AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ಬಿಡುಗಡೆ: ‘ಸಖಿಯೇ’ ಎಂದ ದೀಕ್ಷಿತ್ ಶೆಟ್ಟಿ

Blink: 'ದಿಯಾ' ಸಿನಿಮಾ ದೀಕ್ಷಿತ್ ಶೆಟ್ಟಿ ನಟನೆಯ 'ಬ್ಲಿಂಕ್' ಸಿನಿಮಾದ ಹಾಡು ಬಿಡುಗಡೆ ಆಗಿದೆ. 'ಬ್ಲಿಂಕ್' ಸಿನಿಮಾ ಸೈನ್ಸ್ ಫಿಕ್ಷನ್ ಕತೆಯನ್ನು ಭಿನ್ನ ಮಾದರಿಯಲ್ಲಿ ಹೇಳಲಾಗಿದೆ.

‘ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ಬಿಡುಗಡೆ: 'ಸಖಿಯೇ' ಎಂದ ದೀಕ್ಷಿತ್ ಶೆಟ್ಟಿ
ಬ್ಲಿಂಕ್
ಮಂಜುನಾಥ ಸಿ.
|

Updated on: Oct 14, 2023 | 10:32 PM

Share

ಭಿನ್ನ ಪೋಸ್ಟರ್, ಹಾಡು, ಕತೆಯ ಮೂಲಕ ಗಮನ ಸೆಳೆಯುತ್ತಿರುವ ‘ಬ್ಲಿಂಕ್‘ (Blink) ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಮೊದಲು ಬಿಡುಗಡೆ ಆಗಿದ್ದ ಇದೇ ಸಿನಿಮಾದ ಆಗಂತುಕ ಹಾಡಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ‘ಬ್ಲಿಂಕ್’ ಸಿನಿಮಾದಿಂದ ‘ಸಖಿಯೆ’ ಎಂಬ ಮಧುರ ಹಾಡು ಬಿಡುಗಡೆ ಆಗಿದೆ. ಪ್ರಮೋದ್ ಮರವಂತೆ ಈ ಹಾಡಿಗೆ ಸಾಹಿತ್ಯ ರಚಿಸಿದ್ದು, ಸಿದ್ದಾರ್ಥ್ ಬೆಳ್ಮಣ್ಣು ಹಾಡಿದ್ದಾರೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಚಿತ್ರತಂಡವು ಕಾರ್ಯಕ್ರಮ ಆಯೋಜಿಸಿ ಹಾಡು ಬಿಡುಗಡೆ ಮಾಡಿದರು.

ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಿರ್ದೇಶಕ ಶ್ರೀನಿಧಿ ಬೆಂಗಳೂರು ”ರಂಗಭೂಮಿ ಜೊತೆಯಲ್ಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲದಿಂದ” ಎಂದರು.

ನಾಯಕ ನಟ ದೀಕ್ಷಿತ್ ಮಾತನಾಡಿ, ”ಬ್ಲಿಂಕ್’ ಸಿನಿಮಾ ಯಾವುದೇ ನಿಗದಿತ ಮಾದರಿಯ ಸಿನಿಮಾ ಅಲ್ಲ. ಸೈನ್ಸ್ ಫಿಕ್ಷನ್​ನ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿಯನ್ನು ಈ ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಸಿನಿಮಾ ಎಂದರೆ ಸಾಮಾನ್ಯವಾಗಿ ಒಂದು ಲ್ಯಾಬ್ ನಲ್ಲೋ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆ ಆಗಿರುತ್ತದೆ. ಆದರೆ ನಮ್ಮ ಸಿನಿಮಾ ಹಾಗಿಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ” ಎಂದರು.

ಇದನ್ನೂ ಓದಿ: ಹೆಜ್ಜಾರು ಸಿನಿಮಾ ರಿಲೀಸ್​ಗೆ ತಯಾರು: ಮೊದಲ ಹಾಡು ಬಿಡುಗಡೆ

ಸಿನಿಮಾದ ನಾಯಕಿ ಮಂದಾರ ಮಾತನಾಡಿ, ”ನಾನು ಸ್ವಪ್ನ ಎಂಬ ಪಾತ್ರದಲ್ಲಿ ನಟಿಸಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ‘ಬ್ಲಿಂಕ್’ ಸಿನಿಮಾದ ಚಿತ್ರಕತೆ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ‘ಲೂಸಿಯಾ’, ‘ಬೆಲ್ ಬಾಟಂ’, ‘ರಂಗಿತರಂಗ’ ಸಿನಿಮಾಗಳು ಹೇಗೆ ಬಾಕ್ಸ್ ಆಫೀಸ್​ನಲ್ಲಿ ಕ್ರಾಂತಿ ಮಾಡಿದವೋ, ಹಾಗೆಯೇ ಈ ಸಿನಿಮಾ ಸಹ ಮೈಲಿಗಲ್ಲಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

‘ಬ್ಲಿಂಕ್’ ಸಿನಿಮಾವು ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಭಿನ್ನ ಮಾದರಿಯ ಕತೆಯುಳ್ಳ ಸಿನಿಮಾ. ಈ ಸಿನಿಮಾ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ‘ಬ್ಲಿಂಕ್’ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ಪರಿಸ್ಥಿತಿಯನ್ನು ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. ಸೈ-ಫೈ ಶೈಲಿಯ ಕತೆಯನ್ನು ಹೊಂದಿರುವ ‘ಬ್ಲಿಂಕ್’ ಸಿನಿಮಾಕ್ಕೆ ನಾಯಕ ನಟರಾಗಿ ‘ದಿಯಾ’ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು, ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು ಸಂಜೀವ್ ಜಾಗಿರ್ದಾರ್ ರವರ ಸಂಕಲನ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ