AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು.

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್
ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್
Ramesha M
| Edited By: |

Updated on: Sep 09, 2024 | 11:32 AM

Share

ನಟ ದರ್ಶನ್ ಅವರ ವಿರುದ್ಧ ಕೋರ್ಟ್​ಗೆ ಸಲ್ಲಿಕೆ ಆದ ಚಾರ್ಜ್​ಶೀಟ್​ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ದರ್ಶನ್ ಅವರ ಕ್ರೌರ್ಯ ಯಾವ ರೀತಿಯಲ್ಲಿ ಇತ್ತು ಎಂಬದನ್ನು ವಿವರಿಸಲಾಗುತ್ತಿದೆ. ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಆಗಿದೆ. ಚಾರ್ಜ್​ಶೀಟ್​ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು. ಇವುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿ ಎಂದು ದರ್ಶನ್ ಕೋರಿದ್ದಾರೆ.

ಸದ್ಯ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್​ಶೀಟ್​​​​ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇತ್ತೀಚೆಗೆ ದರ್ಶನ್ ಅವರು ಇರೋ ಸೆಲ್​ಗೆ ಟಿವಿ ಬಂದಿದೆ. ಅವರು ಟಿವಿಗಾಗಿ ಬೇಡಿಕೆ ಇಟ್ಟಿದ್ದರು. ಜೈಲಿನ ನಿಯಮದಂತೆ ಅವರಿಗೆ ಟಿವಿ ನೀಡಲಾಗಿದೆ. ಟಿವಿ ವೀಕ್ಷಣೆ ಬಳಿಕ ಅವರು ಈ ನಿರ್ಧಾರ ತೆಗೆದುಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ದರ್ಶನ್​ನ ಪೆರೋಲ್​ ಮೇಲೆ ಹೊರತರಲು ನಡೆದಿದೆ ಪ್ಲ್ಯಾನ್; ಉದ್ದೇಶ ಏನು?

ದರ್ಶನ್ ಅವರು ರೇಣುಕಾಸ್ವಾಮಿಗೆ ಮಾಂಸದ ಊಟ ತಿನ್ನಿಸಿದ್ದು, ಎದೆಗೆ ಒದ್ದಿದ್ದು, ಖಾಸಗಿ ಭಾಗಕ್ಕೆ ಒದ್ದಿದ್ದರ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ಈ ಎಲ್ಲಾ ವಿಚಾರಗಳು ದರ್ಶನ್​ ಚಿಂತೆ ಹೆಚ್ಚಿಸಿವೆ. ಈ ಕಾರಣದಿಂದಲೇ ದರ್ಶನ್ ಅವರು ನಿರ್ಬಂಧಕ್ಕಾಗಿ ಕೋರಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.