ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ.

ದರ್ಶನ್ ಕೇಸ್​ನ ಬೆಳವಣಿಗೆಗಳನ್ನು ನೋಡಿ ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ
ವಿಜಯಲಕ್ಷ್ಮಿ
Follow us
ರಾಜೇಶ್ ದುಗ್ಗುಮನೆ
|

Updated on:Jun 13, 2024 | 2:12 PM

ನಟ ದರ್ಶನ್ (Darshan) ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಇವರು ಪ್ರಮುಖ ಆರೋಪಿ ಆಗಿದ್ದಾರೆ. ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆಗಿದ್ದಾರೆ. ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಈ ಪ್ರಕರಣದಿಂದ ವಿಜಯಲಕ್ಷ್ಮಿ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಆ್ಯಕ್ಟೀವೇಟ್ ಮಾಡಿದ್ದಾರೆ.

ಈ ರೀತಿ ಘಟನೆಗಳು ನಡೆದಾಗ ಸಹಜವಾಗಿಯೇ ಅಭಿಮಾನಿಗಳು ವಿಜಯಲಕ್ಷ್ಮಿ ಅವರಿಗೆ ಮೆಸೇಜ್ ಮಾಡುತ್ತಾರೆ. ಸಾಕಷ್ಟು ವದಂತಿಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಕಣ್ಣೆದುರು ಕಾಣುತ್ತದೆ. ಇದೆಲ್ಲವೂ ಮತ್ತಷ್ಟು ಚುಚ್ಚುತ್ತದೆ. ಈ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಫಿಲ್ಮ್​ ಚೇಂಬರ್​ನಲ್ಲಿಂದು ಮಹತ್ವದ ಸಭೆ; ನಿರ್ಧಾರವಾಗಲಿದೆ ದರ್ಶನ್ ಸಿನಿ ಭವಿಷ್ಯ

ದರ್ಶನ್ ಅರೆಸ್ಟ್ ಆದ ಬಳಿಕ ಮೊದಲು ಪ್ರಾಫೈಲ್ ಪಿಕ್ಚರ್​ನ ವಿಜಯಲಕ್ಷ್ಮಿ ಅವರು ತೆಗೆದಿದ್ದರು. ಆ ಬಳಿಕ ದುಬೈ ಟ್ರಿಪ್ ತೆರಳಿದ ಫೋಟೋಗಳನ್ನು ಅವರು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ದುಬೈಗೆ ತೆರಳಿದ್ದ ದರ್ಶನ್ ಹಾಗೂ ವಿಜಯಲಕ್ಷ್ಮಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:08 pm, Thu, 13 June 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್