AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ

ರೇಣುಕಾಸ್ವಾಮಿಯ ಕೊಲೆ ಆರೋಪಿ ನಟ ದರ್ಶನ್​ಗೆ ರೌಡಿಶೀಟರ್​ ಸತ್ಯ ವಿಡಿಯೋ ಕಾಲ್ ಮಾಡಿದ್ದ. ಆ ವಿಡಿಯೋ ವೈರಲ್​ ಆಗಿ ಸಂಚಲನ ಸೃಷ್ಟಿಸಿದೆ. ಜೈಲಿನಲ್ಲಿ ನಿಯಮ ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವಿಡಿಯೋ ಕಾಲ್ ಮಾಡಿದ ಸತ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಜೈಲಿನಲ್ಲಿರುವ ದರ್ಶನ್ ಜತೆ ವಿಡಿಯೋ ಕಾಲ್ ಮಾಡಿದ ರೌಡಿಶೀಟರ್ ಸತ್ಯ ಪೊಲೀಸ್ ವಶಕ್ಕೆ
ದರ್ಶನ್​, ಸತ್ಯ
Jagadisha B
| Edited By: |

Updated on: Aug 26, 2024 | 5:50 PM

Share

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್​ ಸತ್ಯ ಜೊತೆ ದರ್ಶನ್​ ವಿಡಿಯೋ ಕಾಲ್​ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್​ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್​ ಮೂಲಕ ಮಾತನಾಡಿದ ಸತ್ಯನನ್ನು ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

ವಿಚಾರಣಾಧೀನ ಖೈದಿ ಆಗಿರುವ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನೊಳಗೆ ಅಕ್ರಮವಾಗಿ ಅನೇಕ ಸೌಕರ್ಯಗಳನ್ನು ಒದಗಿಸಲಾಗಿದೆ. ರೌಡಿಗಳ ಜೊತೆ ಸಂಪರ್ಕ, ಗಾರ್ಡನ್​ ಏರಿಯಾದಲ್ಲಿ ಹರಟೆ ಹೊಡೆಯುವ ಅವಕಾಶ, ಸೀಗರೇಟ್​, ಕುರ್ಚಿ ಸೇರಿದಂತೆ ವಿಐಪಿ ಟ್ರೀಟ್​ಮೆಂಟ್​ ಸಿಕ್ಕಿದೆ. ಅದರ ಜೊತೆಗೆ ವಿಡಿಯೋ ಕಾಲ್​ ಕೂಡ ಮಾಡಿರುವುದು ಬಹಿರಂಗ ಆಗಿದ್ದು, ದೊಡ್ಡ ಸಂಚಲನ ಸೃಷ್ಟಿ ಮಾಡಿದೆ.

ವಿಡಿಯೋ ಕಾಲ್ ಮಾಡಿದ್ದು ಹೇಗೆ?

ವೈರಲ್​ ಆದ ದರ್ಶನ್​ ವಿಡಿಯೋ ಕಾಲ್​ ತುಣುಕಿನಲ್ಲಿ ಇರುವವನು ಬ್ಯಾಡರಹಳ್ಳಿ ರೌಡಿಶೀಟರ್ ಜಾನಿ ಅಲಿಯಾಸ್​ ಜನಾರ್ದನ್​ನ ಮಗ ಸತ್ಯ. ಆತನಿಗೆ ಜೈಲಿನಿಂದ ವಿಡಿಯೋ ಕಾಲ್ ಮಾಡಿ ದರ್ಶನ್​ರನ್ನು ತೋರಿಸಿದವನು ಕೂಡ ಇನ್ನೋರ್ವ ರೌಡಿಶೀಟರ್ ಮಾರ್ಕೆಟ್ ಧರ್ಮ. ಇತ್ತೀಚೆಗೆ ಸತ್ಯ ಕೂಡ ಜೈಲಿಗೆ ಹೋಗಿಬಂದಿದ್ದ. ಕೆಎಲ್​ಇ‌ ಕಾಲೇಜು ವಿದ್ಯಾರ್ಥಿಗಳಿಗೆ ಉಲ್ಟಾ ಮಚ್ಚಿನಲ್ಲಿ ಆತ ಹೊಡೆದಿದ್ದ. ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಕೇಸ್​ ದಾಖಲಾಗಿತ್ತು. ಜೈಲಿಗೆ ಹೋಗಿದ್ದ ಸತ್ಯ ಜಾಮೀನನ ಮೇಲೆ ಹೊರಗೆ ಬಂದಿದ್ದ. ಹೊರಗೆ ಬಂದವನು ಮಾರ್ಕೆಟ್ ಧರ್ಮನಿಗೆ ವಿಡಿಯೋ ಕಾಲ್ ಮಾಡಿದ್ದ‌. ‘ದರ್ಶನ್ ಇರುವುದು ನಮ್ಮ ಪಕ್ಕದ ಸೆಲ್​ನಲ್ಲಿ. ನಿನಗೂ ತೋರಿಸ್ತಿನಿ’ ಎಂದು ಸತ್ಯನಿಗೆ ಹೇಳಿದ್ದ ಮಾರ್ಕೆಟ್​ ಧರ್ಮ, ದರ್ಶನ್ ಕೈಯಲ್ಲಿ ಹಾಯ್ ಹೇಳಿಸಿದ್ದ. ಅದೇ ವಿಡಿಯೋ ಎಲ್ಲ ಕಡೆ ವೈರಲ್​ ಆಗಿದೆ.

ಇದನ್ನೂ ಓದಿ: ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​ ದಾಖಲು

ರೌಡಿಶೀಟರ್​ ಬಿಲ್ಡಪ್​:

ದರ್ಶನ್​ಗೆ ಇರುವ ಅಭಿಮಾನಿ ಬಳಗ ದೊಡ್ಡದು. ದರ್ಶನ್​ ಜೊತೆ ವಿಡಿಯೋ ಕಾಲ್​ನಲ್ಲಿ ಮಾತನಾಡಿದ ಕ್ಲಿಪಿಂಗ್​ ಇಟ್ಟುಕೊಂಡ ಸತ್ಯ ಕಲಾಸಿಪಾಳ್ಯದ ಒಂದಷ್ಟು ಹುಡುಗರಿಗೆ ಕಳಿಸಿದ್ದ. ಅಲ್ಲದೇ ತನ್ನ ಏರಿಯಾದಲ್ಲಿ ಬಿಲ್ಡಪ್​ ಕೊಡಲು ಈ ವಿಡಿಯೋ ತುಣುಕನ್ನು ಬಳಸಿಕೊಂಡಿದ್ದ. ಸಹಚರರ ವಾಟ್ಸಪ್​ ಸ್ಟೇಟಸ್​ನಲ್ಲೂ ಅದನ್ನು ಅಪ್​ಲೋಡ್​ ಮಾಡಲಾಗಿತ್ತು. ಆದ್ದರಿಂದ ದರ್ಶನ್​ ಜೊತೆಗಿನ ಆತನ ವಿಡಿಯೋ ಕಾಲ್ ಎಲ್ಲ ಕಡೆಗಳಲ್ಲಿ ವೈರಲ್​ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ