AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್

Vasuki Vaibhav: ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಧನಂಜಯ್ ಸಾಹಿತ್ಯ ಬರೆದಿರುವ ‘ಉಡುಪಿ ಹೋಟೆಲು’ ಗೀತೆ ಬಿಡುಗಡೆಯಾಗಿದೆ. ಬಡವ ರಾಸ್ಕಲ್ ಚಿತ್ರದ ಈ ಗೀತೆಗೆ ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದು, ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದಾರೆ.

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್
ಧನಂಜಯ್ ಹಅಗೂ ಅಮೃತಾ
TV9 Web
| Edited By: |

Updated on: Aug 11, 2021 | 2:14 PM

Share

ಚಂದನವನದ ಭರವಸೆಯ ನಟ, ತಮ್ಮ ಅಭಿನಯದಿಂದ ಈಗ ಪರಭಾಷೆಗಳಿಗೂ ಪರಿಚಯವಾಗುತ್ತಿರುವ ಡಾಲಿ ಧನಂಜಯ್ ಅವರ ಬಹು ನಿರೀಕ್ಷಿತ ‘ಬಡವ ರಾಸ್ಕಲ್’ ಚಿತ್ರದ ‘ಉಡುಪಿ ಹೋಟೆಲು’ ಹಾಡು ಬಿಡುಗಡೆಯಾಗಿದೆ. ಖ್ಯಾತ ಗಾಯಕ ವಿಜಯ್ ಪ್ರಕಾಶ್, ಧನಂಜಯ್ ಬರೆದ ಸಾಹಿತ್ಯಕ್ಕೆ ದನಿಯಾಗಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜಿಸಿದ್ದಾರೆ. ಹಾಡು ತನ್ನ ಲವಲವಿಕೆಯ ಸಾಹಿತ್ಯದಿಂದ ಗಮನ ಸೆಳೆಯುತ್ತಿದೆ. ಪ್ರೇಯಸಿಗೆ ಪ್ರಿಯತಮನೊಬ್ಬ ಸಲ್ಲಿಸುವ ಕೋರಿಕೆಗಳ ರೂಪದಲ್ಲಿ ಹಾಡನ್ನು ರಚಿಸಲಾಗಿದ್ದು, ನಟ ಧನಂಜಯ್ ಹಾಗೂ ನಾಯಕಿ ಅಮೃತಾ ಅಯ್ಯಂಗಾರ್ ಅವರ ನಟನೆ ಮುದ ನೀಡುವಂತಿದೆ.

‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶನ ಮಾಡಿದ್ದು, ‘ಡಾಲಿ ಪಿಕ್ಚರ್ಸ್’ ಬ್ಯಾನರ್​ನಲ್ಲಿ ಚಿತ್ರ ತಯಾರಾಗುತ್ತಿದೆ. ಇತ್ತೀಚೆಗೆ ಘೋಷಣೆಯಾದ ಪವನ್ ಕುಮಾರ್ ನಿರ್ದೇಶನ ಹಾಗೂ ಪುನೀತ್ ರಾಜ್​ಕುಮಾರ್ ಅಭಿನಯದ ‘ದ್ವಿತ್ವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿರುವ ಪ್ರೀತಾ ಜಯರಾಮನ್ ಬಡವ ರಾಸ್ಕಲ್ ಚಿತ್ರಕ್ಕೆ ಕ್ಯಾಮೆರಾದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರದಲ್ಲಿ ಧನಂಜಯ್, ಅಮೃತಾ ಅವರೊಂದಿಗೆ ನಾಗಭೂಷಣ್, ರಂಗಾಯಣ ರಘು, ಪೂರ್ಣಚಂದ್ರ ಮೈಸೂರು ಮೊದಲಾದವರು ಅಭಿನಯಿಸುತ್ತಿದ್ದಾರೆ.

ಉಡುಪಿ ಹೋಟೆಲ್ ಹಾಡು ಇಲ್ಲಿದೆ:

ಚಂದನವನದ ಭರವಸೆಯ ನಟ ಡಾಲಿ ಧನಂಜಯ್ ಕೈಯಲ್ಲಿ ಹಲವಾರು ಚಿತ್ರಗಳಿವೆ. ‘ಪುಷ್ಪಾ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಾದರಿಯ ಸಿನಿಮಾಕ್ಕೂ ಅವರು ಕಾಲಿಡಲಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾದ ‘ಡಾಲಿ ಪಿಕ್ಚರ್ಸ್’ ಸಂಸ್ಥೆಯ ಮೂಲಕ ಚಿತ್ರ ನಿರ್ಮಾಣಕ್ಕೂ ಅವರು ಧುಮುಕಿದ್ದಾರೆ. ಬಡವ ರಾಸ್ಕಲ್ ಚಿತ್ರದ ಜೊತೆಗೆ ‘ಹೆಡ್ ಬುಷ್’ ಚಿತ್ರಕ್ಕೆ ಧನಂಜಯ್ ಸಹ ನಿರ್ಮಾಪಕರಾಗಿದ್ದಾರೆ. ನಟ ಧನಂಜಯ್ ಈಗ ಸಾಲು ಸಾಲು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ- 1’ರ ಜೊತೆಗೆ, ‘ಸಲಗ’, ‘ಬೈರಾಗಿ’, ‘ತೋತಾಪುರಿ’, ‘ಆರ್ಕೆಸ್ಟ್ರಾ’, ‘ರತ್ನನ್ ಪ್ರಪಂಚ ’ ಮೊದಲಾದ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಇದನ್ನೂ ಓದಿ: 

ಕೇವಲ 11ರೂ ಪಡೆದು ‘ಭಾಗ್ ಮಿಲ್ಖಾ ಭಾಗ್’​ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು ಈ ನಟಿ; ಕಾರಣವೇನು?

‘ಸೂಪರ್’ ಚಿತ್ರದ ನಟಿ ನಯನತಾರಾ ಎಂಗೇಜ್​​ಮೆಂಟ್​; ಇಲ್ಲಿದೆ ರಿಂಗ್​ ಜೊತೆ ವಿಡಿಯೋ ಸಾಕ್ಷಿ

(Dhananjay and Amritha starring Udupi Hotel song from the kannada Movie Badava Rascal released)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್