AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡವರ ಸಣ್ಣತನ: ಯಶ್ ತಾಯಿ ಪುಷ್ಪಲತಾಗೆ ಟಾಂಗ್ ಕೊಟ್ಟ ನಟಿ ದೀಪಿಕಾ

Deepika Das and Yash Mother: ನಟಿ ದೀಪಿಕಾ ದಾಸ್, ಸ್ಟಾರ್ ನಟ ಯಶ್ ಅವರ ಸಂಬಂಧಿ. ಯಶ್ ತಾಯಿ ಪುಷ್ಪ ಅವರು ದೀಪಿಕಾಗೆ ದೊಡ್ಡಮ್ಮನಾಗಬೇಕು. ಆದರೆ ಇತ್ತೀಚೆಗಿನ ಸಂದರ್ಶನದಲ್ಲಿ ದೀಪಿಕಾ ದಾಸ್ ಬಗ್ಗೆ ಯಶ್ ತಾಯಿ ತುಚ್ಛವಾಗಿ ಮಾತನಾಡಿದ್ದಾರೆ. ಅದಕ್ಕೆ ನಟಿ ದೀಪಿಕಾ ದಾಸ್ ಸೂಕ್ತ ಪ್ರತ್ಯುತ್ತರವನ್ನೇ ನೀಡಿದ್ದಾರೆ. ದೀಪಿಕಾ ದಾಸ್ ಹೇಳಿದ್ದೇನು? ಇಲ್ಲಿದೆ ಮಾಹಿತಿ...

ದೊಡ್ಡವರ ಸಣ್ಣತನ: ಯಶ್ ತಾಯಿ ಪುಷ್ಪಲತಾಗೆ ಟಾಂಗ್ ಕೊಟ್ಟ ನಟಿ ದೀಪಿಕಾ
Yash Deepika
ಮಂಜುನಾಥ ಸಿ.
|

Updated on: Aug 23, 2025 | 7:22 PM

Share

ಯಶ್ (Yash) ತಾಯಿ ಪುಷ್ಪ, ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಆದರೆ ಸಿನಿಮಾಕ್ಕಿಂತಲೂ ತಮ್ಮ ಹೇಳಿಕೆಗಳಿಂದಲೇ ಹೆಚ್ಚು ಸುದ್ದು ಮಾಡುತ್ತಿದ್ದಾರೆ. ಯಶ್, ಕಾಯಕದಲ್ಲಿ ನಂಬಿಕೆ ಇಟ್ಟರೆ ಯಶ್ ಅವರ ತಾಯಿ ‘ಕ್ಯಾತೆ’ಯಲ್ಲಿ ನಂಬಿಕೆ ಇಟ್ಟಂತಿದೆ. ಪುಷ್ಪ ಅವರು ನಿರ್ಮಿಸಿದ್ದ ‘ಕೊತ್ತಲವಾಡಿ’ ಸಿನಿಮಾ ಸೋತಿದೆ. ಸಿನಿಮಾ ಸೋತ ಬಳಿಕ ನೀಡಿದ ಸಂದರ್ಶನದಲ್ಲಿ ಸಿನಿಮಾ ಸೋಲಿಗೆ ಕೆಆರ್​ಜಿ ಫಿಲಮ್ಸ್​ನ ನಿರ್ಮಾಪಕ ಕಾರ್ತಿಕ್ ಗೌಡ ಕಾರಣ ಎಂದು ದೂರಿದರು. ಅದೇ ಸಂದರ್ಶನದಲ್ಲಿ ನಟಿ, ಸಂಬಂಧಿಯೂ ಆಗಿರುವ ದೀಪಿಕಾ ದಾಸ್ ಬಗ್ಗೆ ವಿನಾಕಾರಣ ತುಚ್ಛವಾಗಿ ಮಾತನಾಡಿದರು. ಇದೀಗ ದೀಪಿಕಾ ದಾಸ್ ಸರಿಯಾಗಿ ಪ್ರತ್ಯುತ್ತರ ನೀಡಿದ್ದಾರೆ.

ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಯಶ್ ಅವರ ತಾಯಿ ಪುಷ್ಪಲತಾಗೆ ಸಂದರ್ಶಕಿ, ‘ನಿಮ್ಮ ಮುಂದಿನ ಸಿನಿಮಾಕ್ಕೆ ದೀಪಿಕಾ ದಾಸ್ ನಾಯಕಿಯಂತೆ?’ ಎಂಬ ಪ್ರಶ್ನೆ ಕೇಳಿದ್ದಾರೆ. ಪ್ರಶ್ನೆಯಿಂದ ಸಿಟ್ಟಾದ ಪುಷ್ಪಲತಾ, ‘ದೀಪಿಕಾ ದಾಸ್‌ಗೂ ನಮಗೂ ಆಗಲ್ಲ. ಅವಳು ಯಾವ ದೊಡ್ಡ ಹೀರೊಯಿನ್ನು, ಯಾವ ಸಾಧನೆ ಮಾಡಿದ್ದಾಳೆ? ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು, ‘ನಮ್ಮ ಸಂಬಂಧವೇ ಆದರೂ ಅವರನ್ನು ದೂರ ಇಟ್ಟಿದ್ದೀವಿ. ಅವರ ಬಗ್ಗೆ ಯಾಕೆ ಕೇಳ್ತೀರಾ? ನನ್ನ ಮಗ ಬೈಯಲ್ವಾ? ಇನ್ನು ಬಹಳ ಹೀರೊಯಿನ್ ಇದ್ದಾರೆ, ಅವರ ಬಗ್ಗೆ ಬೇಕಾದರೆ ಕೇಳಿ. ದೀಪಿಕಾ ದಾಸ್ ಏನು ರಮ್ಯಾನಾ? ರಕ್ಷಿತಾನಾ? ಒಂದು ವೇಳೆ ದೊಡ್ಡದಾಗಿ ಸಾಧನೆ ಮಾಡಿದ್ದರೆ ಅವರ ಬಗ್ಗೆ ಕೇಳಿ ಅದು ಬಿಟ್ಟು ದೀಪಿಕಾ ದಾಸ್ ಕಥೆ ಯಾಕೆ?’ ಎಂದಿದ್ದಾರೆ.

ಇದನ್ನೂ ಓದಿ:‘ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’; ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್

ನಟಿ ದೀಪಿಕಾ ದಾಸ್​ಗೆ ಯಶ್ ತಾಯಿ ದೊಡ್ಡಮ್ಮನಾಗಬೇಕು. ತಮ್ಮ ದೊಡ್ಡಮ್ಮ ತಮ್ಮ ಬಗ್ಗೆ ಕ್ಷುಲ್ಲಕವಾಗಿ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ದೀಪಿಕಾ ದಾಸ್, ‘ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡೋದ್ದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ. ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್‌ ಡ್ಯೂ ರೆಸ್ಪೆಕ್ಟ್ ಸ್ಟಾ‌ರ್ ಆಫ್ ಅವರ್ ಇಂಡಸ್ಟ್ರಿ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’ ಎಂದಿದ್ದರು.

ಮತ್ತೊಂದು ಪೋಸ್ಟ್ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸತ್ಯದ ತಲೆ ಮೇಲೆ ಹೊಡೆದಂತೆ ಹೇಳುವ ಬುದ್ಧಿ. ಯಾರೂ ಎಲ್ಲೂ ಹೋಗಿಲ್ಲ. ಯಾರೂ ನಮ್ಮ ಹತ್ರ ಬರುವ ಅವಶ್ಯಕತೆಯೂ ಇಲ್ಲ. ಅನಾವಶ್ಯಕವಾಗಿ ಇಲ್ಲದ್ದನ್ನು ಮಾತನಾಡಿ ನನ್ನ ಹಾಗೂ ನನ್ನ ಕುಟುಂಬವನ್ನು ಎಳೆದು ತರಬೇಡಿ. ದೊಡ್ಡವರ ಅತಿರೇಕದ ಸಣ್ಣತನ ಇನ್ನಾದರೂ ಬೇಡ. ಇನ್ನು ಇದರ ಬಗ್ಗೆ ನನಗೆ ಇನ್ನೇನೂ ಮಾತನಾಡುವುದಿಲ್ಲ’ ಎಂದು ದೀಪಿಕಾ ದಾಸ್ ಪೋಸ್ಟ್ ಹಂಚಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?