ಮಧ್ಯಂತರ ಜಾಮೀನು: ಹಲವು ವಿಷಯ ಬಿಚ್ಚಿಟ್ಟ ದರ್ಶನ್ ಪರ ವಕೀಲ

Darshan Thoogudeepa: ದರ್ಶನ್ ತೂಗುದೀಪಗೆ ಮಧ್ಯಂತರ ಜಾಮೀನು ದೊರೆತಿದೆ. ಆರು ವಾರಗಳ ಕಾಲವಷ್ಟೆ ಜಾಮೀನಿನ ಅವಧಿ ಇರಲಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರ ತಂಡದ ಸುನಿಲ್ ಟಿವಿ9 ಜೊತೆ ಮಾತನಾಡಿ, ವಿವರ ಮತ್ತು ಮುಂದಿನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಧ್ಯಂತರ ಜಾಮೀನು: ಹಲವು ವಿಷಯ ಬಿಚ್ಚಿಟ್ಟ ದರ್ಶನ್ ಪರ ವಕೀಲ
Follow us
|

Updated on: Oct 30, 2024 | 11:56 AM

ದರ್ಶನ್​ಗೆ ಕೊನೆಗೂ ಜಾಮೀನು ದೊರೆತಿದೆ. ಆದರೆ ಈಗ ಕೇವಲ ಆರು ವಾರಗಳ ಮಧ್ಯಂತರ ಜಾಮೀನು ಲಭ್ಯವಾಗಿದೆ. ದರ್ಶನ್​ಗೆ ಜಾಮೀನು ಲಭ್ಯವಾದ ಬೆನ್ನಲ್ಲೆ ದರ್ಶನ್ ಪರ ವಕೀಲರ ತಂಡದ ಸುನಿಲ್ ಅವರು ಟಿವಿ9 ಜೊತೆ ಮಾತನಾಡಿದ್ದು, ಪ್ರಕರಣದ ಬಗ್ಗೆ ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ದರ್ಶನ್​ಗೆ ಇರುವ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಮಾನ್ಯ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಎಲ್ಲ ಕಾನೂನು ಪ್ರಕ್ರಿಯೆಗಳು ಇಂದೇ ಮುಗಿದು ಇಂದೇ ದರ್ಶನ್ ಜೈಲಿನಿಂದ ಹೊರಬರುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ ಸುನಿಲ್.

‘ನಾವು, ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದ್ದೆವು. ದರ್ಶನ್ ಅವರಿಗೆ ಬೆನ್ನು ಹುರಿಯಲ್ಲಿ ಸಮಸ್ಯೆ ಇದೆ. ಅವರ ಎಲ್​5 ಮತ್ತು ಎಸ್​1 ಅಲ್ಲಿ ಸಮಸ್ಯೆಯಿದ್ದು ಸೂಕ್ತ ಚಿಕಿತ್ಸೆ ತುರ್ತು ಅಗತ್ಯವಿದೆ. ದರ್ಶನ್​ಗೆ ಈ ಸಮಸ್ಯೆ ಈಗ ಬಂದಿದ್ದಲ್ಲ, ಅಥವಾ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ಬಂದಿದ್ದಲ್ಲ, ಅವರಿಗೆ ಈ ಸಮಸ್ಯೆ 2022-23 ರಿಂದಲೂ ಇದೆ. ಅದಕ್ಕೆ ಅವರು ಚಿಕಿತ್ಸೆ ಪಡೆದಿದ್ದರು ಆದರೆ ಅದು ಸರಿ ಹೋಗಿರಲಿಲ್ಲ. ಅದರ ವರದಿಗಳನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಸಿದ್ದೆವು’ ಎಂದಿದ್ದಾರೆ ವಕೀಲ ಸುನಿಲ್.

ಇದನ್ನೂ ಓದಿ:ದರ್ಶನ್​ಗೆ ಮಧ್ಯಂತರ ಜಾಮೀನು; ಪತ್ನಿ ವಿಜಯಲಕ್ಷ್ಮೀ ರಿಯಾಕ್ಷನ್ ಏನು?

ಈಗ ದರ್ಶನ್​ರನ್ನು ತಪಾಸಣೆ ಮಾಡಿರುವ ವೈದ್ಯರು ಸಹ ಮುಚ್ಚಿದ ಲಕೋಟೆಯನ್ನು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅದನ್ನೆಲ್ಲ ಪರಿಗಣಿಸಿ ಈಗ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ. ಇನ್ನು ದರ್ಶನ್ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂಬುದನ್ನು ಅವರು ಮತ್ತು ಅವರ ಕುಟುಂಬದವರು ನಿರ್ಧಾರ ಮಾಡುತ್ತಾರೆ. ಅವರು ನಿರ್ಧಾರ ಮಾಡಿದ ಬಳಿಕ ಅದರ ವಿವರವನ್ನು ನಾವು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದೇವೆ’ ಎಂದು ವೈದ್ಯರು ಹೇಳಿದರು.

ಈಗ ದರ್ಶನ್​ಗೆ ಮಧ್ಯಂತರ ಜಾಮೀನು ಮಾತ್ರವೇ ಮಂಜೂರಾಗಿದೆ. ಆದರೆ ನಿಯಮಿತ ಜಾಮೀನು ಮಂಜೂರಾಗಿಲ್ಲ. ಮಧ್ಯಂತರ ಜಾಮೀನು ಅವಧಿ ಮುಗಿದ ಬಳಿಕ ನಿಯಮಿತ ಜಾಮೀನಿಗೆ ನಾವು ಅರ್ಜಿ ಹಾಕಲಿದ್ದೇವೆ. ಅದು ನಮ್ಮ ಜವಾಬ್ದಾರಿಯಾಗಿದ್ದು, ದರ್ಶನ್​ಗೆ ನಿಯಮಿತ ಜಾಮೀನು ಕೊಡಿಸುವ ಪ್ರಯತ್ನವನ್ನು ನಾವು ಮಾಡಲಿದ್ದೇವೆ’ ಎಂದಿದ್ದಾರೆ ಸುನಿಲ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ
ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ
ಗಣ್ಯರ ಅಗಮನದಿಂದ ಮತ್ತಷ್ಟು ಹೆಚ್ಚಲಿದೆ ನೂಕುನುಗ್ಗಲು, ಪೊಲೀಸರಿಗೆ ಸವಾಲು
ಗಣ್ಯರ ಅಗಮನದಿಂದ ಮತ್ತಷ್ಟು ಹೆಚ್ಚಲಿದೆ ನೂಕುನುಗ್ಗಲು, ಪೊಲೀಸರಿಗೆ ಸವಾಲು
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಹೇಗಿತ್ತು ನೋಡಿ ‘ಟಾಕ್ಸಿಕ್’ ಸೆಟ್​ ಹಾಕಿದ ಪ್ರದೇಶ; ಇಲ್ಲಿದೆ ವಿಡಿಯೋ
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್