ಜಬರ್ದಸ್ತ್​ ಎಂಟ್ರಿ ನೀಡಿದ ‘ವಾಮನ’; ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಧನ್ವೀರ್​ ಮಿಂಚಿಂಗ್​

Vaamana Movie Teaser: ‘ವಾಮನ’ ಟೀಸರ್​ ಮೂಡಿಬಂದಿರುವ ರೀತಿಗೆ ಮಾಸ್​ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಧನ್ವೀರ್ ಗೌಡ ಎಂಟ್ರಿ ನೀಡಿದ್ದಾರೆ.

ಜಬರ್ದಸ್ತ್​ ಎಂಟ್ರಿ ನೀಡಿದ ‘ವಾಮನ’; ಸಿಕ್ಕಾಪಟ್ಟೆ ಮಾಸ್​ ಅವತಾರದಲ್ಲಿ ಧನ್ವೀರ್​ ಮಿಂಚಿಂಗ್​
ಧನ್ವೀರ್ ಗೌಡ
Follow us
TV9 Web
| Updated By: ಮದನ್​ ಕುಮಾರ್​

Updated on: Aug 16, 2022 | 7:15 AM

ಕನ್ನಡ ಚಿತ್ರರಂಗದಲ್ಲಿ ‘ಶೋಕ್ದಾರ್’ ಎಂದೇ ಫೇಮಸ್​ ಆಗಿರುವ ನಟ ಧನ್ವೀರ್ ಗೌಡ (Dhanveer Gowda) ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ವಾಮನ’ ಚಿತ್ರ (Vaamana Kannada Movie) ಸಖತ್​ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಿಂದ ಈಗೊಂದು ಟೀಸರ್ ಬಿಡುಗಡೆ ಮಾಡಲಾಗಿದೆ. ಜಬರ್ದಸ್ತ್ ಆಗಿ ಮೂಡಿಬಂದಿರುವ ಈ ಟೀಸರ್​ನಲ್ಲಿ ಧನ್ವೀರ್ ಅವರು ಪಕ್ಕಾ ಮಾಸ್ ಅವತಾರ ತಾಳಿದ್ದಾರೆ. ಹಲವು ಕಾರಣಗಳಿಂದ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾದ ಸೆಟ್, ಮೈ ನವಿರೇಳಿಸುವಂತಹ ಸಾಹಸ ದೃಶ್ಯಗಳು ಹೈಲೈಟ್​ ಆಗುತ್ತಿವೆ. ಅಷ್ಟೇ ಅಲ್ಲದೇ, ಧನ್ವೀರ್ ಗೌಡ ಅವರ ಹೊಸ ಗೆಟಪ್, ಕಿಕ್​ ನೀಡುವಂತಹ ಹಿನ್ನೆಲೆ ಸಂಗೀತ, ಅದ್ದೂರಿ ಮೇಕಿಂಗ್​ ಮುಂತಾದ ಅಂಶಗಳಿಂದಾಗಿ ‘ವಾಮನ’ ಟೀಸರ್ ‘ವಾಮನ’ ಚಿತ್ರ (Vaamana Teaser) ಸದ್ದು ಮಾಡುತ್ತಿದೆ.

‘ವಾಮನ’ ಟೀಸರ್​ ಮೂಡಿಬಂದಿರುವ ರೀತಿಗೆ ಮಾಸ್​ ಪ್ರೇಕ್ಷಕರು ಫಿದಾ ಆಗಿದ್ದಾರೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಅವರು ಗುಣ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 1.50 ನಿಮಿಷ ಇರುವ ‘ವಾಮನ’ ಟೀಸರ್ ಯೂಟ್ಯೂಬ್​ನಲ್ಲಿ ಧೂಳೆಬ್ಬಿಸುತ್ತಿದೆ. ಶಂಕರ್ ರಾಮನ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಧನ್ವೀರ್ ಗೌಡ ಅವರಿಗೆ ಜೋಡಿಯಾಗಿ ‘ಏಕ್ ಲವ್ ಯಾ’ ಖ್ಯಾತಿಯ ನಟಿ ರೀಷ್ಮಾ ನಾಣಯ್ಯ ಅಭಿನಯಿಸುತ್ತಿದ್ದಾರೆ. ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಈಗಾಗಲೇ ಶೇ. 70ರಷ್ಟು ಶೂಟಿಂಗ್ ಮಾಡಿರುವ ಚಿತ್ರತಂಡ, ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಚೇತನ್ ಕುಮಾರ್ ಅವರು ‘ಈಕ್ವಿನಾಕ್ಸ್ ಗ್ಲೋಬಲ್ ಎಂಟರ್​ಟೈನ್ಮೆಂಟ್’ ಬ್ಯಾನರ್​ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Har Ghar Tiranga: ಚಿತ್ರಮಂದಿರದ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
Aamir Khan: ಆಮಿ​ರ್​ ಖಾನ್​ ಮನೆ ಮೇಲೆ ಹಾರಾಡಿದ ರಾಷ್ಟ್ರ ಧ್ವಜ; ಫೋಟೋ ವೈರಲ್​
Image
ಸುದೀಪ್​, ಉಪ್ಪಿ, ತಾರಾ, ರಮೇಶ್​ ಮನೆ ಮೇಲೆ ತ್ರಿವರ್ಣ ಧ್ವಜ; ಇಲ್ಲಿದೆ ಫೋಟೋ ಗ್ಯಾಲರಿ
Image
‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಯಶ್ ಸಾಥ್​; ಫ್ಯಾನ್ಸ್ ಬಳಿ ರಾಕಿಂಗ್ ಸ್ಟಾರ್ ಹೊಸ ಕೋರಿಕೆ

ಇದು ಪಕ್ಕಾ ಸಾಹಸ ಪ್ರಧಾನ ಸಿನಿಮಾ ಎಂಬುದು ಟೀಸರ್ ನೋಡಿದರೆ ತಿಳಿಯುತ್ತದೆ. ಅದರ ಜೊತೆ ​ಲವ್ ಸ್ಟೋರಿ ಕೂಡ ಇರಲಿದೆ. ಸಖತ್​ ಕಮರ್ಷಿಯಲ್ ಆಗಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್, ತಾರಾ ಅನುರಾಧ, ಶಿವರಾಜ್ ಕೆ.ಆರ್. ಪೇಟೆ, ಕಾಕ್ರೋಚ್ ಸುಧಿ ಸೇರಿದಂತೆ ಅನೇಕ ಖ್ಯಾತ ನಟ-ನಟಿಯರು ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್ ಸಂಗೀತ ನಿರ್ದೇಶನ, ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್