AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exclusive: ಸೋದರಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ

ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಸದ್ಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ. ಅದೇ ವೇಳೆ, ಅವರ ಅಳಿಯ ಚಂದು ನಟನೆಯ ಹೊಸ ಚಿತ್ರದ ಲಾಂಚ್​ಗೆ ಸಿದ್ಧತೆ ನಡೆದಿದೆ. ಚಿತ್ರವನ್ನು ದಿನಕರ್ ತುಗದೀಪ್ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಸುದ್ದಿ ಇದೆ.

Exclusive: ಸೋದರಳಿಯ ಚಂದು ಚಿತ್ರಕ್ಕೆ ವಿಲನ್ ಆದ ದರ್ಶನ್; ದಿನಕರ್ ನಿರ್ದೇಶನ
ದರ್ಶನ್-ಚಂದು
ರಾಜೇಶ್ ದುಗ್ಗುಮನೆ
|

Updated on: Jul 25, 2025 | 6:59 AM

Share

ನಟ ದರ್ಶನ್ (Darshan) ಅವರಿಗೆ ಜಾಮೀನು ರದ್ದಾಗುವ ಭಯ ಕಾಡುತ್ತಿದೆ. ಜಾಮೀನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ. ಇತ್ತ ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟಿಂಗ್ ಮುಗಿಸಿ ಕರ್ನಾಟಕಕ್ಕೆ ಇಂದು (ಜುಲೈ 25) ಮರಳಲಿದ್ದಾರೆ. ಹೀಗಿರುವಾಗಲೇ ಸ್ಯಾಂಡಲ್​ವುಡ್ ಅಂಗಳದಲ್ಲಿ ಒಂದು ದೊಡ್ಡ ಬ್ರೇಕಿಂಗ್ ನ್ಯೂಸ್ ಹೊರ ಬಿದ್ದಿದೆ. ದರ್ಶನ್ ಸೋದರಳಿಯ ಚಂದು ಲಾಂಚ್ ಆಗುತ್ತಿದ್ದು, ಇದಕ್ಕೆ ದಿನಕರ್ ತುಗದೀಪ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ ಎನ್ನುತ್ತಿವೆ ಮೂಲಗಳು. ಈ ಚಿತ್ರಕ್ಕೆ ದರ್ಶನ್ ವಿಲನ್ ಅನ್ನೋದು ವಿಶೇಷ.

ದರ್ಶನ್ ಅವರು ಚಂದು ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರತಿ ಹಂತದಲ್ಲಿ ಚಂದುನ ಬೆಂಬಲಿಸುತ್ತಾ ಬರುತ್ತಿದ್ದಾರೆ. ಅನೇಕ ಬಾರಿ ಚಂದು ಕೂಡ ದರ್ಶನ್ ಜೊತೆ ಕಾಣಿಸಿಕೊಂಡಿದ್ದು ಇದೆ. ಅವರು ನಟನೆಯಲ್ಲಿ ಪಳಗಿದ್ದಾರೆ. ಮಂಡ್ಯ ರಮೇಶ್ ಅವರ ‘ನಟನಾ ರಂಗಶಾಲೆ’ಯಲ್ಲಿ ತರಬೇತಿ ಪಡೆದಿದ್ದಾರೆ. ‘ರಾಬರ್ಟ್’ ಹಾಗೂ ‘ಕಾಟೇರ’ ಚಿತ್ರದ ನಿರ್ದೇಶನದ ಡಿಪಾರ್ಟ್​ಮೆಂಟ್​ನಲ್ಲಿ ಅವರು ಕೆಲಸ ಮಾಡಿದ್ದಾರೆ. ಈಗ ಅವರು ಹೀರೋ ಆಗುತ್ತಿದ್ದಾರೆ.

ಇಲ್ಲಿ ಒಂದು ಖುಷಿಯ ವಿಚಾರ ಇದೆ. ದರ್ಶನ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ದರ್ಶನ್ ತಂದೆ ಶ್ರೀನಿವಾಸ ತೂಗುದೀಪ ಅವರು ವಿಲನ್ ಆಗಿಯೇ ಹೆಚ್ಚು ಗುರುತಿಸಿಕೊಂಡವರು. ಆದರೆ, ದರ್ಶನ್ ಅವರು ಹೀರೋ ಆಗಿ ಮಿಂಚಿದವರು. ‘ನವಗ್ರಹ’ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿ ಭೇಷ್ ಎನಿಸಿಕೊಂಡಿದ್ದರು. ‘ಡೆವಿಲ್’ ಸಿನಿಮಾದಲ್ಲೂ ಅವರ ಪಾತ್ರಕ್ಕೆ ನೆಗೆಟಿವ್ ಶೇಡ್ ಇದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಅವರು ವಿಲನ್ ಪಾತ್ರ ಒಪ್ಪಿಕೊಂಡಿರೋದು ಸಾಕಷ್ಟು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ
Image
ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ಅಸಮಾಧಾನ ಹೊರಹಾಕಿದ ಸುಪ್ರೀಂ
Image
ದರ್ಶನ್ ಕೇಸ್​ನಲ್ಲಿ ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
Image
ರಾಮಾಚಾರಿ ಪಾತ್ರ ಕೊನೆ; ಕೊಲೆಯಲ್ಲಿ ಅಂತ್ಯವಾಯ್ತು ಕ್ಯಾರೆಕ್ಟರ್
Image
ಗೌತಮ್-ಭೂಮಿಕಾ ಮಗನಿಗೆ ನಾಮಕರಣ ಶಾಸ್ತ್ರ; ಇಟ್ಟ ಹೆಸರೇನು?

ಇದನ್ನೂ ಓದಿ: ದರ್ಶನ್​ಗೆ​ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ

ಈ ಮೊದಲು ಡೆವಿಲ್ ಸಿನಿಮಾದಲ್ಲೇ ಚಂದು ನಟಿಸಬೇಕಿತ್ತು. ಆದರೆ, ಅವರನ್ನು ಸಿನಿಮಾದಿಂದ ಹೊರಗಿಡಲಾಗಿತ್ತು. ‘ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಆದ್ದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ’ ಎಂದಿದ್ದರು ಅವರು.

ಈ ಸಿನಿಮಾನ ಯಾರು ನಿರ್ಮಾಣ ಮಾಡುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅದು ಕೂಡ ಶೀಘ್ರವೇ ಘೋಷಣೆ ಆಗಲಿದೆ. ಸದ್ಯ ದರ್ಶನ್ ಅವರು ಹೊರಗೆ ಇರಬೇಕೋ ಅಥವಾ ಜೈಲಿನಲ್ಲಿ ಇರಬೇಕೋ ಎಂಬ ವಿಚಾರದಲ್ಲಿ ಕೋರ್ಟ್​​ನಲ್ಲಿ ತೀರ್ಮಾನ ಆಗಲಿದೆ. ಈ ವಿಚಾರಕ್ಕೆ ಸಂಬಂಧಿಸಿ ಇನ್ನೊಂದು 10 ದಿನಗಳಲ್ಲಿ ತೀರ್ಪು ಘೋಷಣೆ ಆಗಲಿದೆ. ಅದನ್ನು ಆಧರಿಸಿ ಈ ಸಿನಿಮಾ ಭವಿಷ್ಯ ನಿಂತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ