AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್

'ಡೆವಿಲ್' ಕನ್ನಡ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಭಾರಿ ಪೈರಸಿ ಕಾಟಕ್ಕೆ ಸಿಲುಕಿದೆ. ಚಿತ್ರತಂಡ ಇದುವರೆಗೆ 10,000ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಿಸಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಂತೆ ಮನವಿ ಮಾಡಿದೆ. ವಿಶ್ವದಲ್ಲೇ ಒಂದು ಚಿತ್ರಕ್ಕೆ ಇಷ್ಟು ದೊಡ್ಡ ಪ್ರಮಾಣದ ಪೈರಸಿ ನಡೆದಿರುವುದು ಇದೇ ಮೊದಲು ಎಂದು ತಂಡ ಹೇಳಿದೆ. ಈ ವೈರಸ್‌ನಿಂದ ಚಿತ್ರೋದ್ಯಮಕ್ಕೆ ಭಾರಿ ನಷ್ಟವಾಗುತ್ತಿದೆ.

ಪೈರಸಿಯಲ್ಲೂ ದಾಖಲೆ ಬರೆದ ‘ಡೆವಿಲ್’; 10 ಸಾವಿರ ಲಿಂಕ್ ಡಿಲೀಟ್
ಡೆವಿಲ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 22, 2025 | 12:12 PM

Share

‘ಡೆವಿಲ್’ ಸಿನಿಮಾವು ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಂದುಕೊಂಡ ಮಟ್ಟಿಗೆ ಸಿನಿಮಾ ಗಳಿಕೆ ಮಾಡುತ್ತಿಲ್ಲ ಎನ್ನಲಾಗುತ್ತಿದೆ. ಹೀಗಿರುವಾಗಲೇ ಈ ಸಿನಿಮಾ ನಿರ್ಮಾಣ ಮಾಡಿದ ಸಂಸ್ಥೆ ಕಡೆಯಿಂದ ಒಂದು ಶಾಕಿಂಗ್ ವಿಷಯ ಬೆಳಕಿಗೆ ಬಂದಿದೆ. ಒಂದಲ್ಲ, ಎರಡಲ್ಲ, ಡೆವಿಲ್ ಸಿನಿಮಾದ 10 ಸಾವಿರ ಪೈರಸಿ ಲಿಂಕ್​ನ ಡಿಲೀಟ್ ಮಾಡಲಾಗಿದೆಯಂತೆ.

ಕನ್ನಡ ಸಿನಿಮಾಗಳು ಓಡುತ್ತಿಲ್ಲ ಎಂಬ ಮಾತು ಆಗಾಗ ಹೇಳುವುದನ್ನು ಕೇಳಿರಬಹುದು. ಈ ಮಧ್ಯೆ ಸಿನಿಮಾಗಳಿಗೆ ಪೈರಸಿ ಮಾರಕವಾಗುತ್ತಾ ಇದೆ. ಥಿಯೇಟರ್​ನಲ್ಲಿ ಜನರು ಸಿನಿಮಾ ನೋಡಲಿ ಎಂದು ಮಾಡಲಾಗುತ್ತದೆ. ಆದರೆ, ಕೆಲವರು ಪೈರಸಿ ಮಾಡುತ್ತಾರೆ. ಸಿನಿಮಾ ಥಿಯೇಟರ್​​ನಲ್ಲಿ ಇರುವಾಗಲೇ ಚಿತ್ರವನ್ನು ರೆಕಾರ್ಡ್ ಮಾಡಿ ಹರಿಬಿಡುತ್ತಾರೆ. ‘ಡೆವಿಲ್​’ಗೂ ಪೈರಸಿ ಕಾಟ ತಾಗಿದೆ.

‘ಡೆವಿಲ್’ ಸಿನಿಮಾ ರಿಲೀಸ್ ಆದ ಮರುದಿನವೇ ಎಚ್​​ಡಿ ಪ್ರಿಂಟ್ ಲೀಕ್ ಆಗಿದೆ. ಇದು ತಂಡಕ್ಕೆ ಚಿಂತೆ ಉಂಟು ಮಾಡಿದೆ. ಆ ಬಳಿಕ ನಿರಂತರವಾಗಿ ಪೈರಸಿ ಲಿಂಕ್​​ನ ತೆಗೆಸೋ ಕೆಲಸ ಆಗಿದೆ. ಡೆವಿಲ್ ಚಿತ್ರತಂಡದಿಂದ ಈ ಬಗ್ಗೆ ಅಧಿಕೃತ ಪೋಸ್ಟ್ ಹಾಕಲಾಗಿದೆ.

ಇದನ್ನೂ ಓದಿ: ಭಾನುವಾರ ಕೋಟಿಯಲ್ಲಿ ವ್ಯವಹಾರ ಮಾಡಿದ ‘ಡೆವಿಲ್’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಪೈರಸಿ ಅನ್ನೋದು ವೈರಸ್. ಇದು ಸಿನಿಮಾನ ಕೊಲ್ಲುತ್ತದೆ. ನಾವು ಇನ್ನೂ ಯುದ್ಧ ಮಾಡುತ್ತಲೇ ಇದ್ದೇವೆ. ಈವರೆಗೂ 10500ಕ್ಕೂ ಹೆಚ್ಚು ಪೈರಸಿ ಲಿಂಕ್ ಗಳನ್ನ ಡಿಲಿಟ್ ಮಾಡುವ ಕೆಲಸ ಆಗಿದೆ. ದಯವಿಟ್ಟು ಪೈರಸಿ ಮಾಡಬೇಡಿ. ಸಿನಿಮಾ ಥಿಯೇಟರ್ ನಲ್ಲಿ ನೋಡಿ’ ಎಂದು ತಂಡ ಮನವಿ ಮಾಡಿದೆ. ಸಿನಿಮಾ ಒಂದಕ್ಕೆ ಇಷ್ಟು ಪೈರಸಿ ಲಿಂಕ್ ಸೃಷ್ಟಿ ಆಗಿರೋದು ವಿಶ್ವ ಮಟ್ಟದಲ್ಲಿ ಇದೇ ಮೊದಲು ಎಂದು ತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ