AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಿನಿಮೀಯ ರೀತಿಯಲ್ಲಿ ದರ್ಶನ್ ಲಿಂಕ್ ಪತ್ತೆ ಹಚ್ಚಿದ ಪೊಲೀಸರು

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದಾರೆ. ಪವಿತ್ರಾ ಗೌಡಗೆ ಇವರು ಅಶ್ಲೀಲ ಸಂದೇಶ ಹಾಗೂ ಫೋಟೋ ಕಳುಹಿಸುತ್ತಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಅವರ ಸಹಚರರು ರೇಣುಕಾಸ್ವಾಮಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಿನಿಮೀಯ ರೀತಿಯಲ್ಲಿ ದರ್ಶನ್ ಲಿಂಕ್ ಪತ್ತೆ ಹಚ್ಚಿದ ಪೊಲೀಸರು
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Jun 12, 2024 | 9:58 AM

Share

ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದ ಆಳಕ್ಕೆ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರಗೆ ಬರುತ್ತಿವೆ. ಅಸಲಿಗೆ ಈ ಪ್ರರಣದಿಂದ ದರ್ಶನ್ ಅವರು ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿದ್ದರು. ಆದರೇ ಇದೇ ಪ್ಲ್ಯಾನ್ ಉಲ್ಟಾ ಆಗಿತ್ತು. ಹೀಗಾಗಿ, ಅವರು ಸಿಕ್ಕಿ ಬಿದ್ದರು. ಅಷ್ಟಕ್ಕೂ ಅಲ್ಲಾಗಿದ್ದೇನು ಎನ್ನುವ ಬಗ್ಗೆ ಇಲ್ಲಿದೆ ವಿವರ.

ರೇಣುಕಾ ಸ್ವಾಮಿ ಮೃತಪಟ್ಟ ಬಳಿಕ ಶವ ವಿಲೇವಾರಿಯ ಭಯ ಕಾಡಿತು. ಅವರ ಶವವನ್ನು ಹೇಗೆ ಸಾಗಿಸೋದು? ಸಿಕ್ಕಿ ಬಿದ್ದರೆ ಏನು ಕಥೆ ಎನ್ನುವ ಭಯ ದರ್ಶನ್​ಗೆ ಕಾಡಿತ್ತು. ಹೀಗಾಗಿ, ನಾಲ್ವರಿಗೆ ದರ್ಶನ್ ಸರೆಂಡರ್ ಆಗುವಂತೆ ಸೂಚನೆ ನೀಡಿದ್ದ. ಇದಕ್ಕೆ ಪ್ರತಿಯಾಗಿ 30 ಲಕ್ಷ ನೀಡುವುದಾಗಿ ದರ್ಶನ್ ಹೇಳಿದ್ದರು ಎನ್ನಲಾಗಿದೆ. ಫೈನಾನ್ಸ್ ವಿಚಾರಕ್ಕೆ ಕೊಲೆ ಮಾಡಿದ್ದಾಗಿ ಈ ಗ್ಯಾಂಗ್ ಸರೆಂಡರ್ ಆಗಿತ್ತು. ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಒಬ್ಬೊಬ್ಬರದ್ದು ಒಂದೊಂದು ರೀತಿಯ ಹೇಳಿಕೆ ಬಂದಿತ್ತು. ಇದರಿಂದ ಪೊಲೀಸರಿಗೆ ಅನುಮಾನ ಬಂದಿತ್ತು.

ಮೊಬೈಲ್ ಪರಿಶೀಲಿಸಿದಾಗ ಶನಿವಾರ ಇಡೀ ರಾತ್ರಿ ದರ್ಶನ್ ಆ್ಯಂಡ್ ಟೀಮ್​ಗೆ ಕಾಲ್ ಮಾಡಿರೋದು ಬಯಲಾಗಿದೆ. ನಿರಂತರವಾಗಿ ರಾತ್ರಿಯಿಡೀ ಇವರು ದರ್ಶನ್ ಜೊತೆ ಸಂಪರ್ಕದಲ್ಲಿ ಇದ್ದರು. ಆಗ ಪೊಲೀಸರಿಗೆ ಕೊಲೆಯ ಅಸಲಿ ಸೂತ್ರದಾರನ ಬಗ್ಗೆ ಗೊತ್ತಾಗಿದೆ. ಎಲ್ಲವನ್ನೂ ಪರಿಶೀಲಿಸಿದಾಗ ದರ್ಶನ್ ಹೆಸರು ಹೊರಬಿದ್ದಿದೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಶವ ಎಸೆಯಲು 30 ಲಕ್ಷ ಹಣ ಕೊಟ್ಟಿದ್ದ ದರ್ಶನ್

ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಲಾಗಿತ್ತು. ಗುಪ್ತಾಂಗದ ಮೇಲೆ ಒದೆಯಲಾಗಿತ್ತು. ಪವಿತ್ರಾ ಅವರು ಚಪ್ಪಲ್ಲಿಯಲ್ಲಿ ರೇಣುಕಾಸ್ವಾಮಿಗೆ ಹೊಡೆದಿದ್ದರು. ಇನ್ನೊಂದ್ ಸಲ ಈ ರೀತಿಯ ಮೆಸೇಜ್ ಬಂದ್ರೆ ಗತಿ ಕಾಣಿಸ್ತೀನಿ ಅಂತಾ ದರ್ಶನ್ ಆವಾಜ್ ಹಾಕಿದ್ದರು. ಹಲ್ಲೆ ಮಾಡಿದ ಬಳಿಕ ಊಟ ಮತ್ತು ಟ್ಯಾಬ್ಲೆಟ್ ಕೊಡಿಸಿ ಎಂದು ದರ್ಶನ್ ಹೇಳಿದ್ದರು. ಆ ಬಳಿಕ ದರ್ಶನ್ ಶಿಷ್ಯರಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಪವನ್, ರಘು, ಕಾರ್ತಿಕ್ ಸೇರಿದಂತೆ ಹಲವರಿಂದ ಹಲ್ಲೆ ನಡೆದಿದೆ. ಈ ವೇಳೆ ರೇಣುಕಾ ಸ್ವಾಮಿ ಮೃತಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ