ದರ್ಶನ್ ಜೈಲಿನಲ್ಲಿರುವಾಗ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ; ಕಳುವಾಗಿದ್ದೇನು?

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಈ ನಡುವೆ ಅವರ ಪತ್ನಿ ವಿಜಯಲಕ್ಷ್ಮೀ ಅವರ ಮನೆಯಲ್ಲಿ 3 ಲಕ್ಷ ರೂಪಾಯಿಗಳ ಕಳ್ಳತನ ನಡೆದಿದೆ. ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮೀ ಹೇಳಿದ್ದಾರೆ. ವಿಜಯಲಕ್ಷ್ಮೀ  ಮ್ಯಾನೇಜರ್ ನಾಗರಾಜ್ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲು ಮಾಡಿದ್ದಾರೆ.

ದರ್ಶನ್ ಜೈಲಿನಲ್ಲಿರುವಾಗ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ; ಕಳುವಾಗಿದ್ದೇನು?
ದರ್ಶನ್-ವಿಜಯಲಕ್ಷ್ಮೀ

Updated on: Sep 13, 2025 | 2:25 PM

ನಟ ದರ್ಶನ್ (Darshan) ಅವರು ಸದ್ಯ ಜೈಲಿನಲ್ಲಿ ಇದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಅವರು ಮತ್ತೆ ಜೈಲು ವಾಸ ಅನುಭವಿಸುವಂತೆ ಆಗಿದೆ. ಹೀಗಿರುವಾಗಲೇ ವಿಜಯಲಕ್ಷ್ಮೀ ಮನೆಯಲ್ಲಿ ಕಳ್ಳತನ ನಡೆದಿದೆ. ಬರೋಬ್ಬರಿ 3 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಈ ವಿಚಾರ ಶಾಕಿಂಗ್ ಎನಿಸಿದೆ. ಇದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿದೆ. ಯಾರ ಮೇಲೆ ಅನುಮಾನ ಇದೆ ಎಂಬುದನ್ನು ವಿಜಯಲಕ್ಷ್ಮೀ ಅವರು ವಿವರಿಸಿದ್ದಾರೆ.

ವಿಜಯಲಕ್ಷ್ಮೀ ಅವರು ಹೊಸಕೆರೆಹಳ್ಳಿಯ ಪ್ರೆಸ್ಟೀಜ್ ಅಪಾರ್ಟ್​​ಮೆಂಟ್​ನಲ್ಲಿ ವಾಸವಾಗಿದ್ದಾರೆ. ಅವರ ಮನೆಯಿಂದ 3 ಲಕ್ಷ ರೂಪಾಯಿ ಕದ್ದುಕೊಂಡು ಹೋಗಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಜಯಲಕ್ಷ್ಮೀ  ಮ್ಯಾನೇಜರ್ ನಾಗರಾಜ್ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ದಾಖಲು ಮಾಡಿದ್ದಾರೆ.

ಸೆಪ್ಟೆಂಬರ್ 4-8ರ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ವಿಜಯಲಕ್ಷ್ಮೀ ಅವರು ನಾಗಾರಾಜು ಬಳಿ ಸ್ವಲ್ಪ ಹಣವನ್ನು ಬೆಡ್​ರೂಂ ವಾರ್ಡ್​ರೋನಲ್ಲಿ ಇರುವಂತೆ ಸೂಚಿಸಿದ್ದರು. ಆ ಬಳಿಕ ಇವರು ಮೈಸೂರಿಗೆ ತೆರಳಿದ್ದರು. ಸೆಪ್ಟೆಂಬರ್ 8ರಂದು ಬಂದು ನೋಡಿದಾಗ ಹಣ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರನ್ನು ಕೇಳಿದರೂ ಯಾರೊಬ್ಬರೂ ಹಣದ ಬಗ್ಗೆ ಮಾಹಿತಿ ನೀಡಲಿಲ್ಲ. ಹೀಗಾಗಿ, ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ
ಆ ಒಂದು ಶಬ್ದ ಬಳಕೆ ಮಾಡಿದ್ದಕ್ಕೆ ಆಕ್ರೋಶ; ಕಪಿಲ್ ಶೋ ನಿಲ್ಲಿಸೋ ಎಚ್ಚರಿಕೆ
‘ನೀವು ಊಹಿಸಿದಂತೆ ಕಥೆ ನಡೆಯಲ್ಲ’; ‘ಕರ್ಣ’ ಬಗ್ಗೆ ಕಿರಣ್ ರಾಜ್ ಹಿಂಟ್
ಜೀ ಕನ್ನಡ ವೇದಿಕೆ ಮೇಲೆ ಅನುಶ್ರೀ ಮಡಿಲು ತುಂಬಿದ ತಾರಾ; ಮಗಳಂತೆ ಭಾವುಕ
‘ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ’; ಅನುಶ್ರೀ

ಇದನ್ನೂ ಓದಿ: ದರ್ಶನ್ ಜೈಲು ಪಾಲಾದರೂ ಮೈಸೂರು ನಂಟು ಮರೆಯದ ವಿಜಯಲಕ್ಷ್ಮೀ

ಅನುಮಾನ ಯಾರ ಮೇಲೆ?

ಸದ್ಯ ವಿಜಯಲಕ್ಷ್ಮೀ ಅವರು ಮನೆ ಕೆಲಸದವರ ಮೇಲೆ ಅನುಮಾನ ಹೊರಹಾಕಿದ್ದಾರೆ. ಮನೆ ಕೆಲಸದವರ ಮೇಲೆ ದೂರು ದಾಖಲು ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದಾರೆ.

ನೋವಿನಲ್ಲಿ ವಿಜಯಲಕ್ಷ್ಮೀ

ವಿಜಯಲಕ್ಷ್ಮೀ ಅವರು ಸದ್ಯ ನೋವಿನಲ್ಲಿ ಇದ್ದಾರೆ. ದರ್ಶನ್ ಬಿಡುಗಡೆ ಕಾಣಬೇಕು ಎಂದು ಅವರು ಈ ಮೊದಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಕೆ ಮಾಡಿದ್ದರು. ಆ ಬಳಿಕ ದರ್ಶನ್ ಅವರು ಬಿಡುಗಡೆ ಕಂಡಿದ್ದರು. ಆದರೆ, ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಹೀಗಾಗಿ, ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಇದರಿಂದ ವಿಜಯಲಕ್ಷ್ಮೀ ಬೇಸರಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:48 pm, Sat, 13 September 25