ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ ಬಿಜೆಪಿ ಸೇರಿದ್ದರು. ಆದರೆ, ಅವರು ಈಗ ಬಿಜೆಪಿ ಸೇರಿಲ್ಲ ಎನ್ನುತ್ತಿದ್ದಾರೆ.

ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
ಬಿಜೆಪಿ ಸದಸ್ಯತ್ವ ಪಡೆದ ಕಾರಣಕ್ಕೆ ಸೌದಿಯಲ್ಲಿ ಪ್ರಸಿದ್ಧ ನಟನ ಕಾರ್ಯಕ್ರಮ ಬಹಿಷ್ಕಾರ?
Follow us
ರಾಜೇಶ್ ದುಗ್ಗುಮನೆ
|

Updated on:Sep 06, 2024 | 11:03 AM

ತುಳು ಸಿನಿಮಾದ ನಟ ದೇವದಾಸ್ ಕಾಪಿಕಾಡ್ ಈಗ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಅವರು ಇತ್ತೀಚೆಗೆ ಬಿಜೆಪಿ ಸದಸ್ಯತ್ವ ಪಡೆದುಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸೌದಿ ಅರೇಬಿಯಾದಲ್ಲಿ ನಡೆಯಬೇಕಿದ್ದ ಇವರ ಕಾಮಿಡಿ ಶೋಗೆ ಬಹಿಷ್ಕಾರದ ಬೆದರಿಕೆ ಬಂದಿದೆ. ಈ ಬೆನ್ನಲ್ಲೇ ಅವರು ದೇವದಾಸ್ ಕಾಪಿಕಾಡ್ ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಮೂಡಿದೆ.

ತುಳುವಿನಲ್ಲಿ ದೇವದಾಸ್​ ಕಾಪಿಕಾಡ್ ದೊಡ್ಡ ಹೆಸರು ಮಾಡಿದ್ದಾರೆ. ಅವರು ಕಲಾವಿದನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ರಂಗಭೂಮಿಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ಬುಧವಾರ (ಸೆಪ್ಟೆಂಬರ್ 4) ಮಾಜಿ ಕೇಂದ್ರ ಸಚಿವ ಡಿ.ವಿ‌.ಸದಾನಂದ ಗೌಡ ಸಮ್ಮುಖದಲ್ಲಿ ಬಿಜಿಪಿ ಸದಸ್ಯತ್ವ ಪಡೆದಿದ್ದರು. ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಅವರು ಆನ್​ಲೈನ್ ಸದಸ್ಯತ್ವ ಪಡೆದಿದ್ದರು. ದೇವದಾಸ್ ಕಾಪಿಕಾಡ್ ಬಿಜೆಪಿ ಸದಸ್ಯತ್ವ ಪಡೆದ ಬಗ್ಗೆ ಪಕ್ಷದ ಕಡೆಯಿಂದ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಹಾಕಲಾಗಿತ್ತು.

ಫೋಸ್ಟ್ ವೈರಲ್ ಬೆನ್ನಲ್ಲೇ ದೇವದಾಸ್ ಕಾಪಿಕಾಡ್​ಗೆ ಬಹಿಷ್ಕಾರದ ಬಿಸಿ ತಟ್ಟಿತ್ತು. ಸೆ.13 ಹಾಗೂ 14ರಂದು ಸೌದಿಯ ಜುಬೈಲ್​ನ ಪುಲಿ ರೆಸ್ಟೋರೆಂಟ್​ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ‘ಬಿಜೆಪಿ ಸದಸ್ಯತ್ವ ಪಡೆದ ಹಿನ್ನೆಲೆ ಕಾರ್ಯಕ್ರಮ ಬಹಿಷ್ಕರಿಸಿ’ ಎಂಬ ಪೋಸ್ಟ್ ವೈರಲ್ ಆಗಿದೆ. ಬಹಿಷ್ಕಾರ ಬೆದರಿಕೆ ಬೆನ್ನಲ್ಲೇ ಕಾಪಿಕಾಡ್ ಉಲ್ಟಾ ಹೊಡೆದಿದ್ದಾರೆ.

‘ನಾನು ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಸದ್ಯ ಸಾಮಾಜಿಕ ತಾಣಗಳಲ್ಲಿ ಸ್ಪಷ್ಟನೆ ಆಡಿಯೋ ಹರಿಬಿಟ್ಟಿದ್ದಾರೆ. ಬಿಜೆಪಿ ನಾಯಕರ ಜೊತೆ ಕೇವಲ ಸೌಹಾರ್ದ ಭೇಟಿ ನಡೆದಿದೆ. ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ. ಯಾವುದೇ ಪಕ್ಷಕ್ಕೆ ಸೇರ್ಪಡೆಯೂ ಆಗಿಲ್ಲ. ಎಲ್ಲಾ ಪಕ್ಷಗಳ ಮುಖಂಡರ ಜೊತೆ ನನಗೆ ಉತ್ತಮ ಸಂಬಂಧ ಇದೆ’ ಎಂದು ದೇವದಾಸ್ ಕಾಪಿಕಾಡ್ ಸ್ಪಷ್ಟನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿಗೆ ತುಳು ಭಾಷೆಯ ಮೇಲೆ ಇರೋ ಪ್ರೀತಿ ಎಂಥದ್ದು? ಇಲ್ಲಿದೆ ವಿಡಿಯೋ 

ಸೌದಿ ಕಾರ್ಯಕ್ರಮದ ಬಹಿಷ್ಕಾರದ ಬೆದರಿಕೆಗೆ ದೇವದಾಸ್ ಕಾಪಿಕಾಡ್ ತತ್ತರಿಸಿದರಾ ಎಂಬ ಪ್ರಶ್ನೆ ಮೂಡಿದೆ. ತುಳು ರಂಗಭೂಮಿಯಲ್ಲಿ ದೇವದಾಸ್ ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Fri, 6 September 24

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ