
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಕಳೆದ ವರ್ಷ ಜೂನ್ನಲ್ಲಿ ಅರೆಸ್ಟ್ ಆಗಿದ್ದರು. ಕರ್ನಾಟಕ ಹೈಕೋರ್ಟ್ನಿಂದ ಜಾಮೀನು ಪಡೆದು ಅವರು ಹಾಯಾಗಿ ಸುತ್ತಾಡಿಕೊಂಡಿದ್ದರು. ಸುಪ್ರೀಂಕೋರ್ಟ್ ಸದ್ಯ ದರ್ಶನ್ (Darshan) ಜಾಮೀನನ್ನು ರದ್ದು ಮಾಡಿದೆ. ಅಲ್ಲದೆ, ದರ್ಶನ್ಗೆ ಯಾವುದೇ ಐಷಾರಾಮಿ ಸವಲತ್ತು ಸಿಗದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ. ಈ ಕಾರಣದಿಂದಲೇ ದರ್ಶನ್ ಜೈಲಿನಲ್ಲಿ ಸಾಕಷ್ಟು ತೊಂದರೆ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.
ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾ ಜೈಲಿನಲ್ಲಿ ಇಡಲಾಗಿದೆ. ದರ್ಶನ್ ಆರಂಭದಲ್ಲಿ ಇಲ್ಲೇ ಇದ್ದರು. ಅವರಿಗೆ ಐಷಾರಾಮಿ ಸವಲತ್ತು ಒದಗಿಸಲಾಯಿತು. ಇದರ ಫೋಟೋಗಳು ಕೂಡ ವೈರಲ್ ಆದವು. ಈ ಪ್ರಕರಣದಲ್ಲಿ ಕೇಸ್ ಕೂಡ ದಾಖಲಾಗಿದೆ. ಈ ವಿಚಾರಗಳನ್ನು ಗಮನಿಸಿದ್ದ ಸುಪ್ರೀಂಕೋರ್ಟ್ ದರ್ಶನ್ಗೆ ಯಾವುದೇ ಸವಲತ್ತು ಸಿಗದಂತೆ ನೋಡಿಕೊಳ್ಳಿ ಎಂದು ಹೇಳಿದೆ.
ಈ ಬಾರಿ ಜೈಲಿನ ಮ್ಯಾನ್ಯುಯಲ್ ಪ್ರಕಾರವೇ ಅಧಿಕಾರಿಗಳು ದರ್ಶನ್ನ ನಡೆಸಿಕೊಳ್ಳುತ್ತಿದ್ದಾರೆ. ಕಟ್ಟುನಿಟ್ಟಾಗಿ ಅವರಿಗೆ ಜೈಲು ಊಟವನ್ನೇ ನೀಡಬೇಕಿದೆ. ಮನೆಯಿಂದ ಯಾವುದೇ ಊಟವನ್ನು ತರುವಂತಿಲ್ಲ. ಜೈಲಿನ ಮೆನುವಿನಂತೆ ಊಟ-ತಿಂಡಿ ನೀಡಲಾಗುತ್ತಿದೆ. ಕಳೆದ ಬಾರಿ ಮನೆ ಊಟದ ವ್ಯವಸ್ಥೆ ಇತ್ತು. ಆದರೆ, ಈ ಬಾರಿ ಅದಕ್ಕೆ ಬ್ರೇಕ್ ಬಿದ್ದಿದೆ.
ಸದ್ಯ ಬೆಂಗಳೂರಿನಲ್ಲಿ ಮಳೆಯ ವಾತಾವರಣ ಇದೆ. ಹೀಗಾಗಿ ಹವಾಮಾನ ತಂಪಾಗಿದೆ. ಈ ವೇಳೆ ಹೊದ್ದುಕೊಳ್ಳಲು ಒಂದು ಬೆಡ್‌ಶೀಟ್ ಸಾಕಾಗೋದಿಲ್ಲ. ಹೀಗಾಗಿ, ದರ್ಶನ್ ಎರಡು ಬೆಡ್‌ಶೀಟ್ ಕೇಳಿದ್ದಾರೆ. ಆದರೆ, ಜೈಲಿನ ಮ್ಯಾನ್ಯುಯಲ್ ಪ್ರಕಾರ ಒಂದೇ ಬೆಡ್ ಶೀಟ್ ನೀಡಲಾಗಿದೆ. ನಂತರ ಮರು ಮಾತಾಡದೇ ಅವರು ಒಂದೇ ಬೆಡ್‌ಶೀಟ್ ಪಡೆದು ಹೋಗಿದ್ದಾರೆ.
ಜೈಲಿಗೆ ಬರುವ ಮೊದಲೇ ದರ್ಶನ್ ಮುಡಿಕೊಟ್ಟಿದ್ದಾರೆ. ಕಳೆದ ಬಾರಿ ಅವರಿಗೆ ಕೂದಲು ಉದುರುವ ಸಮಸ್ಯೆ ಕಾಡಿತ್ತು. ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಕ್ವಾರಂಟೈನ್ ಸೆಲ್ನಲ್ಲಿ ಇದ್ದಾರೆ. ಆ ಬಳಿಕ ಅವರನ್ನು ಮುಖ್ಯ ಸೆಲ್ಗೆ ವರ್ಗಾವಣೆ ಮಾಡಲಾಗುತ್ತದೆ.
ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್ಗೆ ಬಾರದೆ ಮಂಕಾಗಿ ಕುಳಿತ ದರ್ಶನ್; ಹೇಳಿದ್ದೇನು?
ದರ್ಶನ್ ಅವರ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೊದಲು ಅವರಿಗೆ ಒದಗಿಸಲಾಗಿದ್ದ ವಿಶೇಷ ಸವಲತ್ತುಗಳನ್ನು ನಿಲ್ಲಿಸಿ, ಕಟ್ಟುನಿಟ್ಟಿನ ಜೈಲು ನಿಯಮಗಳನ್ನು ಪಾಲಿಸಬೇಕೆಂದು ಆದೇಶಿಸಿದೆ. ಜೈಲಿನಲ್ಲಿ ಅವರಿಗೆ ಒಂದೇ ಬೆಡ್‌ಶೀಟ್ ಮತ್ತು ಜೈಲು ಮೆನುವಿನ ಆಹಾರ ಒದಗಿಸಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:54 am, Sat, 16 August 25