ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ

‘ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್​ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ.

ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್​ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್​ಗೆ ಜೋಡಿ
Follow us
ರಾಜೇಶ್ ದುಗ್ಗುಮನೆ
|

Updated on:Jun 28, 2024 | 10:10 AM

ನಟಿ ಧನ್ಯಾ ರಾಮ್​ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಆಫರ್ ಸಿಕ್ಕಿದೆ. ‘ರಥಾವರ’ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಅವರು ‘ಚೌಕಿದಾರ್’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರು ನಟಿಸುತ್ತಿದ್ದು, ಧನ್ಯರಾಮ್ ಕುಮಾರ್ ಜೋಡಿಯಾಗಿದ್ದಾರೆ. ಈ ವಿಚಾರ ಕೇಳಿ ಧನ್ಯಾ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ನಿನ್ನ ಸನಿಹಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ಧನ್ಯಾ ರಾಮ್​ಕುಮಾರ್. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್​ಮೆಂಟ್’ ಚಿತ್ರದಲ್ಲೂ ಅವರು ಬಣ್ಣ ಹಚ್ಚಿದರು. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ಹೀರೋಯಿನ್ ಆಗಿ ಬಣ್ಣ ಹಚ್ಚುತ್ತಿದ್ದಾರೆ.

‘ಚೌಕಿದಾರ್’ ಕೇವಲ ಕನ್ನಡ ಮಾತ್ರವಲ್ಲದೆ ಬಹುಭಾಷೆಯಲ್ಲಿ ಸಿದ್ಧವಾಗುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ಲವರ್‌ ಬಾಯ್‌ ಆಗಿ ಪೃಥ್ವಿ ಅಂಬಾರ್‌ ನಟಿಸಿದ್ದರು. ಈ ಬಾರಿ ಅವರು ಆ್ಯಕ್ಷನ್ ಸಿನಿಮಾಗಳ ಮೂಲಕ ರಂಜಿಸಲು ರೆಡಿ ಆಗಿದ್ದಾರೆ. ಇದು ಕಂಪ್ಲೀಟ್ ಆ್ಯಕ್ಷನ್ ಸಿನಿಮಾವಲ್ಲ. ಫ್ಯಾಮಿಲಿ ಎಂಟರ್ ಟೈನರ್ ವಿಚಾರಗಳೂ ಚಿತ್ರದಲ್ಲಿ ಇವೆ.

ಇದನ್ನೂ ಓದಿ: ‘ದಿಯಾ’ ಖ್ಯಾತಿಯ ಪೃಥ್ವಿ ಅಂಬಾರ್​ ಹೊಸ ಸಿನಿಮಾ ‘ಜೂನಿ’: ಹೇಗಿದೆ ನೋಡಿ ಫಸ್ಟ್​ ಲುಕ್​

ಡಾ. ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ‘ವಿದ್ಯಾ ಶೇಖರ್ ಎಂಟರ್​ಟೇನ್​ಮೆಂಟ್’ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಜುಲೈ ಮೂರರಂದು ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ‘ಚೌಕಿದಾರ್’ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:00 am, Fri, 28 June 24

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ