ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್

ಪೊಲೀಸ್​ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ಒಂದು ಪ್ರಮುಖ ಪ್ರಕ್ರಿಯೆ ಮುಗಿಯಬೇಕಿದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
ಬಳ್ಳಾರಿ ಜೈಲಿ​ಗೆ ದರ್ಶನ್ ಶಿಫ್ಟ್​ ಆಗುವುದರಿಂದ ವಿಜಯಲಕ್ಷ್ಮೀಗೆ ಟೆನ್ಷನ್
Follow us
ರಾಜೇಶ್ ದುಗ್ಗುಮನೆ
|

Updated on: Aug 28, 2024 | 7:24 AM

ದರ್ಶನ್ ಅವರು ಇನ್ನು ಕೆಲವೇ ಗಂಟೆಗಳಲ್ಲಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಾರೆ. ಬೆಂಗಳೂರಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿರುವುದರಿಂದ ಈ ರೀತಿ ಮಾಡಲಾಗುತ್ತಿದೆ. ದರ್ಶನ್ ಅವರು ಬಳ್ಳಾರಿಗೆ ಶಿಫ್ಟ್ ಆಗುತ್ತಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮೀಗೆ ಟೆನ್ಷನ್ ಶುರುವಾಗಿದೆ. ಅವರು ಪತಿಯನ್ನು ನೋಡಬೇಕು ಎಂದರೆ 300 ಕಿ.ಮೀ ಪ್ರಯಾಣ ಮಾಡಬೇಕು. ಪ್ರತಿವಾರ ಪ್ರಯಾಣ ಮಾಡೋದು ಕಷ್ಟ ಆಗಬಹುದು.

ಅರೆಸ್ಟ್ ಆದಾಗಿನಿಂದ ದರ್ಶನ್ ಅವರನ್ನು ವಿಜಯಲಕ್ಷ್ಮೀ ಈವರೆಗೆ 8ಕ್ಕೂ ಹೆಚ್ಚುಬಾರಿ ಭೇಟಿ ಮಾಡಿ ಬಂದಿದ್ದಾರೆ. ಅವರ ಜೊತೆ ಮಗ ವಿನೀಶ್ ಕೂಡ ಇರುತ್ತಿದ್ದರು. ಇವರ ಜೊತೆ ಇತರ ಸೆಲೆಬ್ರಿಟಿಗಳು ಕೂಡ ಆಗಮಿಸಿದ್ದು ಇದೆ. ಈಗ ವಿಜಯಲಕ್ಷ್ಮೀ ಅವರು ದರ್ಶನ್​ನ ಭೇಟಿ ಮಾಡಬೇಕು ಎಂದರೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರಳಬೇಕು.

ದರ್ಶನ್ ಅವರು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೊತೆ ಆಪ್ತತೆ ಬೆಳೆಸಿಕೊಂಡಿದ್ದರು. ಅವರಿಂದ ಸಾಕಷ್ಟು ಸವಲತ್ತುಗಳನ್ನು ದರ್ಶನ್ ಪಡೆದುಕೊಂಡಿದ್ದರು. ಇದು ಬೆಳಕಿಗೆ ಬಂದ ಬೆನ್ನಲ್ಲೇ ತನಿಖೆ ಆರಂಭ ಆಗಿದೆ. ದರ್ಶನ್ ಗ್ಯಾಂಗ್​ನ ಒಡೆಯಲಾಗಿದೆ. ಇದು ದರ್ಶನ್ ಅವರನ್ನು ಮತ್ತಷ್ಟು ಕುಗ್ಗಿಸಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇನ್ನು, ದರ್ಶನ್ ಅವರು ಮನೆ ಊಟಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಅವರು ಜೈಲಿನಲ್ಲಿ ಊಟವನ್ನು ಹೊರಗಿನಿಂದ ತರಿಸಿಕೊಳ್ಳುತ್ತಿದ್ದರು ಎನ್ನುವ ವಿಚಾರ ಬಯಲಾಗಿರುವುದರಿಂದ ಕೋರ್ಟ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ತಮ್ಮದೇ ಸಿನಿಮಾ ಶೂಟ್ ಮಾಡಿದ ಜೈಲಿಗೆ ದರ್ಶನ್; ಮುಗಿಯಬೇಕಿದೆ ಪ್ರಮುಖ ಪ್ರಕ್ರಿಯೆ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ. ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಸ್ಥಳಾಂತರ ಆಗಲಿದ್ದಾರೆ. ಶಿವಮೊಗ್ಗ ಜೈಲಿಗೆ ಜಗದೀಶ್​, ಧಾರವಾಡ ಜೈಲಿಗೆ ಧನರಾಜ್​ ಶಿಫ್ಟ್ ಆಗಲಿದ್ದಾರೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಆಗಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್