ದರ್ಶನ್​ಗೆ ಜಾಮೀನು; ಪತ್ನಿ ವಿಜಯಲಕ್ಷ್ಮೀ ಪ್ರತಿಕ್ರಿಯೆ ಏನು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಅನೇಕ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದ ವಿಜಯಲಕ್ಷ್ಮಿ ಅವರ ಪ್ರಾರ್ಥನೆಗೆ ಈಗ ಫಲ ದೊರೆತಿದೆ. ದರ್ಶನ್ ಅವರ ಮಗ ವಿನಿಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

ದರ್ಶನ್​ಗೆ ಜಾಮೀನು; ಪತ್ನಿ ವಿಜಯಲಕ್ಷ್ಮೀ ಪ್ರತಿಕ್ರಿಯೆ ಏನು?
ವಿಜಯಲಕ್ಷ್ಮಿ-ದರ್ಶನ್
Follow us
ರಾಜೇಶ್ ದುಗ್ಗುಮನೆ
|

Updated on: Dec 13, 2024 | 5:37 PM

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ಸಾಕಷ್ಟು ತೊಂದರೆ ಅನುಭವಿಸಿದ್ದರು. ಈಗ  ಕೊನೆಗೂ ಅವರು ಸಂಪೂರ್ಣ ರಿಲೀಫ್ ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ಕೊಟ್ಟು ಆದೇಶ ಹೊರಡಿಸಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ದರ್ಶನ್ ಬಿಡುಗಡೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹಾಕಿದ ಪೋಸ್ಟ್ ಏನು? ಆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೂನ್​ 11ರಂದು ಬಂಧನಕ್ಕೆ ಒಳಗಾದರು. ಅವರನ್ನು ಪೊಲೀಸರು ಮೈಸೂರಿನಲ್ಲಿ ಅರೆಸ್ಟ್ ಮಾಡಿದರು. ಆ ಬಳಿಕ ವಿಜಯಲಕ್ಷ್ಮೀ ಅವರು ಮಾಡದ ಪ್ರಾರ್ಥನೆಗಳಿಲ್ಲ, ಭೇಟಿ ನೀಡದ ದೇವಸ್ಥಾನಗಳಿಲ್ಲ. ಅನೇಕ ದೇವಾಲಯಗಳಿಗೆ ತೆರಳಿ ವಿಜಯಲಕ್ಷ್ಮೀ  ದರ್ಶನ್ ಬಿಡುಗಡೆಗೆ ಪ್ರಾರ್ಥನೆ ಸಲ್ಲಿಸಿದರು. ಈ ಪ್ರಾರ್ಥನೆ ಈಗ ಫಲ ಕೊಟ್ಟಿದೆ.

ದೇವಾಲಯದಲ್ಲಿ ಹೂವುಗಳನ್ನು ಹಿಡಿದಿರುವ ಫೋಟೋನ ವಿಜಯಲಕ್ಷ್ಮೀ ಹಂಚಿಕೊಂಡಿದ್ದಾರೆ. ತಮ್ಮ ಪ್ರಾರ್ಥನೆ ಫಲ ಕೊಟ್ಟ ಖುಷಿ ಅವರಿಗೆ ಇದೆ. ಅವರು ಮಾಧ್ಯಮಗಳ ಎದುರು ಬಂದು ಪ್ರತಿಕ್ರಿಯೆ ನೀಡುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಇದೆ.

ಹಲವು ದೇವಾಲಯಗಳಿಗೆ ಭೇಟಿ

ದರ್ಶನ್​ಗೆ ಜಾಮೀನು ಸಿಗಲಿ ಬಳ್ಳಾರಿ ಕನಕ ದುರ್ಗಮ್ಮನ ಮೊರೆ ಹೋಗಿದ್ದರು. ಮಧ್ಯಂತರ ಜಾಮೀನಿಗೂ ಮುನ್ನ ಹಾಗೂ ಸಿಕ್ಕ ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದರು. ನಿರಂತರವಾಗಿ ಪೂಜೆ ಮಾಡುತ್ತಿದ್ದ ಅವರು ದರ್ಶನ್​ಗೆ ಪ್ರಸಾದ ತಂದುಕೊಡುತ್ತಿದ್ದರು. ಪೂರ್ಣಾವಧಿ ಜಾಮೀನು ಸಿಕ್ಕ ಬಳಿಕ ಪತಿಯೊಂದಿಗೆ ಮತ್ತೊಮ್ಮೆ ದೇವಸ್ಥಾನಕ್ಕೆ ಬರುವುದಾಗಿ ಅವರು ಹರಕೆ ಕಟ್ಟಿದ್ದಾರೆ ಎನ್ನಲಾಗಿದೆ.

ಮಗನ ಪೋಸ್ಟ್

ದರ್ಶನ್ ಮಗ ವಿನಿಶ್ ಕೂಡ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದರ್ಶನ್ ಜೊತೆ ಇರೋ ಪೋಟೋನ ಅವರು ಪೋಸ್ಟ್ ಮಾಡಿದ್ದಾರೆ. ತಂದೆಗೆ ಜಾಮೀನು ಸಿಕ್ಕ ವಿಚಾರದ ಬಗ್ಗೆ ಅವರಿಗೆ ಖುಷಿ ಇದೆ.

ಇದನ್ನೂ ಓದಿ: ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು

ಸೆಲೆಬ್ರಿಟಿಗಳ ಪೋಸ್ಟ್

ದರ್ಶನ್ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ದರ್ಶನ್ ಆಪ್ತರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ನೆಚ್ಚಿನ ನಟ ಹೊರ ಬರುತ್ತಿರುವುದಕ್ಕೆ ಸಂತಸ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ