AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ ಈ ಬಾರಿ ಜೈಲಿನಲ್ಲೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಯಾಗಿರುವ ದರ್ಶನ್‌ಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಕುಟುಂಬ ಮತ್ತು ಅಭಿಮಾನಿಗಳಿಗೆ ಈ ಸನ್ನಿವೇಶ ಬೇಸರ ಮೂಡಿಸಿದೆ. ಗೆಳೆಯನನ್ನು ನೆನೆದು ನಟಿ ರಕ್ಷಿತಾ ಭಾವುಕ ಪೋಸ್ಟ್ ಹಾಕಿದ್ದು, 'ನಿನ್ನನ್ನು ಪ್ರತಿ ದಿನ ಮಿಸ್ ಮಾಡಿಕೊಳ್ಳುತ್ತೇನೆ' ಎಂದಿದ್ದಾರೆ.

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್
ರಕ್ಷಿತಾ-ದರ್ಶನ್
ರಾಜೇಶ್ ದುಗ್ಗುಮನೆ
|

Updated on: Feb 16, 2026 | 10:06 AM

Share

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ರಕ್ಷಿತಾ ಹಾಗೂ ದರ್ಶನ್ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದರು. ರಕ್ಷಿತಾ ಹಾಗೂ ದರ್ಶನ್ ಮಧ್ಯೆ ಗಾಢವಾದ ಗೆಳೆತನ ಇದೆ. ಒಬ್ಬರನ್ನೊಬ್ಬರು ಬಿಟ್ಟುಕೊಟ್ಟಿಲ್ಲ. ಸದಾ ಪರಸ್ಪರ ಬೆಂಬಲವಾಗಿ ನಿಲ್ಲುತ್ತಾ ಬರುತ್ತಿದ್ದಾರೆ. ಈಗ ರಕ್ಷಿತಾ ಅವರು ಗೆಳೆಯನನ್ನು ನೆನಪಿಸಿಕೊಂಡಿದ್ದಾರೆ. ಪ್ರತಿ ದಿನವೂ ದರ್ಶನ್ ಅವರನ್ನು ಮಿಸ್ ಮಾಡಿಕೊಳ್ಳೋದಾಗಿ ಹೇಳಿದ್ದಾರೆ.

ದರ್ಶನ್, ರಕ್ಷಿತಾ ಹಾಗೂ ಪ್ರೇಮ್ ಒಟ್ಟಾಗಿ ಇರೋ ಪೋಸ್ಟ್​​ನ ರಕ್ಷಿತಾ ಹಂಚಿಕೊಂಡಿದ್ದಾರೆ. ‘ಕಳೆದ ವರ್ಷ ಇದೇ ಸಮಯದಲ್ಲಿ ತೆಗೆದ ಫೋಟೋ. ನನ್ನ ಪ್ರೀತಿ ಪಾತ್ರನಿಗೆ ಜನ್ಮದಿನದ ಶುಭಾಶಯ’ ಎಂದು ರಕ್ಷಿತಾ ವಿಶ್ ಮಾಡಿದ್ದಾರೆ. ಮತ್ತೊಂದು ಇನ್​​ಸ್ಟಾ ಸ್ಟೋರಿಯಲ್ಲಿ, ‘ನಾನು ನಿನ್ನನ್ನು ದಿನವೂ ಮಿಸ್ ಮಾಡಿಕೊಳ್ಳುತ್ತೇನೆ. ನೀನು ಮತ್ತೆ ಖುಷಿಯಾಗಿ ಇರೋದನ್ನು ನೋಡುವಂತಾಗಲಿ ಎಂದು ಹಾರೈಸುತ್ತೇನೆ’ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ದರ್ಶನ್ ಪ್ರಾಣಿ ಪ್ರಿಯನಾಗಲು ಕಾರಣವಾದ ಅಂಶವೇನು ಗೊತ್ತೇ?

ದರ್ಶನ್ ಅವರು ಜೈಲಿನಿಂದ ಹೊರ ಬರಲಿ ಎಂಬುದು ಅಭಿಮಾನಿಗಳ ಕೋರಿಕೆ ಆಗಿದೆ. ಆದರೆ, ಸುಪ್ರೀಂಕೋರ್ಟ್​ ಜಾಮೀನು ವಜಾ ಮಾಡಿರುವುದರಿಂದ ದರ್ಶನ್ ಬೇರೆ ಆಯ್ಕೆ ಇಲ್ಲದೆ, ಜೈಲಿನಲ್ಲೇ ಕುಳಿತಿದ್ದಾರೆ. ಪ್ರಕರಣದ ವಿಚಾರಣೆ ಕೂಡ ನಡೆಯುತ್ತಿದೆ. ಸಾಕ್ಷಿಗಳನ್ನು ಕರೆಸಿ ವಿಚಾರಣೆ ಮಾಡಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ