AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದರ್ ಪ್ರಾಮಿಸ್’ ಬಳಿಕ ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ರಿಲೀಸ್​​ಗೆ ರೆಡಿ ಆದ ಡಾಲಿ ಧನಂಜಯ್

ಡಾಲಿ ಧನಂಜಯ್ ಹಾಗೂ ನಿರ್ದೇಶಕ ಶಂಕರ್ ಗುರು ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಮುಂಬರುವ ಡಿಸೆಂಬರ್ 24ರಂದು ಬಿಡುಗಡೆಯಾಗಲಿದೆ. ರೀಷ್ಮಾ ನಾಣಯ್ಯ ನಾಯಕಿಯಾಗಿರುವ ಈ ಚಿತ್ರದಲ್ಲಿ ಲೂಸ್ ಮಾದ ಯೋಗಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕ್ರಿಸ್‌ಮಸ್ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಲು ಸಜ್ಜಾಗಿದೆ.

‘ಮದರ್ ಪ್ರಾಮಿಸ್’ ಬಳಿಕ ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ರಿಲೀಸ್​​ಗೆ ರೆಡಿ ಆದ ಡಾಲಿ ಧನಂಜಯ್
ಧನಂಜಯ್
ರಾಜೇಶ್ ದುಗ್ಗುಮನೆ
|

Updated on: Jul 30, 2026 | 2:55 PM

Share

ಮುಖ್ಯಾಂಶಗಳು

  • ಕ್ರಿಸ್‌ಮಸ್ ಹಬ್ಬಕ್ಕೆ ‘ನಟರಾಕ್ಷಸ’ನ ಅಬ್ಬರ
  • ಡಿಸೆಂಬರ್ 24ಕ್ಕೆ ಚಿತ್ರಮಂದಿರಕ್ಕೆ ಲಗ್ಗೆ 
  • ಐದು ವರ್ಷಗಳ ಬಳಿಕ ಡಾಲಿ-ಶಂಕರ್ ಗುರು ಜುಗಲ್‌ಬಂದಿ:

ನಟ ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಿಸಿರೋ ‘ಮದರ್ ಪ್ರಾಮಿಸ್’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಈ ಚಿತ್ರದ ಗೆಲುವಿನ ಬಳಿಕ ಅವರು ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ಬಿಡುಗಡೆಗೆ ರೆಡಿ ಆಗಿದ್ದಾರೆ. ಈ ಚಿತ್ರದ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾದಿನಗಳ ಲಾಭ ಪಡೆಯಲು ಈ ಸಿನಿಮಾ ಡಿಸೆಂಬರ್ 24ರಂದು ಈ ಚಿತ್ರ ಅದ್ಧೂರಿಯಾಗಿ ತೆರೆಕಾಣಲಿದೆ. ವರ್ಷಾಂತ್ಯಕ್ಕೆ ಭರ್ಜರಿ ಮನರಂಜನೆಯ ಧಮಾಕಾ ನೀಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮತ್ತೆ ಒಂದಾಯಿತು ‘ಬಡವ ರಾಸ್ಕಲ್’ ಕಾಂಬಿನೇಷನ್

‘ಅಣ್ಣ ಫ್ರಮ್‌ ಮೆಕ್ಸಿಕೋ’ ಚಿತ್ರದಲ್ಲಿ ಮತ್ತೊಂದು ವಿಶೇಷತೆ ಇದೆ. 2021ರ ಡಿಸೆಂಬರ್‌ನಲ್ಲಿ ‘ಬಡವ ರಾಸ್ಕಲ್’ ಸಿನಿಮಾ ರಿಲೀಸ್ ಆಗಿ ಬಾಕ್ಸ್ ಆಫೀಸ್ ಸೂಪರ್ ಹಿಟ್ ಆಗಿತ್ತು. ಧನಂಜಯ್ ಅವರಿಗೆ ನಿರ್ಮಾಪಕರಾಗಿ ದೊಡ್ಡ ಬ್ರೇಕ್ ತಂದುಕೊಟ್ಟಿತ್ತು ಈ ಸಿನಿಮಾ. ಈ ಚಿತ್ರದ ಡೈರೆಕ್ಟರ್ ಶಂಕರ್ ಗುರು, ಈಗ ಎರಡನೇ ಬಾರಿಗೆ ಡಾಲಿಗೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅದೇ ಡಿಸೆಂಬರ್ ತಿಂಗಳ ಸೆಂಟಿಮೆಂಟ್‌ನೊಂದಿಗೆ ಈ ಹಿಟ್ ಜೋಡಿ ಕಂಬ್ಯಾಕ್ ಮಾಡುತ್ತಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ವಿಶೇಷ ಪಾತ್ರದಲ್ಲಿ ಲೂಸ್ ಮಾದ ಯೋಗಿ

ಪಕ್ಕಾ ಕಮರ್ಷಿಯಲ್ ಮತ್ತು ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಧನಂಜಯ್ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಇವರೊಂದಿಗೆ ರಂಗಾಯಣ ರಘು, ನಾಗಭೂಷಣ ಹಾಗೂ ಪೂರ್ಣಚಂದ್ರ ಮೈಸೂರು ಮೊದಲಾದವರು ಅಭಿನಯಿಸಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಲೂಸ್ ಮಾದ ಯೋಗಿ ಅವರು ಈ ಚಿತ್ರದಲ್ಲಿ ಅತ್ಯಂತ ವಿಶೇಷ ಹಾಗೂ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವುದು ಸಿನಿಮಾದ ತೂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್ ಹೀಗೆ ಹೇಳಿದ್ದೇಕೆ?

ವಾಸುಕಿ ವೈಭವ್ ಮ್ಯೂಸಿಕ್ ಮ್ಯಾಜಿಕ್

ಐರಾ ಫಿಲ್ಮ್ಸ್ ಹಾಗೂ ರಾಯಲ ಸ್ಟುಡಿಯೋಸ್ ಜಂಟಿ ಬ್ಯಾನರ್‌ನಡಿ ಅತ್ಯಂತ ಅದ್ಧೂರಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಹಾಡುಗಳು ಹಾಗೂ ಹಿನ್ನೆಲೆ ಸಂಗೀತದ ಮೇಲೆ ಈಗಾಗಲೇ ಭಾರಿ ಹೈಪ್ ಸೃಷ್ಟಿಯಾಗಿದೆ. ತಾಂತ್ರಿಕವಾಗಿ ಶ್ರೀಮಂತವಾಗಿ ಮೂಡಿಬಂದಿರುವ ಈ ಚಿತ್ರಕ್ಕೆ ಅಜಯ್ ಅವರ ಸಂಕಲನ ಹಾಗೂ ಗುಣ ಅವರ ಕಲಾ ನಿರ್ದೇಶನವಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ಚಿತ್ರತಂಡ, ಡಿಸೆಂಬರ್ 24ರ ಗ್ರ್ಯಾಂಡ್ ರಿಲೀಸ್‌ಗೆ ಕೌಂಟ್‌ಡೌನ್ ಶುರು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us