ಪರಪ್ಪನ ಅಗ್ರಹಾರದಿಂದ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್​ ಒಪ್ಪಿಗೆ: ದಾಸ ಈಗ ಹೋಗುವುದು ಯಾವ ಜೈಲಿಗೆ?

ತಾನೇ ಮಾಡಿಕೊಂಡ ಎಡವಟ್ಟಿನಿಂದ ನಟ ದರ್ಶನ್​ಗೆ ಸಂಕಷ್ಟ ಹೆಚ್ಚಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೇರೆ ಜೈಲಿಗೆ ಶಿಫ್ಟ್​ ಆಗಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದಾಗಿ ಇನ್ಮುಂದೆ ಕುಟುಂಬದವರನ್ನು ಭೇಟಿಯಾಗುವುದು ಕಷ್ಟವಾಗಲಿದೆ. ಅಲ್ಲದೇ, ಜೈಲುವಾಸ ಇನ್ನಷ್ಟು ಕಟ್ಟುನಿಟ್ಟು ಆಗಲಿದೆ. ಹಾಗಾದ್ರೆ ದರ್ಶನ್​ ಈಗ ಶಿಫ್ಟ್​ ಆಗಲಿರುವುದು ಯಾವ ಜೈಲಿಗೆ? ಇಲ್ಲಿದೆ ಉತ್ತರ..

ಪರಪ್ಪನ ಅಗ್ರಹಾರದಿಂದ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್​ ಒಪ್ಪಿಗೆ: ದಾಸ ಈಗ ಹೋಗುವುದು ಯಾವ ಜೈಲಿಗೆ?
ದರ್ಶನ್​
Follow us
Prajwal Kumar NY
| Updated By: ಮದನ್​ ಕುಮಾರ್​

Updated on: Aug 27, 2024 | 6:54 PM

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್​ಗೆ ರಾಜಾತಿಥ್ಯ ನೀಡಿರುವುದು ಸಾಬೀತಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದರು. ಅದರಂತೆ ಈಗ ದರ್ಶನ್​ ಅವರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವುದು ಖಚಿತ ಆಗಿದೆ. ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ನ್ಯಾಯಾಲಯದ ಅನುಮತಿ ಸಿಕ್ಕಿದೆ. ಈ ಬಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

ದರ್ಶನ್​ ಮಾತ್ರವಲ್ಲದೇ, ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿನ ಎಲ್ಲ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಈ ಬಗ್ಗೆ ಪೊಲೀಸರಿಗೆ ನ್ಯಾಯಾಲಯದಿಂದ ಆದೇಶ ಬಂದಿದೆ. ಆರೋಪಿಗಳ ಸ್ಥಳಾಂತರಕ್ಕೆ ಚೀಫ್ ಸೂರ್ಪಡೆಂಟ್ ಅವರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಆದೇಶ ಸಿಕ್ಕಿರುವುದರಿಂದ ಎಲ್ಲ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ ಆರಂಭಿಸಲಾಗಿದೆ. ದರ್ಶನ್​ ಶಿಫ್ಟ್​ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವ ವ್ಯವಸ್ಥೆ ಇದೆ.

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗಲಿದ್ದು, ಪವನ್ , ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್​ ಆಗಬೇಕಿದೆ. ಜಗದೀಶ್​ಗೆ ಶಿವಮೊಗ್ಗ ಜೈಲು, ಧನರಾಜ್​ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್​ ಸ್ಥಳಾಂತರ ಆಗಬೇಕಿದೆ. ನಾಗರಾಜ್​ ಕಲಬುರಗಿ ಜೈಲು, ಲಕ್ಷ್ಮಣ ಶಿವಮೊಗ್ಗ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್​ ಆಗಲಿದ್ದಾರೆ.

ಇದನ್ನೂ ಓದಿ: ‘ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ’: ಪವಿತ್ರಾ ಗೌಡ ಪರ ವಕೀಲರ ಮನವಿ

ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಮುಂದುವರಿಯಲಿದ್ದಾರೆ. ಜಾಮೀನುಗಾಗಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದು ಆಗಸ್ಟ್​ 28ಕ್ಕೆ ಅದರ ವಿಚಾರಣೆ ಮುಂದಕ್ಕೆ ಹೋಗಿದೆ. ಆರೋಪಿಗಳಾದ ರವಿ, ಕಾರ್ತಿಕ್, ನಿಕಿಲ್, ಕೇಶವಮೂರ್ತಿ ಈಗಾಗಲೇ ತುಮಕೂರು ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ