AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್

Badava Rascal: ‘ಬಡವ ರಾಸ್ಕಲ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿದೆ. ಧನಂಜಯ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಗಮನ ಸೆಳೆದಿವೆ.

Dhananjaya: ಡಿಸೆಂಬರ್​ನಲ್ಲಿ ಧನಂಜಯ್ ಅಭಿಮಾನಿಗಳಿಗೆ ಸಿನಿ ಸುಗ್ಗಿ; ‘ಪುಷ್ಪ’ ಚಿತ್ರದ ಬೆನ್ನಲ್ಲೇ ಈ ಸಿನಿಮಾ ರಿಲೀಸ್
‘ಬಡವ ರಾಸ್ಕಲ್’ ಚಿತ್ರತಂಡ ಬಿಡುಗಡೆ ಮಾಡಿರುವ ನೂತನ ಪೋಸ್ಟರ್
TV9 Web
| Edited By: |

Updated on: Oct 07, 2021 | 11:45 AM

Share

ಸ್ಯಾಂಡಲ್​ವುಡ್ ನಟ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅವರ ನಟನೆಯ ಚಿತ್ರಗಳು ತಮ್ಮ ಬಿಡುಗಡೆಯ ದಿನಾಂಕವನ್ನೂ ಘೋಷಿಸುತ್ತಿದ್ದು, ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಅವರ ನಟನೆಯ ‘ರತ್ನನ್ ಪ್ರಪಂಚ’ ಚಿತ್ರವು ಅಕ್ಟೋಬರ್ 22ರಂದು ಒಟಿಟಿಯಲ್ಲಿ ನೇರವಾಗಿ ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ‘ಬಡವ ರಾಸ್ಕಲ್’ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಅಭಿಮಾನಿಗಳಿಗೆ ಮತ್ತೂ ಖುಷಿ ನೀಡುವ ವಿಚಾರವೆಂದರೆ, ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಡಿಸೆಂಬರ್ 24ರ ಕ್ರಿಸ್ಮಸ್ ಹಬ್ಬದಂದು ಈ ಚಿತ್ರವು ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಮೂಲಕ ಡಿಸೆಂಬರ್ ತಿಂಗಳಲ್ಲಿ ಧನಂಜಯ್ ನಟನೆಯ ಎರಡು ಚಿತ್ರಗಳು ಒಂದರ ಹಿಂದೆ ಒಂದು ಬಿಡುಗಡೆಯಾಗಲಿವೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್ ಮೊದಲಾದ ಖ್ಯಾತ ನಟರೊಂದಿಗೆ ಧನಂಜಯ್ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ‘ಪುಷ್ಪ ದಿ ರೈಸ್’ ಚಿತ್ರವು ಡಿಸೆಂಬರ್ 17ರಂದು ಎಲ್ಲೆಡೆ ಬಿಡುಗಡೆಯಾಗಲಿದೆ. ಇದು ಧನಂಜಯ್ ನಟನೆಯ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ‘ಪುಷ್ಪ’ ಬಿಡುಗಡೆಯ ಮುಂದಿನ ವಾರದಲ್ಲಿ (ಡಿಸೆಂಬರ್ 24) ‘ಬಡವ ರಾಸ್ಕಲ್’ ಬಿಡುಗಡೆಯಾಗಲಿದೆ. ಈ ಮೂಲಕ ಅಭಿಮಾನಿಗಳಿಗೆ ಭರ್ಜರಿ ಮನೋರಂಜನೆಯನ್ನು ನೀಡಲು ಧನಂಜಯ್ ತಯಾರಾಗಿದ್ದಾರೆ.

ಈ ಕುರಿತು ಹಂಚಿಕೊಂಡ ಪೋಸ್ಟ್ ಇಲ್ಲಿದೆ:

View this post on Instagram

A post shared by Dhananjaya (@dhananjaya_ka)

ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದ ‘ಉಡುಪಿ ಹೋಟೆಲು’ ಹಾಡು ಈಗಾಗಲೇ ಸಿನಿ ಪ್ರೇಮಿಗಳ ಮನಗೆದ್ದಿದೆ. ‘ಬಡವ ರಾಸ್ಕಲ್’ ಚಿತ್ರವನ್ನು ಶಂಕರ್ ಗುರು ನಿರ್ದೇಶನ ಮಾಡಿದ್ದು, ‘ಡಾಲಿ ಪಿಕ್ಚರ್ಸ್’ ಬ್ಯಾನರ್​ನಲ್ಲಿ ಚಿತ್ರ ತಯಾರಾಗುತ್ತಿದೆ. ಇತ್ತೀಚೆಗೆ ಘೋಷಣೆಯಾದ ಪವನ್ ಕುಮಾರ್ ನಿರ್ದೇಶನ ಹಾಗೂ ಪುನೀತ್ ರಾಜ್​ಕುಮಾರ್ ಅಭಿನಯದ ‘ದ್ವಿತ್ವ’ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿರುವ ಪ್ರೀತಾ ಜಯರಾಮನ್ ಬಡವ ರಾಸ್ಕಲ್ ಚಿತ್ರಕ್ಕೆ ಕ್ಯಾಮೆರಾದ ಜವಾಬ್ದಾರಿ ಹೊತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಧನಂಜಯ್, ಅಮೃತಾ ಅಯ್ಯಂಗಾರ್ ಅವರೊಂದಿಗೆ ನಾಗಭೂಷಣ್, ರಂಗಾಯಣ ರಘು, ಪೂರ್ಣಚಂದ್ರ ಮೈಸೂರು ಮೊದಲಾದ ಕಲಾವಿದರು ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ:

‘ಸಲಗ’ಕ್ಕೆ ಬಲ ನೀಡಲಿರುವ ಪುನೀತ್​ ರಾಜ್​ಕುಮಾರ್​; ಪ್ರೀ-ರಿಲೀಸ್​ ಇವೆಂಟ್​ಗೆ ಅಪ್ಪು ಅತಿಥಿ

Vijay Prakash: ‘ಉಡುಪಿ ಹೋಟೆಲು, ಮೂಲೆ ಟೇಬಲು’ ಎನ್ನುತ್ತಾ ಧನಂಜಯ್ ಬರೆದ ಹಾಡಿಗೆ ದನಿಯಾಗಿದ್ದಾರೆ ವಿಜಯ್ ಪ್ರಕಾಶ್

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?