AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ಗೆ ಮತ್ತೆರಡು ದಿನ ರಿಲೀಫ್; ಸುಪ್ರೀಂನಲ್ಲಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್​ಗೆ ಎರಡು ದಿನ ರಿಲೀಫ್ ಸಿಕ್ಕಿದೆ. ಜಾಮೀನು ರದ್ದತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ದರ್ಶನ್ ಪರ ವಕೀಲರ ವಾದ ಮಂಡನೆಗೆ ಸಮಯಾವಕಾಶ ಕೋರಿದ ಕಾರಣ ಈ ಮುಂದೂಡಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ನ ನಿರ್ಧಾರ ದರ್ಶನ್ ಅವರ ಭವಿಷ್ಯ ಮತ್ತು ಅವರ 'ಡೆವಿಲ್' ಚಿತ್ರದ ಮೇಲೆ ಪ್ರಭಾವ ಬೀರಲಿದೆ.

ದರ್ಶನ್​ಗೆ ಮತ್ತೆರಡು ದಿನ ರಿಲೀಫ್; ಸುಪ್ರೀಂನಲ್ಲಿ ವಿಚಾರಣೆ ಗುರುವಾರಕ್ಕೆ ಮುಂದೂಡಿಕೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on:Jul 22, 2025 | 11:24 AM

Share

ನಟ ದರ್ಶನ್ ಅವರು ರೇಣುಕಾಸ್ವಾಮಿ (Renukaswamy) ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್ ದರ್ಶನ್​ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿದೆ. ಈ ಅರ್ಜಿ ವಿಚಾರಣೆ ಇಂದು (ಜುಲೈ 22) ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ದರ್ಶನ್​ಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತೆ ಆಗಿದೆ.

‘ದರ್ಶನ್ ಪರ ಕಪಿಲ್​ ಸಿಬಲ್ ವಾದ ಮಂಡಿಸಬೇಕಿತ್ತು.. ಆದರೆ, ಅವರಿಗೆ ಬೇರೆ ಪ್ರಕರಣದಲ್ಲಿ ಇಂದು ವಾದ ಮಂಡಿಸಬೇಕಿದೆ. ನಿನ್ನೆ ರಾತ್ರಿ ನನಗೆ ಈ ಕೇಸ್ ಬಂತು. ಆದರೆ, ಇಷ್ಟು ಬೇಗ ಕೇಸ್​ನ ವಾದ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಒಂದು ಒಂದು ದಿನ ಸಮಯ ಕೇಳಿದ್ದೇನೆ. ಇದಕ್ಕೆ ಸುಪ್ರೀಂಕೋರ್ಟ್ ಸಮ್ಮತಿ ಕೊಟ್ಟಿದೆ. ಹೀಗಾಗಿ, ಈ ಅರ್ಜಿ ವಿಚಾರಣೆ ಗುರುವಾರಕ್ಕೆ (ಜುಲೈ 24) ಮುಂದೂಡಲ್ಪಟ್ಟಿದೆ’ ಎಂದು ದರ್ಶನ್ ಪರ ಹಿರಿಯ ವಕೀಲ ಸಿದ್ದಾರ್ಥ್ ದವೆ ಹೇಳಿಕೆ ನೀಡಿದ್ದಾರೆ.

‘ನಾನು ಬಂಧನದ ಕಾರಣಗಳ ಬಗ್ಗೆ ವಾದ ಮಂಡಿಸುವುದಿಲ್ಲ. ಕೇಸ್​ನ ಮೆರಿಟ್ಸ್ ಮೇಲೆ ವಾದ ಮಂಡಿಸುತ್ತೇನೆ’ ಎಂದು ಕೂಡ ಅವರು ಹೇಳಿದ್ದಾರೆ. ಹೀಗಾಗಿ, ದರ್ಶನ್ ಕೇಸ್​ನಲ್ಲಿ ಗುರುವಾರ ತೀರ್ಪು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ
Image
ದಳಪತಿ ವಿಜಯ್ ಕೊನೆಯ ಸಿನಿಮಾಗೆ ಪಡೆದ ಸಂಭಾವನೆ ಇಷ್ಟೊಂದಾ?
Image
‘ಸು ಫ್ರಮ್ ಸೋ’ ಚಿತ್ರದ ಪ್ರೀಮಿಯರ್ ಶೋ ನೋಡಿ ಹೊಗಳಿದ ಪ್ರೇಕ್ಷಕರು
Image
‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾ ಕಲೆಕ್ಷನ್; ಯಾವುದು ಪಾಸ್, ಯಾವುದು ಫೇಲ್?
Image
ಈ ದಿನಂದು ‘ಕಣ್ಣಪ’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ?

ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎಲ್ಲಾ 17 ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪೈಕಿ ಎ1 ಪವಿತ್ರಾ ಗೌಡ, ಎ2 ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ.  ಈ ಪ್ರಕರಣದಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸುಪ್ರೀಂಕೋರ್ಟ್ ಅಭಿಪ್ರಾಯ ಏನು?

‘ದರ್ಶನ್ ಜಾಮೀನು ಅರ್ಜಿಯನ್ನು ಏಕೆ ರದ್ದು ಮಾಡಬಾರದು’ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ದರ್ಶನ್ ಪರ ವಕೀಲರ ಬಳಿ ಕೇಳಿತ್ತು. ಅಲ್ಲದೆ, ದರ್ಶನ್​ಗೆ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ಕೂಡ ಹೇಳಿತ್ತು. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಅವರಿಗೆ ಸಂಕಷ್ಟ ಹೆಚ್ಚಲಿದೆ. ಅವರ ‘ಡೆವಿಲ್’ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಲ್ಲಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:22 am, Tue, 22 July 25

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ