ದಿಲ್ಲಿಗೆ ಆಗಮಿಸಿದ ಪುತ್ರಿ; 3 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆಯಲ್ಲಿ ಕಂಠೀರವ ಸ್ಟುಡಿಯೋಗೆ ಅಪ್ಪು ಅಂತಿಮಯಾತ್ರೆ

| Updated By: preethi shettigar

Updated on: Oct 30, 2021 | 2:22 PM

502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆ ‌ಆಗಮಿಸಲಿದ್ದು, ಏರ್ಪೊಟ್​ನಿಂದ ನೇರವಾಗಿ ಕಂಠಿರಣ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎಂದು ಮಾಹಿತಿ ಲಭ್ಯವಾಗಿದೆ.

ದಿಲ್ಲಿಗೆ ಆಗಮಿಸಿದ ಪುತ್ರಿ; 3 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆಯಲ್ಲಿ ಕಂಠೀರವ ಸ್ಟುಡಿಯೋಗೆ ಅಪ್ಪು ಅಂತಿಮಯಾತ್ರೆ
ಮೂರು ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆ
Follow us on

ಬೆಂಗಳೂರು: ನ್ಯೂಯಾರ್ಕ್​ನಿಂದ ದೆಹಲಿಗೆ ನಟ ಪುನೀತ್​ ರಾಜ್​ ಕುಮಾರ್​ ಪುತ್ರಿ ಆಗಮಿಸಿದ್ದಾರೆ.  ಏರ್ ಇಂಡಿಯಾ 102 ವಿಮಾನದಲ್ಲಿ ಪುನೀತ್​ ಪುತ್ರಿ ದೃತಿ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯಿಂದ 1.30 ರ ಏರ್ ಇಂಡಿಯಾ ವಿಮಾನವನ್ನು ಪುನೀತ್ ಪುತ್ರಿ ಏರಲಿದ್ದಾರೆ.  502 ವಿಮಾನದ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಜೆ 4.15 ಕ್ಕೆ ‌ಆಗಮಿಸಲಿದ್ದು, ಏರ್ಪೊಟ್​ನಿಂದ ನೇರವಾಗಿ ಕಂಠಿರಣ ಸ್ಟುಡಿಯೋ ಕಡೆಗೆ ಪುನೀತ್ ಪುತ್ರಿ ತೆರಳುತ್ತಾರೆ ಎಂದು ಮಾಹಿತಿ ಲಭ್ಯವಾಗಿದೆ.

3 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆ
ಪವರ್‌ ಸ್ಟಾರ್ ಪುನೀತ್ ರಾಜ್‌ ಕುಮಾರ್ ವಿಧಿವಶವಾದ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋಗೆ ಪಾರ್ಥಿವ ಶರೀರವನ್ನು ಸ್ಥಳಾಂತರ ಮಾಡಲಾಗುತ್ತದೆ. ಕಂಠೀರವ ಸ್ಟೇಡಿಯಂ, ಚಾಲುಕ್ಯ ಸರ್ಕಲ್, ಕಾವೇರಿ ಜಂಕ್ಷನ್, ಯಶವಂತಪುರ, ಗೊರಗುಂಟೆಪಾಳ್ಯ ಮಾರ್ಗವಾಗಿ ಸ್ಟುಡಿಯೋಗೆ ತೆರಳಲಾಗುತ್ತದೆ. ಸಂಜೆ 5 ಗಂಟೆಗೆ ಕಂಠೀರವ ಸ್ಟುಡಿಯೋ ತಲುಪಲು ಯೋಜನೆ ಸಿದ್ಧಪಡಿಸಲಾಗಿದೆ.

ಮಧ್ಯಾಹ್ನ 2.30ಕ್ಕೆ ಪುನೀತ್ ಪಾರ್ಥಿವ ಶರೀರದ ಮೆರವಣಿಗೆ
ಕಂಠೀರವ ಕ್ರೀಡಾಂಗಣದಿಂದ ಆರ್​ಆರ್​ಎಂಆರ್​ ರಸ್ತೆ, ಹಡ್ಸನ್ ಸರ್ಕಲ್, ಪೊಲೀಸ್ ಕಾರ್ನರ್, ಕೆ.ಜಿ.ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಪೋಸ್ಟ್ ಆಫೀಸ್ ರಸ್ತೆ, ಕೆ.ಆರ್.ಸರ್ಕಲ್ ಎಡ ತಿರುವು, ಶೇಷಾದ್ರಿ ರಸ್ತೆ, ಮಹಾರಾಣಿ ಮೇಲ್ಸೇತುವೆ, ಸಿಐಡಿ ಜಂಕ್ಷನ್, ಚಾಲುಕ್ಯ ವೃತ್ತ, ಹಳೇ ಹೈಗ್ರೌಂಡ್ಸ್ ಜಂಕ್ಷನ್, ಟಿ.ಚೌಡಯ್ಯ ರಸ್ತೆ, ವಿಂಡ್ಸರ್ ಮ್ಯಾನರ್ ಜಂಕ್ಷನ್, ಬಿಡಿಎ ಅಪ್ ಱಂಪ್, ಪಿ.ಜಿ.ಹಳ್ಳಿ ಕ್ರಾಸ್, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್, ಸ್ಯಾಂಕಿ ರಸ್ತೆ, ಮಲ್ಲೇಶ್ವರಂ 18ನೇ ಕ್ರಾಸ್, ಮಾರಮ್ಮ ವೃತ್ತ, ಬಿಹೆಚ್‌ಇಎಲ್ ಸರ್ವೀಸ್ ರಸ್ತೆ, ಬಿಹೆಚ್‌ಇಎಲ್ ವೃತ್ತ, ಯಶವಂತಪುರ ವೃತ್ತ, ಮೆಟ್ರೋ ಷಾಪ್, ಮಾರಪ್ಪನ ಪಾಳ್ಯ, ಗೋವರ್ಧನ್ ಥಿಯೇಟರ್ ಜಂಕ್ಷನ್, ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆ, ಎಂಇಐ ಬಸ್ ನಿಲ್ದಾಣ, ಗೊರಗುಂಟೆಪಾಳ್ಯ ಜಂಕ್ಷನ್, ಸಿಎಂಟಿಐ ಜಂಕ್ಷನ್, ಲಾರಿ ಅಸೋಸಿಯೇಷನ್ ಕಚೇರಿ, ಎಫ್‌ಟಿಐ ವೃತ್ತ ಮಾರ್ಗದಲ್ಲಿ ಕಂಠೀರವ ಸ್ಟುಡಿಯೋಗೆ ಸ್ಥಳಾಂತರ ಮಾಡಲಾಗುತ್ತದೆ.

ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರ ಕಾರ್ಯಕ್ಕೆ ಸಂಬಂಧಿಸಿದಂತೆ ಸಂಚಾರ ಮಾರ್ಗದಲ್ಲಿ ಬದಲಾವಣೆ
1)ಮೈಸೂರು ರಸ್ತೆಯಿಂದ ತುಮಕೂರು ರಸ್ತೆ ಕಡೆಗೆ ಹೋಗುವ ವಾಹನಗಳನ್ನು ನೈಸ್ ರಸ್ತೆ, ನಾಯಂಡಹಳ್ಳಿ, ನಾಗರಬಾವಿ ಮತ್ತು ಸುಮನಹಳ್ಳಿ ಜಂಕ್ಷನ್​ಗೆ ಬದಲಾಯಿಸಿದ್ದಾರೆ.
2)ತುಮಕೂರು ರಸ್ತೆಯಿಂದ ಬೆಂಗಳೂರು ನಗರಕ್ಕೆ ಮೇಲುಸೇತುವೆ ಮೇಲೆ ಹೋಗುವ ವಾಹನಗಳು ಮತ್ತು ತುಮಕೂರು ರಸ್ತೆಯಿಂದ ಮೈಸೂರು ರಸ್ತೆ ಕಡೆಗೆ ಸಿಎಂಟಿಐ ಜಂಕ್ಷನ್.
3)ಜಾಲಹಳ್ಳಿ ಕ್ರಾಸ್ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಟಿವಿಎಸ್​ ಕ್ರಾಸ್​ ಮತ್ತು ಸೋನಾಲ್ ಗಾರ್ಮೆಂಟ್ಸ್ ಬಳಿ.
4)ಮಹಾಲಕ್ಷ್ಮಿ ಬಡಾವಣೆ ಕಡೆಯಿಂದ ರಾಜಕುಮಾರ್ ಸಮಾಧಿ ಕಡೆಗೆ ಹೋಗುವ ವಾಹನಗಳು ಕೃಷ್ಣಾನಂದ ನಗರ ಜಂಕ್ಷನ್ ಬಳಿ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

ಇದನ್ನೂ ಓದಿ:
Puneeth Rajkumar Death: ರಾಘವೇಂದ್ರ ರಾಜ್​ಕುಮಾರ್ ಪುತ್ರ ವಿನಯ್​ರಿಂದ ಪುನೀತ್​ ಅಂತಿಮ ವಿಧಿವಿಧಾನ

ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

Published On - 12:59 pm, Sat, 30 October 21