AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಜೈಲಿನ ಕಠಿಣ ನಿಯಮದಿಂದ ಎರಡೇ ದಿನಕ್ಕೆ ಸುಸ್ತಾದ ದರ್ಶನ್
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Aug 16, 2025 | 12:58 PM

Share

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ ಕಳೆದ ವರ್ಷ ಜೂನ್​ನಲ್ಲಿ ಅರೆಸ್ಟ್ ಆಗಿದ್ದರು. ಕರ್ನಾಟಕ ಹೈಕೋರ್ಟ್​ನಿಂದ ಜಾಮೀನು ಪಡೆದು ಅವರು ಹಾಯಾಗಿ ಸುತ್ತಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ಸದ್ಯ ದರ್ಶನ್ (Darshan) ಜಾಮೀನನ್ನು ರದ್ದು ಮಾಡಿದೆ. ಅಲ್ಲದೆ, ದರ್ಶನ್​ಗೆ ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ. ಈ ಕಾರಣದಿಂದಲೇ ದರ್ಶನ್ ಜೈಲಿನಲ್ಲಿ ಸಾಕಷ್ಟು ತೊಂದರೆ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.

ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾ ಜೈಲಿನಲ್ಲಿ ಇಡಲಾಗಿದೆ. ದರ್ಶನ್​ ಆರಂಭದಲ್ಲಿ ಇಲ್ಲೇ ಇದ್ದರು. ಅವರಿಗೆ ಐಷಾರಾಮಿ ಸವಲತ್ತು ಒದಗಿಸಲಾಯಿತು. ಇದರ ಫೋಟೋಗಳು ಕೂಡ ವೈರಲ್ ಆದವು. ಈ ಪ್ರಕರಣದಲ್ಲಿ ಕೇಸ್ ಕೂಡ ದಾಖಲಾಗಿದೆ. ಈ ವಿಚಾರಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ದರ್ಶನ್​ಗೆ ಯಾವುದೇ ಸವಲತ್ತು ಸಿಗದಂತೆ ನೋಡಿಕೊಳ್ಳಿ ಎಂದು ಹೇಳಿದೆ.

ದರ್ಶನ್ ಜೈಲಿನಲ್ಲಿ ಹೀಗಿದ್ದಾರೆ

ಇದನ್ನೂ ಓದಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ
Image
ಸೈಫ್ ಅಲಿ ಖಾನ್ ಜನ್ಮದಿನ; ನಟನ ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ
Image
ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್
Image
‘ಕೂಲಿ’, ‘ವಾರ್ 2’ 2ನೇ ದಿನದ ಗಳಿಕೆ ಇಷ್ಟೊಂದಾ? ಅಬ್ಬಬ್ಬಾ ಊಹಿಸಲೂ ಅಸಾಧ್ಯ

ಈ ಬಾರಿ ಜೈಲಿನ ಮ್ಯಾನ್ಯುಯಲ್ ಪ್ರಕಾರವೇ ಅಧಿಕಾರಿಗಳು ದರ್ಶನ್​ನ ನಡೆಸಿಕೊಳ್ಳುತ್ತಿದ್ದಾರೆ. ಕಟ್ಟುನಿಟ್ಟಾಗಿ ಅವರಿಗೆ ಜೈಲು ಊಟವನ್ನೇ ನೀಡಬೇಕಿದೆ. ಮನೆಯಿಂದ ಯಾವುದೇ ಊಟವನ್ನು ತರುವಂತಿಲ್ಲ. ಜೈಲಿನ  ಮೆನುವಿನಂತೆ ಊಟ-ತಿಂಡಿ ನೀಡಲಾಗುತ್ತಿದೆ. ಕಳೆದ ಬಾರಿ ಮನೆ ಊಟದ ವ್ಯವಸ್ಥೆ ಇತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ.

ಎರಡು ಬೆಡ್​ಶೀಟ್ ಕೊಡಿ

ಸದ್ಯ ಬೆಂಗಳೂರಿನಲ್ಲಿ ಮಳೆಯ ವಾತಾವರಣ ಇದೆ. ಹೀಗಾಗಿ ಹವಾಮಾನ ತಂಪಾಗಿದೆ. ಈ ವೇಳೆ ಹೊದ್ದುಕೊಳ್ಳಲು ಒಂದು ಬೆಡ್​ಶೀಟ್ ಸಾಕಾಗೋದಿಲ್ಲ. ಹೀಗಾಗಿ, ದರ್ಶನ್ ಎರಡು ಬೆಡ್​ಶೀಟ್ ಕೇಳಿದ್ದಾರೆ. ಆದರೆ,  ಜೈಲಿನ ಮ್ಯಾನ್ಯುಯಲ್ ಪ್ರಕಾರ ಒಂದೇ ಬೆಡ್​ ಶೀಟ್ ನೀಡಲಾಗಿದೆ. ನಂತರ ಮರು ಮಾತಾಡದೇ ಅವರು ಒಂದೇ ಬೆಡ್​ಶೀಟ್ ಪಡೆದು ಹೋಗಿದ್ದಾರೆ.

ಮುಡಿಕೊಟ್ಟಾಗಿದೆ..

ಜೈಲಿಗೆ ಬರುವ ಮೊದಲೇ ದರ್ಶನ್ ಮುಡಿಕೊಟ್ಟಿದ್ದಾರೆ. ಕಳೆದ ಬಾರಿ ಅವರಿಗೆ ಕೂದಲು ಉದುರುವ ಸಮಸ್ಯೆ ಕಾಡಿತ್ತು. ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕ್ವಾರಂಟೈನ್ ಸೆಲ್​ನಲ್ಲಿ ಇದ್ದಾರೆ. ಆ ಬಳಿಕ ಅವರನ್ನು ಮುಖ್ಯ ಸೆಲ್​ಗೆ ವರ್ಗಾವಣೆ ಮಾಡಲಾಗುತ್ತದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್​ಗೆ ಬಾರದೆ ಮಂಕಾಗಿ ಕುಳಿತ ದರ್ಶನ್; ಹೇಳಿದ್ದೇನು?

ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Sat, 16 August 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ