ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ಸ್​ ಆರಾಧನ ಸಂಸ್ಕೃತಿಯನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಆರ್​ಜಿವಿ ಮಾತನಾಡಿದ್ದಾರೆ.

ದರ್ಶನ್ ಪ್ರಕರಣ ಉಲ್ಲೇಖಿಸಿ ಸ್ಟಾರ್ಸ್​ ಆರಾಧನ ಸಂಸ್ಕೃತಿಯನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ
ರಾಮ್​ ಗೋಪಾಲ-ದರ್ಶನ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jun 14, 2024 | 12:51 PM

ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸದಾ ವಿವಾದದ ಮೂಲಕ ಸುದ್ದಿ ಆಗುತ್ತಾ ಇರುತ್ತಾರೆ. ಹಲವು ವಿಚಾರಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ಈಗ ಆರ್​ಜಿವಿ ಅವರು ದರ್ಶನ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರು ಕೊಲೆ ಆರೋಪ ಹೊತ್ತಿದ್ದಾರೆ. ಆದಾಗ್ಯೂ ಅವರ ಪರ ಫ್ಯಾನ್ಸ್ ವಹಿಸಿಕೊಂಡು ಬರುತ್ತಿದ್ದಾರೆ. ಅವರೆಲ್ಲರಿಗೂ ಮುಟ್ಟಿನೋಡಿಕೊಳ್ಳುವಂತೆ ರಾಮ್ ಗೋಪಾಲ್ ವರ್ಮಾ ಉತ್ತರಿಸಿದ್ದಾರೆ. ಅವರು ಮಾಡಿರೋ ಟ್ವೀಟ್ ವೈರಲ್ ಆಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಈ ಪ್ರಕರಣದ ಬಗ್ಗೆ ಆರ್​ಜಿವಿ ಮಾತನಾಡಿದ್ದಾರೆ.

‘ನಿರ್ದೇಶಕರು ಚಿತ್ರಕಥೆ ಬರೆದ ಬಳಿಕವೇ ಸಿನಿಮಾದ ಶೂಟಿಂಗ್ ಆರಂಭಿಸುತ್ತಾರೆ. ಹಲವು ಸಂದರ್ಭದಲ್ಲಿ ನಿರ್ದೇಶಕರು ಸೆಟ್​ನಲ್ಲೂ ಚಿತ್ರಕಥೆ ಬರೆಯುತ್ತಾರೆ. ಆದರೆ, ದರ್ಶನ್ ಪ್ರಕರಣದಲ್ಲಿ ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಮಾತನಾಡಿದ್ದಾರೆ.

ರೇಣುಕಾ ಸ್ವಾಮಿ ದರ್ಶನ್ ಅಭಿಮಾನಿ. ಅವರ ಮೇಲೆ ಹಲ್ಲೆ ಮಾಡಿದ್ದು ದರ್ಶನ್ ಹಾಗೂ ಅವರ ಆಪ್ತರು. ಈ ವಿಚಾರದ ಬಗ್ಗೆ ಆರ್​ಜಿವಿ ಮಾತನಾಡಿದ್ದಾರೆ. ‘ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್​ ನಟ ಡೈ ಹಾರ್ಡ್ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆಯಾಗಿದೆ. ತಾವು ಆರಾಧಿಸುವ ನಟ ಹೀಗೆಯೇ ಇರಬೇಕು ಎಂದು ಬಯಸುತ್ತಾ ಹೋದಾಗ ಆಗುವ ಅಡ್ಡಪರಿಣಾಮಗಳು ಇವು’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ಇದನ್ನೂ ಓದಿ:ದರ್ಶನ್ ವಿರುದ್ಧ ರೌಡಿ ಶೀಟ್ ಓಪನ್? ನಟ ಎದುರಿಸಬೇಕಿರುವ ಸಮಸ್ಯೆಗಳೇನು?

ದರ್ಶನ್ ಫ್ಯಾಮಿಲಿ ಮ್ಯಾನ್ ಆಗಿರಬೇಕು ಎಂದು ರೇಣುಕಾಸ್ವಾಮಿ ಬಯಸಿದ್ದರು. ಅವರು ಪವಿತ್ರಾ ಬದಲು ವಿಜಯಲಕ್ಷ್ಮಿ ಜೊತೆ ಇರಲಿ ಎಂದು ರೇಣುಕಾ ಸ್ವಾಮಿ ಅಂದುಕೊಂಡಿದ್ದರು. ಈ ಕಾರಣಕ್ಕೆ ಪವಿತ್ರಾಗೆ ಅವರು ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಅವರ ಪ್ರಾಣವೇ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:42 am, Thu, 13 June 24

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್