AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ

ನಟ ದರ್ಶನ್ ಅವರು ಕಳೆದ ಹಲವು ತಿಂಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಏನನ್ನೂ ಪೋಸ್ಟ್​ ಮಾಡಿರಲಿಲ್ಲ. ಇಂದು (ಜನವರಿ 14) ಸಂಕ್ರಾಂತಿ ಪ್ರಯುಕ್ತ ಅವರು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಈ ಪೋಸ್ಟ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ
Darshan
ಮದನ್​ ಕುಮಾರ್​
|

Updated on: Jan 14, 2025 | 8:45 PM

Share

ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಿಸಲಾಗಿದೆ. ನಟ ದರ್ಶನ್ ಕೂಡ ಹಬ್ಬದಲ್ಲಿ ಭಾಗಿ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿರುವ ದರ್ಶನ್ ಅವರು ಫಾರ್ಮ್​ ಹೌಸ್​ನಲ್ಲಿ ಸಂಕ್ರಾಂತಿ ಆಚರಿಸಿದ್ದಾರೆ. ಪತ್ನಿ ಮತ್ತು ಮಗನ ಜೊತೆ ಅವರು ಕಾಲ ಕಳೆದಿದ್ದಾರೆ. ಫಾರ್ಮ್​ ಹೌಸ್​ನಲ್ಲಿ ಇರುವ ಪ್ರಾಣಿಗಳ ಜೊತೆಗೆ ಹಬ್ಬ ಆಚರಿಸಿದ್ದಾರೆ. ಕುದುರೆಯ ಜೊತೆಗಿರುವ ಫೋಟೋವನ್ನು ದರ್ಶನ್ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಯಾಕೆಂದರೆ, ದರ್ಶನ್ ಅವರು ಪೋಸ್ಟ್ ಮಾಡಿರುವುದು ಬರೋಬ್ಬರಿ 7 ತಿಂಗಳ ಬಳಿಕ!

‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ. ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ದರ್ಶನ್ ಅವರು ಅಭಿಮಾನಿಗಳಿಗೆ ಸಂಕ್ರಾಂತಿಯ ಶುಭಾಶಯ ತಿಳಿಸಿದ್ದಾರೆ.

ಕಳೆದ ವರ್ಷ ದರ್ಶನ್ ಅವರ ಪಾಲಿಗೆ ತುಂಬ ಕಷ್ಟಕರ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಪರಪ್ಪನ ಅಗ್ರಹಾರ ಮತ್ತು ಬಳ್ಳಾರಿ ಜೈಲಿನಲ್ಲಿ ಅವರು ದಿನ ಕಳೆದಿದ್ದರು. ಆಗಲೇ ಅವರಿಗೆ ಬೆನ್ನು ನೋವು ಕೂಡ ಹೆಚ್ಚಾಗಿತ್ತು. ನಡೆಯಲು ಕೂಡ ದರ್ಶನ್ ಕಷ್ಟಪಡುತ್ತಿದ್ದರು. ಆದ್ದರಿಂದ ಮಧ್ಯಂತರ ಜಾಮೀನು ಸಿಕ್ಕಿತ್ತು. ಆನಂತರ ರೆಗ್ಯುಲರ್​ ಬೇಲ್ ಸಿಕ್ಕ ಬಳಿಕ ದರ್ಶನ್ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ: ದರ್ಶನ್​ಗೆ ಪೊಲೀಸರಿಂದ ಮತ್ತೊಂದು ನೋಟಿಸ್​; ಈ ಬಾರಿ ದಾಸ ಮಾಡಿದ ಕಿರಿಕ್ ಏನು?

ಕಹಿ ಘಟನೆಯಿಂದಾಗಿ ದರ್ಶನ್ ಅವರ ಜೀವನದಲ್ಲಿ ಏರುಪೇರು ಉಂಟಾಯಿತು. ಕೊಲೆ ಆರೋಪ ಎದುರಾಗಿದ್ದರಿಂದ ಸಿನಿಮಾ ಕೆಲಸಗಳನ್ನು ಬಿಟ್ಟು ಪೊಲೀಸ್ ಸ್ಟೇಷನ್, ಕೋರ್ಟು, ಜೈಲು, ಆಸ್ಪತ್ರೆ ಸುತ್ತುವಂತಾಯಿತು. ಆದರೆ 2025ರ ವರ್ಷದಲ್ಲಿ ಎಲ್ಲ ವಿಘ್ನಗಳು ನಿವಾರಣೆ ಆಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ಅದರ ಮೊದಲ ಹಂತ ಎಂಬಂತೆ ದರ್ಶನ್ ಅವರು ಕುಟುಂಬದ ಜೊತೆ ಸೇರಿಕೊಂಡು ಸಂಕ್ರಾಂತಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ