ಧನಂಜಯ ನಟನೆಯ ‘ಹೆಡ್ ಬುಷ್’ ಚಿತ್ರತಂಡದಿಂದ ಹೊಸ ಅಪ್​ಡೇಟ್​; ಶೂಟಿಂಗ್ ಮುಗಿಸಿದ ಟೀಂ

ಧನಂಜಯ ನಟನೆಯ ‘ಹೆಡ್ ಬುಷ್’ ಚಿತ್ರತಂಡದಿಂದ ಹೊಸ ಅಪ್​ಡೇಟ್​; ಶೂಟಿಂಗ್ ಮುಗಿಸಿದ ಟೀಂ
ಹೆಡ್ ಬುಷ್ ತಂಡ

ಭೂಗತ ದೊರೆ ಎಂ.ಪಿ. ಜಯರಾಜ್ ಜೀವನಾಧಾರಿತ ಸಿನಿಮಾ ‘ಹೆಡ್​ ಬುಷ್’. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970ರ ಸಮಯದಲ್ಲಿ ಬೆಂಗಳೂರಿನ ಭೂಗತ ಜಗತ್ತು ಹೇಗಿತ್ತು ಎಂಬುದನ್ನು ಈ ಸಿನಿಮಾ ಮೂಲಕ ಶೂನ್ಯ ತೋರಿಸಲು ಹೊರಟಿದ್ದಾರೆ.

TV9kannada Web Team

| Edited By: Rajesh Duggumane

Apr 25, 2022 | 4:40 PM

ಧನಂಜಯ ಅವರು (Dhananjay) ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ಪ್ರತಿ ಚಿತ್ರದ ಕೆಲಸವನ್ನು ವೇಗವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುತ್ತಾರೆ. ಈಗ ಅವರ ನಟನೆಯ ‘ಹೆಡ್ ಬುಷ್’ ಚಿತ್ರದ (Head Bush) ಶೂಟಿಂಗ್ ಪೂರ್ಣಗೊಂಡಿದೆ. ಸಿನಿಮಾ ತಂಡ ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಭಾಗಿಯಾಗಲಿದೆ. ಈ ವಿಚಾರ ಕೇಳಿ ಅವರ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಬೆಂಗಳೂರಿನಲ್ಲೇ ಈ ಸಿನಿಮಾದ ಶೂಟಿಂಗ್ ನಡೆದಿದೆ. ಸಿನಿಮಾದ ಕಥೆ ರೆಟ್ರೋ ಶೈಲಿಯಲ್ಲಿ ಸಾಗಲಿದೆ.  ಭೂಗತ ದೊರೆ ಎಂ.ಪಿ. ಜಯರಾಜ್ ಜೀವನಾಧಾರಿತ ಸಿನಿಮಾ ‘ಹೆಡ್​ ಬುಷ್’. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970ರ ಸಮಯದಲ್ಲಿ ಬೆಂಗಳೂರಿನ ಭೂಗತ ಜಗತ್ತು ಹೇಗಿತ್ತು ಎಂಬುದನ್ನು ಈ ಸಿನಿಮಾ ಮೂಲಕ ಶೂನ್ಯ ತೋರಿಸಲು ಹೊರಟಿದ್ದಾರೆ. ಈ ಚಿತ್ರಕ್ಕಾಗಿ ಅನೇಕ ಸೆಟ್​ಗಳನ್ನು ಹಾಕಲಾಗಿದೆ. ಜಯರಾಜ್ ಪಾತ್ರದಲ್ಲಿ ಧನಂಜಯ ಅವರು ಕಾಣಿಸಿಕೊಂಡಿದ್ದಾರೆ.

ಫಿಲ್ಮ್​ ಮೇಕಿಂಗ್​​​ನಲ್ಲಿ ಎಂ.ಎಸ್.ಸಿ. ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಕೆಲಸ ಮಾಡಿದ ಅನುಭವ ಪಡೆದಿದ್ದಾರೆ. ಡಾಲಿ ಧನಂಜಯ ಜತೆಗೆ ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಸಿಂಹ, ಹಿರಿಯ ನಟ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಪರಭಾಷೆಯಲ್ಲಿ ಗುರುತಿಸಿಕೊಂಡಿರುವ ಪಾಯಲ್ ಅವರು ಈ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚರಣ್ ರಾಜ್ ಸಂಗೀತ, ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿದೆ. ಬಾದಲ್ ನಂಜುಂಡಸ್ವಾಮಿ ಚಿತ್ರಕ್ಕೆ ಕಲಾ ನಿರ್ದೇಶನ ಮಾಡಿದ್ದಾರೆ.

ಧನಂಜಯ​ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ‘ಡಾಲಿ’, ‘ತೋತಾಪುರಿ’, ‘ಮಾನ್ಸೂನ್​ ರಾಗ’, ‘ಬೈರಾಗಿ’, ‘ಪುಷ್ಪ 2’ ಮೊದಲಾದ ಸಿನಿಮಾಗಳಲ್ಲಿ ಧನಂಜಯ​ ನಟಿಸುತ್ತಿದ್ದಾರೆ. ಇತ್ತೀಚೆಗೆ ‘ತೋತಾಪುರಿ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಧನಂಜಯ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಸ್ಪೆಷಲ್ ರೋಲ್​ ಅಂತ ಕರ್ಕೊಂಡು ಹೋದ್ರು, ಚಡ್ಡಿಯಲ್ಲೆಲ್ಲ ನಿಲ್ಸಿದ್ರು’; ಧನಂಜಯ

ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?

Follow us on

Related Stories

Most Read Stories

Click on your DTH Provider to Add TV9 Kannada