ದೀಕ್ಷಿತ್​ ಶೆಟ್ಟಿ ಹೊಸ ಸಿನಿಮಾ ‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’; ಹೇಗಿದೆ ನೋಡಿ ಪೋಸ್ಟರ್​

‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’ ಸಿನಿಮಾದಲ್ಲಿ ದೀಕ್ಷಿತ್​ ಶೆಟ್ಟಿ, ಬೃಂದಾ ಆಚಾರ್ಯ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಬ್ಯಾಂಕ್​ ದರೋಡೆಯ ಕಥೆ ಈ ಸಿನಿಮಾದಲ್ಲಿ ಇರಲಿದೆ. ಸಿಂಪಲ್​ ಸುನಿ ಅವರಿಂದ ಈ ಚಿತ್ರದ ಪೋಸ್ಟರ್​ ಅನಾವರಣ ಮಾಡಿಸಲಾಗಿದೆ. ಚಿತ್ರಕ್ಕೆ ಶೇ.80 ಶೂಟಿಂಗ್​ ಮುಗಿದಿದ್ದು, ಕನ್ನಡದ ಜೊತೆ ತೆಲುಗಿನಲ್ಲೂ ಈ ಸಿನಿಮಾ ಬಿಡುಗಡೆ ಆಗಲಿದೆ.

ದೀಕ್ಷಿತ್​ ಶೆಟ್ಟಿ ಹೊಸ ಸಿನಿಮಾ ‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’; ಹೇಗಿದೆ ನೋಡಿ ಪೋಸ್ಟರ್​
‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’ ಪೋಸ್ಟರ್​ ಬಿಡುಗಡೆ
Follow us
ಮದನ್​ ಕುಮಾರ್​
|

Updated on: May 19, 2024 | 3:54 PM

ಈ ವರ್ಷ ‘ಬ್ಲಿಂಕ್​’ ಸಿನಿಮಾ ಮೂಲಕ ಗಮನ ಸೆಳೆದ ನಟ ದೀಕ್ಷಿತ್​ ಶೆಟ್ಟಿ (Deekshit Shetty) ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈಗ ಅವರು ‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’ (Bank Of Bhagya Lakshmi) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಹೆಚ್​.ಕೆ. ಪ್ರಕಾಶ್ ಅವರು ಬಂಡವಾಳ ಹೂಡಿದ್ದಾರೆ. ‘ರಂಗಿತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗಳ ಬಳಿಕ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ 5ನೇ ಸಿನಿಮಾ ಇದೆ. ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನಿರ್ದೇಶಕ ಸಿಂಪಲ್​ ಸುನಿ (Simple Suni) ಅವರು ಪೋಸ್ಟರ್​ ರಿಲೀಸ್​ ಮಾಡಿ ಶುಭ ಕೋರಿದ್ದಾರೆ.

ಹೊಸ ನಿರ್ದೇಶಕ ಅಭಿಷೇಕ್​ ಎಂ. ಅವರು ‘ಬ್ಯಾಂಕ್​ ಆಫ್​ ಭಾಗ್ಯಲಕ್ಷ್ಮಿ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಮೊದಲು ಸಿಂಪಲ್ ಸುನಿ ಜೊತೆ ‘ಸಿಂಪಲ್ಲಾಗ್​ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’, ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ-ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಅಭಿಷೇಕ್​ ಅವರಿಗೆ ಇದೆ. ಅಲ್ಲದೇ ಕೆಲವು ಸಿನಿಮಾಗಳಿಗೆ ಅವರು ಸಂಕಲನ ಕೂಡ ಮಾಡಿದ್ದಾರೆ. ತಮ್ಮದೇ VFX ಸ್ಟುಡಿಯೋ ಸಹ ಹೊಂದಿರುವ ಅವರು ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನಾಗುತ್ತಿದ್ದಾರೆ.

ನಟ ದೀಕ್ಷಿತ್​ ಶೆಟ್ಟಿ ಅವರು ‘ದಿಯಾ’, ‘ದಸರಾ’, ‘ಬ್ಲಿಂಕ್’ ಮುಂತಾದ ಸಿನಿಮಾಗಳಿಂದ ಜನಮೆಚ್ಚುಗೆ ಗಳಿಸಿದ್ದಾರೆ. ಅಲ್ಲದೇ ಪರಭಾಷೆಯಲ್ಲೂ ಅವರಿಗೆ ಒಳ್ಳೆಯ ಬೇಡಿಕೆ ಸೃಷ್ಟಿ ಆಗಿದೆ. ಅವರು ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾದಲ್ಲಿ ಒಂದು ಭಿನ್ನ ಪಾತ್ರ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ನಟಿ ಬೃಂದಾ ಆಚಾರ್ಯ ಅಭಿನಯಿಸುತ್ತಿದ್ದಾರೆ. ‘ಪ್ರೇಮಂ ಪೂಜ್ಯಂ’, ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗಳಲ್ಲೂ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದೆ.

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಬೆಂಗಳೂರು, ತುಮಕೂರು ಮತ್ತು ಚಿತ್ರದುರ್ಗ ಸುತ್ತಮುತ್ತ ಶೇಕಡ 80ರಷ್ಟು ಚಿತ್ರೀಕರಣ ಮುಗಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಶೂಟಿಂಗ್​ ಪೂರ್ಣಗೊಳ್ಳಲಿದೆ. ಆದಷ್ಟು ಬೇಗ ಸಿನಿಮಾ ರಿಲೀಸ್​ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಅವರು ಸಂಗೀತ ನೀಡುತ್ತಿದ್ದಾರೆ. ಅಭಿಷೇಕ್ ಜಿ. ಕಾಸರಗೋಡು ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ರಘು ಮೈಸೂರು ಅವರ ಕಲಾ ನಿರ್ದೇಶನ, ಭೂಷಣ್ ಅವರ ನೃತ್ಯ ನಿರ್ದೇಶನ ಈ ಸಿನಿಮಾಗಿದೆ.

ಇದನ್ನೂ ಓದಿ: Blink Movie Review: ಟೈಮ್​ ಟ್ರಾವೆಲ್​ ಮೂಲಕ ಸ್ಯಾಂಡಲ್​ವುಡ್​ಗೆ ಬಂದ ಈಡಿಪಸ್​

ಚಿತ್ರದ ಶೀರ್ಷಿಕೆಯೇ ಸೂಚಿಸುತ್ತಿರುವಂತೆ ಬ್ಯಾಂಕ್​ವೊಂದರಲ್ಲಿ ದರೋಡೆ ಮಾಡಲು ಹೊರಟವರ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಈ ಕಥೆಯನ್ನು ಹಾಸ್ಯ ಪ್ರಧಾನವಾಗಿ ತೆರೆಗೆ ತರಲಾಗುತ್ತಿದೆ. ಸಾಧು ಕೋಕಿಲ, ಉಷಾ ಭಂಡಾರಿ, ಗೋಪಾಲಕೃಷ್ಣ ದೇಶಪಾಂಡೆ, ಭರತ್, ಹರೀಶ್ ಸಮಷ್ಟಿ, ವಿಶ್ವನಾಥ್, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೀವತ್ಸ, ವಿನುತ್, ಶ್ರೇಯಸ್ ಶರ್ಮಾ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್