕ್ಕೆ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನವನ್ನು ದರ್ಶನ್ ಪಡೆದುಕೊಂಡಿದ್ದಾರೆ.

ದರ್ಶನ್ ತಮ್ಮ ಕೆಲವು ಆಪ್ತರೊಟ್ಟಿಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ದೇವರ ದರ್ಶನ, ಆಶೀರ್ವಾದ ಪಡೆದುಕೊಂಡಿದ್ದಾರೆ. ಶಾಸಕ ಸತೀಶ್ ರೆಡ್ಡಿ, ಸಚ್ಚಿದಾನಂದ ಇನ್ನೂ ಕೆಲವು ದರ್ಶನ್​ರ ಆಪ್ತರು ಒಟ್ಟಿಗೆ ತಿರುಪತಿ ಬೆಟ್ಟಕ್ಕೆ ಭೇಟಿ ನೀಡಿದ್ದರು. ‘ರಾಬರ್ಟ್’ ಸಿನಿಮಾದ ಬಿಡುಗಡೆ ವೇಳೆಯಲ್ಲಿಯೂ ಸಹ ನಟ ದರ್ಶನ್ ತಿರುಪತಿಗೆ ಭೇಟಿ ನೀಡಿದ್ದರು. ಈಗ ‘ಡೆವಿಲ್’ ಸಿನಿಮಾ ಆರಂಭಕ್ಕೂ ಮುನ್ನ ತಿರುಪತಿಗೆ ತೆರಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ದರ್ಶನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ದರ್ಶನ್​ರ ಹುಟ್ಟುಹಬ್ಬದಂದು ‘ಡೆವಿಲ್’ ಸಿನಿಮಾದ ಪೋಸ್ಟರ್ ಬಿಡುಗಡೆ ಆಗುವ ಸಾಧ್ಯತೆ ಇದೆ. ‘ಡೆವಿಲ್’ ಸಿನಿಮಾವನ್ನು ಮಿಲನಾ ಪ್ರಕಾಶ್ ನಿರ್ದೇಶನ ಮಾಡಲಿದ್ದಾರೆ. ‘ರಿಷಿ’, ‘ಮಿಲನ’, ‘ಖುಷಿ’, ‘ವಂಶಿ’ ಇನ್ನೂ ಹಲವು ಅತ್ಯುತ್ತಮ ಸಿನಿಮಾಗಳನ್ನು ಕನ್ನಡಕ್ಕೆ ನೀಡಿರುವ ಮಿಲನಾ ಪ್ರಕಾಶ್, ಈ ಹಿಂದೆ ದರ್ಶನ್ ಜೊತೆ ‘ತಾರಕ್’ ಹೆಸರಿನ ಸಿನಿಮಾ ಮಾಡಿದ್ದರು. ಆ ಸಿನಿಮಾ ಹಿಟ್ ಆಗಿತ್ತು.

ಇದನ್ನೂ ಓದಿ:ದರ್ಶನ್​ ನಟನೆಯ ‘ಡೆವಿಲ್​’ ಬಗ್ಗೆ ಹರಡಿದ ಗಾಳಿಸುದ್ದಿಗೆ ನಿರ್ದೇಶಕ ಪ್ರಕಾಶ್​ ವೀರ್​ ಪ್ರತಿಕ್ರಿಯೆ

2017ರಲ್ಲಿ ಬಿಡುಗಡೆ ಆದ ‘ತಾರಕ್’ ಮಿಲನಾ ಪ್ರಕಾಶ್ ಅವರ ಕೊನೆಯ ಸಿನಿಮಾ ಆಗಿತ್ತು. ಅದಾದ ಬಳಿಕ ಪ್ರಕಾಶ್ ಯಾವುದೇ ಸಿನಿಮಾ ನಿರ್ದೇಶನ ಮಾಡಿಲ್ಲ. ಬರೋಬ್ಬರಿ ಏಳು ವರ್ಷದ ದೊಡ್ಡ ಗ್ಯಾಪ್​ನ ಬಳಿಕ ಪ್ರಕಾಶ್ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಸಿನಿಮಾದ ನಾಯಕಿ ಹಾಗೂ ಇನ್ನಿತರೆ ಪಾತ್ರಗಳಿಗೆ ನಟರ ಆಯ್ಕೆ ಚಾಲ್ತಿಯಲ್ಲಿದೆ.

‘ಡೆವಿಲ್’ ಸಿನಿಮಾದ ಬಳಿಕ ದರ್ಶನ್, ಪ್ರೇಮ್​ರ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಪ್ರೇಮ್ ನಿರ್ದೇಶಿಸಲಿರುವ ಆ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್​ನವರು ನಿರ್ಮಾಣ ಮಾಡಲಿದ್ದಾರೆ. ಆ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಆಗಿರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್