AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಕುದುರೆಗಳು ಮಾರಾಟಕ್ಕೆ ಇವೆಯೇ? ಬೋರ್ಡ್ ಹಿಂದಿನ ರಹಸ್ಯ ಇದು

Darshan Thoogudeepa farm house: ದರ್ಶನ್ ಆಪ್ತ ಸುನೀಲ್ ಅವರೇ ಈಗ ಫಾರ್ಮ್​ಹೌಸ್ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅವರು ಕುದುರೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ‘ದರ್ಶನ್ ಕುದುರೆಗಳನ್ನು ಮಾರಾಟ ಮಾಡುತ್ತಾರೆ’ ಎಂಬ ಸುದ್ದಿ ಹರಿದಾಡಿದೆ. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಒಂದರಲ್ಲಿ ಈ ರೀತಿಯ ಸುದ್ದಿ ಹರಿದಾಡಿತ್ತು ಎನ್ನಲಾಗಿದೆ.

ದರ್ಶನ್ ಕುದುರೆಗಳು ಮಾರಾಟಕ್ಕೆ ಇವೆಯೇ? ಬೋರ್ಡ್ ಹಿಂದಿನ ರಹಸ್ಯ ಇದು
ದರ್ಶನ್
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on:Oct 13, 2025 | 12:11 PM

Share

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಆರೋಪಿ ಆಗಿದ್ದಾರೆ. ದರ್ಶನ್ ಅವರು ಅರೆಸ್ಟ್ ಆಗಿರೋದು ಅವರ ಆಪ್ತ ವಲಯಕ್ಕೆ ಬೇಸರ ಮೂಡಿಸಿರೋದು ಸತ್ಯ. ದರ್ಶನ್ ಅವರು ಫಾರ್ಮ್​ಹೌಸ್ ಹೊಂದಿದ್ದಾರೆ. ಅಲ್ಲಿ ಕುದುರೆಗಳನ್ನು ಸಾಕಿದ್ದಾರೆ. ಕುದುರೆಗಳನ್ನು ಮಾರಾಟ ಮಾಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡಿತ್ತು. ಈ ಬಗ್ಗೆ ಅವರ ಆಪ್ತ ಸುನೀಲ್ ಅವರು ಮಾತನಾಡಿದ್ದಾರೆ.

ದರ್ಶನ್ ಆಪ್ತ ಸುನೀಲ್ ಅವರೇ ಈಗ ಫಾರ್ಮ್​ಹೌಸ್ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅವರು ಕುದುರೆಗಳನ್ನು ನೋಡಿಕೊಳ್ಳುತ್ತಿದ್ದಾರೆ. ‘ದರ್ಶನ್ ಕುದುರೆಗಳನ್ನು ಮಾರಾಟ ಮಾಡುತ್ತಾರೆ’ ಎಂಬ ಸುದ್ದಿ ಹರಿದಾಡಿದೆ. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮ ಒಂದರಲ್ಲಿ ಈ ರೀತಿಯ ಸುದ್ದಿ ಹರಿದಾಡಿತ್ತು ಎನ್ನಲಾಗಿದೆ.

ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಸುನೀಲ್ ಮಾತನಾಡಿದ್ದಾರೆ. ‘ಕುದುರೆ ಮಾರಾಟಕ್ಕಿದೆ ಎಂಬ ಬೋರ್ಡ್ ಏಕೆ ಇದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಕುದುರೆ ಖರೀದಿ ಮಾಡಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ. ಆದರೆ, ಎಲ್ಲಿ ಖರೀದಿ ಮಾಡಬೇಕು ಎಂದು ಗೊತ್ತಿರುವುದಿಲ್ಲ. ಅಂಥವರಿಗೆ ಇದು ಸಹಕಾರಿ ಆಗಲಿದೆ’ ಎಂಬುದು ಸುನೀಲ್ ಅಭಿಪ್ರಾಯ.

ಇದನ್ನೂ ಓದಿ
Image
‘ನಂದ ಗೋಕುಲ’ ಧಾರಾವಾಹಿಯಲ್ಲಿ ವಲ್ಲಭ-ಅಮೂಲ್ಯ ವಿವಾಹ; ದೊಡ್ಡ ಟ್ವಿಸ್ಟ್
Image
ಈ ವಾರ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದು ಯಾರು? ಕಾದಿದೆ ದೊಡ್ಡ ಟ್ವಿಸ್
Image
ವಿದೇಶದಲ್ಲೂ ಆಸ್ತಿ ಹೊಂದಿದ್ದಾರೆ ಅಮಿತಾಭ್ ಬಚ್ಚನ್; ಇಲ್ಲಿದೆ ವಿವರ
Image
ಒಂದಲ್ಲ, ಎರಡಲ್ಲ ಆರು ಗಂಟೆ ಸ್ನಾನ ಮಾಡಿದ ಸತೀಶ್; ಒಡೆಯಿತು ತಾಳ್ಮೆಯ ಕಟ್ಟೆ

‘ಕುದುರೆಗಳ ಬಗ್ಗೆ ಅನೇಕರಿಗೆ ಜ್ಞಾನ ಇರೋದಿಲ್ಲ. ಅದನ್ನು ಎಲ್ಲಿ ಖರೀದಿಸಬೇಕು ಎಂದು ಕೂಡ ತಿಳಿಯುವುದಿಲ್ಲ. ಅಂಥವರು ಬಂದು ಇಲ್ಲಿ ವಿಚಾರಿಸಿ, ಕುದುರೆ ಖರೀದಿ ಮಾಡಬಹುದು’ ಎಂದು ಅವರು ಹೇಳಿದ್ದಾರೆ. ಸಾಕುವವರು ಆಸಕ್ತಿ ಇರುವವರಿಗೆ ಸಹಾಯ ಆಗಲಿ ಎಂಬುದು ಇದರ ಉದ್ದೇಶ.

ಇದನ್ನೂ ಓದಿ: ‘ಕೆಟ್ಟ ಕಮೆಂಟ್ ಯಾರೇ ಮಾಡಿದರೂ ತಪ್ಪು’; ದರ್ಶನ್ ಅಭಿಮಾನಿಗಳ ನಡೆ ಖಂಡಿಸಿದ ರಚಿತಾ ರಾಮ್

ದರ್ಶನ್ ಅವರು ಸದ್ಯ ಬೇಸರದಲ್ಲಿ ಇದ್ದಾರೆ. ಅವರು ಜೈಲಿನಲ್ಲೇ ಸಮಯ ಕಳೆಯುತ್ತಿದ್ದಾರೆ. ದಿಂಬು ಹಾಸಿಗೆ ಪಡೆದುಕೊಳ್ಳಲು ಕಷ್ಟಪಡಬೇಕಾದ ಪರಿಸ್ಥಿತಿ ಬಂದಿದೆ. ಮತ್ತೊಂದು ಕಡೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಡಿಸೆಂಬರ್ 12ರಂದು ಸಿನಿಮಾ ಬರಲಿದೆ ಎಂಬ ಮಾಹಿತಿಯನ್ನು ತಂಡದವರು ರಿವೀಲ್ ಮಾಡಿದ್ದಾರೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಈ ಚಿತ್ರದ ಹಾಡುಗಳು ಬಿಡುಗಡೆ ಕಾಣುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:29 am, Mon, 13 October 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ