AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಕೆಲಸ ಪ್ರಾರಂಭ ಮಾಡಿದ ದರ್ಶನ್, ‘ಡೆವಿಲ್’ಗೆ ಡಬ್ಬಿಂಗ್?

Darshan: ದರ್ಶನ್ ತೂಗುದೀಪ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಈ ತಿಂಗಳು ಜನವರಿ 15 ಇಂದ ಚಿತ್ರೀಕರಣ ಪ್ರಾರಂಭ ಆಗಲಿದೆ ಎನ್ನಲಾಗಿತ್ತು. ಆದರೆ ಜನವರಿ 1 ರಂದೇ ‘ಡೆವಿಲ್’ ಸಿನಿಮಾದ ಕೆಲಸ ಶುರು ಮಾಡುತ್ತಿದ್ದಾರೆ ದರ್ಶನ್, ಇದಕ್ಕೆ ಕಾರಣವೂ ಸಹ ಇದೆ. ಏನದು ಕಾರಣ? ಇಲ್ಲಿ ತಿಳಿಯಿರಿ.

ಹೊಸ ವರ್ಷಕ್ಕೆ ಕೆಲಸ ಪ್ರಾರಂಭ ಮಾಡಿದ ದರ್ಶನ್, ‘ಡೆವಿಲ್’ಗೆ ಡಬ್ಬಿಂಗ್?
Devil
ಮಂಜುನಾಥ ಸಿ.
|

Updated on:Jan 01, 2025 | 11:21 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ ಚಿತ್ರೀಕರಣ ಮರು ಆರಂಭ ಆಗಲಿದೆ ಎನ್ನಲಾಗಿತ್ತು. ಆದರೆ ಅದಕ್ಕೆ ಮುಂಚೆಯೇ ಸಿನಿಮಾ ಕೆಲಸ ಪ್ರಾರಂಭಿಸಿದ್ದಾರೆ ನಟ ದರ್ಶನ್.

ದರ್ಶನ್, ಇಂದು (ಜನವರಿ 1) ‘ಡೆವಿಲ್’ ಸಿನಿಮಾದ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ. ದರ್ಶನ್ ಬಂಧನಕ್ಕೆ ಮೊದಲೇ ‘ಡೆವಿಲ್’ ಸಿನಿಮಾದ ಸುಮಾರು 50% ಚಿತ್ರೀಕರಣವನ್ನು ಮುಗಿಸಲಾಗಿತ್ತಂತೆ, ಆ ಭಾಗಗಳ ಡಬ್ಬಿಂಗ್ ಕಾರ್ಯವನ್ನು ಇಂದು ದರ್ಶನ್ ಮಾಡುತ್ತಿದ್ದಾರೆ. ಸುಮಾರು ಒಂದು ಗಂಟೆ ಕಾಲ ದರ್ಶನ್, ಡಬ್ಬಿಂಗ್ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಇದೇ ದಿನ ‘ಡಬ್ಬಿಂಗ್’ ಮಾಡಲು ವಿಶೇಷ ಕಾರಣವೂ ಇದೆ.

ಇದನ್ನೂ ಓದಿ:ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್

ದರ್ಶನ್ ಈ ಹಿಂದೆ ಒಮ್ಮೆ ಹೇಳಿದ್ದಂತೆ, ಅವರು ಜನವರಿ 1 ರಂದು ಅಂದರೆ ಹೊಸ ವರ್ಷದಂದು ಕಡ್ಡಾಯವಾಗಿ ಕೆಲಸ ಮಾಡುತ್ತಾರಂತೆ. ಆ ದಿನ ಅವರು ರಜೆ ತೆಗೆದುಕೊಳ್ಳಲು ಇಷ್ಟಪಡುವುದಿಲ್ಲವಂತೆ. ಎಲ್ಲಿ ಆದರೂ ಆಗಲಿ ಚಿತ್ರೀಕರಣದಲ್ಲಿ ಅಥವಾ ಸಿನಿಮಾ ಸಂಬಂಧಿ ಕೆಲಸದಲ್ಲಿ ಕಡ್ಡಾಯವಾಗಿ ತೊಡಗಿಕೊಳ್ಳುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಈ ಬಾರಿ ಅನಾರೋಗ್ಯ ಮತ್ತು ಇತರೆ ಕಾರಣಗಳಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಡಬ್ಬಿಂಗ್ ಮಾಡುವ ಮೂಲಕ ತಮ್ಮನ್ನು ತಾವು ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿ ಇಟ್ಟುಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ.

‘ಡೆವಿಲ್’ ಸಿನಿಮಾದ ಚಿತ್ರೀಕರಣ ಜನವರಿ 15ರಿಂದ ಪ್ರಾರಂಭ ಆಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲ ಮೂಲಗಳ ಪ್ರಕಾರ, ಚಿತ್ರತಂಡದವರಿಗೆ ಜನವರಿ 15ಕ್ಕೆ ಶೂಟಿಂಗ್​ಗೆ ಹಾಜರಾಗುವಂತೆ ಈಗಾಗಲೇ ಸುದ್ದಿ ಮುಟ್ಟಿಸಲಾಗಿದೆಯಂತೆ. ಇನ್ನು ದರ್ಶನ್ ಸಹ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದು, ಫಿಸಿಯೋಥೆರಪಿ ಮಾಡಿಸಿಕೊಳ್ಳುತ್ತಿದ್ದಾರೆ. ಜನವರಿ 15ರ ವೇಳೆಗೆ ಚಿತ್ರೀಕರಣ ಮಾಡುವಷ್ಟರ ಮಟ್ಟಿಗೆ ಗುಣಮುಖರಾಗುವ ಸಾಧ್ಯತೆ ಇದ್ದಂತಿದೆ. ಇನ್ನು ದರ್ಶನ್​ಗೆ ನೀಡಲಾಗಿರುವ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತಿದ್ದು, ಸುಪ್ರೀಂಕೋರ್ಟ್​ನಲ್ಲಿ ವಾದಿಸಲು ವಿಶೇಷ ಪಿಪಿ ಅವರನ್ನು ಸರ್ಕಾರ ಈಗಾಗಲೇ ಹೆಸರಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Wed, 1 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್