AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್, ಶತ್ರು ಸಂಹಾರಕ್ಕಾಗಿ ಪೂಜೆ?

Darshan Thoogudeepa: ಕಳೆದ ಒಂದೆರಡು ವರ್ಷಗಳಿಂದ ಸತತವಾಗಿ ವಿವಾದಗಳಿಗೆ ಸಿಲುಕಿಕೊಳ್ಳುತ್ತಿರುವ ನಟ ದರ್ಶನ್ ಇದೀಗ ಸಂಕಷ್ಟಗಳಿಂದ ದೂರಾಗಲು ಕುಟುಂಬ ಸಮೇತರಾಗಿ ನೆರೆ ರಾಜ್ಯದ ವಿಶೇಷ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಕೇರಳದ ಕಣ್ಣೂರಿನ ಪ್ರಸಿದ್ಧ ದೇವಾಲಯಕ್ಕೆ ತೆರಳಿರುವ ನಟ ದರ್ಶನ್, ಅಲ್ಲಿ ಶತ್ರು ಸಂಹಾರ ಹೋಮ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಕರ್ನಾಟಕದ ಕೆಲ ರಾಜಕಾರಣಿಗಳು ಇದೇ ದೇವಾಲಯಕ್ಕೆ ಭೇಟಿ ನೀಡಿದ್ದರು.

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್, ಶತ್ರು ಸಂಹಾರಕ್ಕಾಗಿ ಪೂಜೆ?
Darshan Thoogudeepa
ಮಂಜುನಾಥ ಸಿ.
|

Updated on: Mar 22, 2025 | 4:02 PM

Share

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್​ ಇತ್ತೀಚೆಗಷ್ಟೆ ಮತ್ತೆ ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ತಾವು ಜೈಲಿಗೆ ಹೋದ ಕಾರಣದಿಂದ ನಿಂತು ಹೋಗಿದ್ದ ‘ಡೆವಿಲ್’ ಸಿನಿಮಾದ ಚಿತ್ರೀಕರಣವನ್ನು ಇತ್ತೀಚೆಗಷ್ಟೆ ಪುನಃ ಪ್ರಾರಂಭಿಸಿದ್ದಾರೆ. ಇದರ ನಡುವೆ ತಮ್ಮ ಇತ್ತೀಚೆಗಿನ ಸಂಕಷ್ಟಗಳಿಂದ ಪಾರು ಮಾಡುವಂತೆ ದೇವರ ಮೊರೆಯನ್ನು ಹೋಗಿದ್ದಾರೆ ನಟ ದರ್ಶನ್, ಮಾತ್ರವೇ ಅಲ್ಲದೆ ತಮ್ಮ ಶತ್ರುಗಳ ವಿನಾಶವಾಗಲೆಂದು ವಿಶೇಷ ದೇವಾಲಯವೊಂದರಲ್ಲಿ ಪೂಜೆ ಸಹ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.

ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ, ಮಗ ವಿನೀತ್ ಹಾಗೂ ಧನ್ವೀರ್ ಗೌಡ ಅವರುಗಳ ಜೊತೆಯಲ್ಲಿ ಕೇರಳದ ಕಣ್ಣೂರಿನ ಪ್ರಸಿದ್ಧ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ದೇವಾಲಯವು ಶತ್ರು ಸಂಹಾರ ಹೋಮಕ್ಕೆ ಬಹಳ ಪ್ರಸಿದ್ಧಿ ಪಡೆದಿದೆ. ಇದೀಗ ದರ್ಶನ್ ಅವರು ಕುಟುಂಬ ಸಮೇತ ಇಲ್ಲಿಗೆ ಬಂದಿರುವುದು ಸಹ ಶತ್ರು ಸಂಹಾರ ಹೋಮಕ್ಕಾಗಿಯೇ ಎನ್ನಲಾಗುತ್ತಿದೆ. ಈ ದೇವಾಲಯದಲ್ಲಿ ಹಲವಾರು ರಾಜಕಾರಣಿಗಳು, ಉದ್ಯಮಿಗಳು ಸಹ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿರುತ್ತಾರೆ.

ಇದನ್ನೂ ಓದಿ:ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ, ವಿಚಾರಣೆಗೆ ಸುಪ್ರೀಂ ಅಸ್ತು

ದರ್ಶನ್ ಇದೀಗ ಭೇಟಿ ನೀಡಿರುವ ಶ್ರೀಭಗವತೀ ದೇವಸ್ಥಾನ ಹಲವು ವಿಶೇಷತೆಗಳನ್ನು ಹೊಂದಿದೆ. ಇಲ್ಲಿ ಪಾರ್ವತಿ ರುದ್ರಕಾಳಿಯ ಅವತಾರದಲ್ಲಿ ಸಂಚರಿಸುತ್ತಾಳೆ ಎಂಬ ನಂಬುಗೆ ಇದೆ. ಹಾಗಾಗಿ ರಾತ್ರಿ ಎಂಟ ಗಂಟೆ ಮೇಲೆ ಪೂಜಾರಿಗಳ ಹೊರತಾಗಿ ಇನ್ಯಾರು ಸಹ ಇಲ್ಲಿ ಇರುವಂತಿಲ್ಲ. ಮಾತ್ರವಲ್ಲದೆ ಇಲ್ಲಿ ಪೂಜೆ ಮಾಡುವವರಿಗೆ ಮಾಂಸವನ್ನು ಪ್ರಸಾದವನ್ನಾಗಿ ನೀಡಲಾಗುತ್ತದೆ. ಇಲ್ಲಿ ಪೂಜೆ ಮಾಡುವ ಕೆಲ ಬ್ರಾಹ್ಮಣರು ಸಹ ಮಾಂಸಾಹಾರವನ್ನು ಪ್ರಸಾದವಾಗಿ ಸ್ವೀಕರಿಸುತ್ತಾರೆ ಎಂಬ ಮಾತುಗಳಿವೆ.

ಈ ದೇವಾಲಯದಲ್ಲಿ ಎಂಟು ರೀತಿಯ ಪೂಜೆಗಳನ್ನು ಮಾಡಲಾಗುತ್ತದೆ. ಶತ್ರು ಸಂಹಾರ ಪೂಜೆ ಬಹಳ ವಿಶೇಷವಾದುದು. ಈ ಪೂಜೆಯನ್ನು ಮಧ್ಯಾಹ್ನ 12 ಗಂಟೆ ಹಾಗೂ ಸಂಜೆ 6 ಗಂಟೆಯ ನಡುವೆ ಈ ಪೂಜೆಯನ್ನು ಮಾಡಿಸಲಾಗುತ್ತದೆ. ಈ ವೇಳೆ ಪೂಜೆ ಮಾಡಿಸುವವರ ಹೊರತಾಗಿ ಇನ್ಯಾರೂ ಸಹ ದೇವಾಲಯದಲ್ಲಿ ಇರುವಂತಿಲ್ಲ. ಈ ಪೂಜೆಗಳು ಬಹಳ ಗೌಪ್ಯವಾಗಿ ನಡೆಯುತ್ತವೆಯಂತೆ.

ಇದೀಗ ನಟ ದರ್ಶನ್ ಈ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿರುವುದು ಸಹಜವಾಗಿಯೇ ಕುತೂಹಲ ಕೆರಳಿಸಿದೆ. ದರ್ಶನ್, ತಮ್ಮ ಶತ್ರುಗಳ ವಿರುದ್ಧ ಜಯ ಕಾಣಲೆಂದು, ಶತ್ರು ಕಾಟ ನಿವಾರಣೆಗಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅವರ ಇಚ್ಛೆ ಈಡೇರುತ್ತದೆಯೇ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ