ವಾಸಿಯಾಗದ ನೋವು, ಆಪರೇಷನ್ಗೆ ಒಪ್ಪಿಗೆ ಕೊಟ್ಟ ದರ್ಶನ್; ‘ಡೆವಿಲ್’ ಪರಿಸ್ಥಿತಿ ಏನು?
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ದರ್ಶನ್ಗೆ ಬೆನ್ನು ನೋವು ಉಂಟಾಗಿತ್ತು. ಈಗ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ ಒಪ್ಪಿದ್ದಾರೆ. ಫಿಸಿಯೋಥೆರಪಿ ಫಲಕಾರಿಯಾಗದ ಕಾರಣ ಶಸ್ತ್ರಚಿಕಿತ್ಸೆ ಅನಿವಾರ್ಯವಾಗಿದೆ. ಸಂಕ್ರಾಂತಿ ವೇಳೆಗೆ ಶಸ್ತ್ರಚಿಕಿತ್ಸೆ ನಡೆಯುವ ಸಾಧ್ಯತೆ ಇದೆ ಮತ್ತು ಚೇತರಿಕೆಯ ನಂತರ 'ಡೆವಿಲ್' ಸಿನಿಮಾದ ಚಿತ್ರೀಕರಣ ಮುಂದುವರಿಯಲಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ದರ್ಶನ್ ಅವರು ಈಗ ಜಾಮೀನು ಪಡೆದು ಹೊರ ಬಂದಿದ್ದಾರೆ. ಅವರಿಗೆ ಬೆನ್ನು ನೋವು ಅತಿಯಾಗಿ ಕಾಡಿತ್ತು. ಡಿಸ್ಕ್ನ ಸಮಸ್ಯೆಯಿಂದಾಗಿ ಈ ರೀತಿ ಆಗಿದೆ ಎಂದು ವರದಿಯಲ್ಲಿ ಉಲ್ಲೇಖ ಆಗಿತ್ತು. ಈಗ ದರ್ಶನ್ ಅವರಿಗೆ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಅವರಿಗೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಬೇರೆ ದಾರಿ ಕಾಣದೆ ಅವರು ಆಪರೇಷನ್ಗೆ ಒಪ್ಪಿಗೆ ಕೊಟ್ಟಿದ್ದಾರೆ.
ದರ್ಶನ್ ಅವರು ಐಷಾರಾಮಿ ಆಗಿ ಜೀವನ ನಡೆಸಿದವರು. ಈ ಕಾರಣಕ್ಕೆ ಜೈಲು ವಾಸ ಅವರಿಗೆ ಕಷ್ಟ ಆಯಿತು. ಜೈಲಿನಲ್ಲಿ ಕೂರಲು, ಮಲಗಲು ಅವರಿಗೆ ಬೇಕಾದ ರೀತಿಯ ವ್ಯವಸ್ಥೆ ಇಲ್ಲದ ಕಾರಣ ಬೆನ್ನು ನೋವು ಆರಂಭ ಆಯಿತು. ದರ್ಶನ್ ಅವರು ಆಪರೇಷನ್ ನೀಡಿ ಮಧ್ಯಂತರ ಜಾಮೀನು ಪಡೆದರು. ಇಷ್ಟು ದಿನಗಳ ಕಾಲ ಅವರು ಫಿಸಿಯೋ ಥೆರಪಿ ಮೂಲಕ ನೋವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಆದರೆ, ಅದು ಸಾಧ್ಯವಾಗಿಲ್ಲ. ಹೀಗಾಗಿ, ಅವರು ಆಪರೇಷನ್ ಮಾಡಿಸಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ.
ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ವೈದ್ಯ ಅಜಯ್ ಹೆಗಡೆ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಕಡೆಯಿಂದ ಈಗ ಮಾಹಿತಿ ಲಭ್ಯವಾಗಿದೆ.
ಸಿನಿಮಾ ಕಥೆ ಏನು?
ಆಪರೇಷನ್ ನಡೆದ ಒಂದುವರೆ ತಿಂಗಳವರೆಗೂ ಫೈಟ್ ದೃಶ್ಯದಲ್ಲಿ ದರ್ಶನ್ ಭಾಗಿಯಾಗುವಂತಿಲ್ಲ. ಕೇವಲ ಚಿತ್ರೀಕರಣದಲ್ಲಿ ಮಾತ್ರ ಭಾಗಿಯಾಗಬಹುದು ಎನ್ನಲಾಗಿದೆ. ಅಂದರೆ ಅವರು ‘ಡೆವಿಲ್’ ಸಿನಿಮಾದ ಸಾಮಾನ್ಯ ದೃಶ್ಯಗಳ ಶೂಟ್ನಲ್ಲಿ ಭಾಗಿ ಆಗಬಹುದು. ಫೆಬ್ರವರಿಯಲ್ಲಿ ದರ್ಶನ್ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರೀಕರಣ ಆರಂಭ ಆದ ಬಳಿಕ ಮತ್ತೆ ಬೆನ್ನು ನೋವು ಹೆಚ್ಚಿದರೆ ಸಿನಿಮಾ ಕೆಲಸ ವಿಳಂಬ ಆಗುತ್ತದೆ. ಈ ಕಾರಣದಿಂದಲೇ ಸರ್ಜರಿ ಬಳಿಕವೇ ಶೂಟಿಂಗ್ ತೆರಳಲು ಅವರು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಬಾಸ್ ವಿವಾದ ಹಾಗೂ ದರ್ಶನ್ ಫ್ಯಾನ್ಸ್ ಬಗ್ಗೆ ನೇರವಾಗಿ ಮಾತನಾಡಿದ ಸುದೀಪ್
ಡೆವಿಲ್ ಸಿನಿಮಾ
‘ಡೆವಿಲ್’ ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಈ ಚಿತ್ರದ ಒಂದಷ್ಟು ಭಾಗದ ಶೂಟಿಂಗ್ ಈಗಾಗಲೇ ಪೂರ್ಣಗೊಂಡಿದೆ. ಉಳಿದು ಭಾಗದ ಶೂಟಿಂಗ್ನ ಪೂರ್ತಿಗೊಳಿಸಿ ಸಿನಿಮಾನ ಈ ವರ್ಷವೇ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:36 am, Sat, 4 January 25