‘ಕೆಟಿಎಂ’ ಸಿನಿಮಾ ಹಾಡು ಬಿಡುಗಡೆ, ಮುದ್ದಾಗಿ ಕಾಣ್ತಿದೆ ದೀಕ್ಷಿತ್-ಸಂಜನಾ ಜೋಡಿ

Dheekshith Shetty: ಬಹುಭಾಷಾ ನಟರಾಗಿ ಗುರುತಿಸಿಕೊಂಡಿರುವ ದೀಕ್ಷಿತ್ ಶೆಟ್ಟಿ, ಕನ್ನಡದಲ್ಲಿ ನಟಿಸಿರುವ ‘ಕೆಟಿಎಂ’ ಸಿನಿಮಾದ ಹೊಸ ಹಾಡೊಂದು ಬಿಡುಗಡೆ ಆಗಿದೆ.

‘ಕೆಟಿಎಂ’ ಸಿನಿಮಾ ಹಾಡು ಬಿಡುಗಡೆ, ಮುದ್ದಾಗಿ ಕಾಣ್ತಿದೆ ದೀಕ್ಷಿತ್-ಸಂಜನಾ ಜೋಡಿ
Follow us
ಮಂಜುನಾಥ ಸಿ.
|

Updated on:Feb 04, 2024 | 10:01 PM

ಕನ್ನಡದ ‘ದಿಯಾ’ (Dia) ಸಿನಿಮಾ ಮೂಲಕ ಗಮನಕ್ಕೆ ಬಂದ ನಟ ದೀಕ್ಷಿತ್ ಶೆಟ್ಟಿ (Dheekshith Shetty) ಈಗ ಬಹುಭಾಷಾ ನಟನಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಕೆಲವು ದೊಡ್ಡ ಪ್ರಾಜೆಕ್ಟ್​ಗಳನ್ನು ಬಾಚಿಕೊಂಡಿರುವ ದೀಕ್ಷಿತ್ ಶೆಟ್ಟಿ, ಕನ್ನಡ ಸಿನಿಮಾಗಳಲ್ಲಿ ನಟಿಸುವುದು ಬಿಟ್ಟಿಲ್ಲ. ತೆಲುಗಿನ ‘ದಸರಾ’, ರಶ್ಮಿಕಾ ಮಂದಣ್ಣ ಜೊತೆಗೆ ‘ಗರ್ಲ್ ಫ್ರೆಂಡ್’ ಸಿನಿಮಾಗಳಲ್ಲಿ ನಟಿಸಿರುವ ದೀಕ್ಷಿತ್‌ ಶೆಟ್ಟಿ ನಟಿಸಿರುವ ಕನ್ನಡ ಸಿನಿಮಾ ‘ಕೆಟಿಎಂ’ನ ಟೀಸರ್ ಈ ಹಿಂದೆ ಬಿಡುಗಡೆ ಆಗಿ ಸಖತ್ ಗಮನ ಸೆಳೆದಿತ್ತು. ಇದೀಗ ಸಿನಿಮಾದ ಹೊಸ ಹಾಡೊಂದು ಬಿಡುಗಡೆ ಆಗಿದ್ದು, ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾರ ಜೋಡಿ ಬಲು ಮುದ್ದಾಗಿ ಕಾಣುತ್ತಿದೆ.

ಸಿನಿಮಾ ತನ್ನ ಟೀಸರ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ನೀಡುತ್ತಿದೆ. ಕೆಟಿಎಂ ಸಿನಿಮಾದ ಹಾಡುಗಳು ಕೇಳುಗರನ್ನು ಮೋಡಿ ಮಾಡುತ್ತಿವೆ. ಈ ಹಿಂದೆ ಬಿಡುಗಡೆಯಾಗಿದ್ದ ಎರಡು ಸಾಂಗ್ಸ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ‌. ಮಿಲಿಯನ್ ವೀವ್ಸ್ ಪಡೆದುಕೊಂಡಿರುವ ಕೆಟಿಎಂ ಹಾಡುಗಳು ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚು ಮಾಡಿವೆ‌. ಇದೀಗ ಕೆಟಿಎಂ ಸಿನಿಮಾದ ಮೂರನೇ ಹಾಡು ಅನಾವರಣಗೊಂಡಿದೆ. ಎಲ್ಲಾ ನೀನೇನೆ ಎಂಬ ಮೆಲೋಡಿ ಹಾಡು ಇದೀಗ ಬಿಡುಗಡೆ ಆಗಿದ್ದು, ಧನಂಜಯ್ ರಂಜನ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಚೇತನ್ ರಾವ್ ಸಂಚಿತ್ ಹೆಗ್ಡೆ ಜೊತೆಗೂಡಿ ಧ್ವನಿಯಾಗುವುದರ ಜೊತೆಗೆ ಸಂಗೀತ ಒದಗಿಸಿದ್ದಾರೆ.

ಇದನ್ನೂ ಓದಿ:ತೆಲುಗು, ತಮಿಳು ಬಳಿಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟ ಕನ್ನಡದ ನಟ ದೀಕ್ಷಿತ್ ಶೆಟ್ಟಿ

ಈ ಹಿಂದೆ ‘ಅಥರ್ವ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದ ಅರುಣ್‌ ‘ಕೆಟಿಎಂ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಮಹಾಸಿಂಹ ಮೂವೀಸ್‌ ಬ್ಯಾನರ್‌ನಲ್ಲಿ ವಿನಯ್‌ ‘ಕೆಟಿಎಂ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನವಿರಾದ ಪ್ರೇಮಕಹಾನಿ ಇರುವ ‘ಕೆಟಿಎಂ’ ಸಿನಿಮಾದಲ್ಲಿ ದೀಕ್ಷಿತ್‌ ಶೆಟ್ಟಿ ನಾಲ್ಕು ವಿಭಿನ್ನ ಶೇಡ್‌ನ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಕಾಜಲ್‌ ಕುಂದರ್‌ ಹಾಗೂ ಸಂಜನಾ ನಾಯಕಿಯರಾಗಿದ್ದಾರೆ. ಉಳಿದಂತೆ ಉಷಾ ಭಂಡಾರಿ, ಪ್ರಕಾಶ್‌ ತುಮ್ಮಿನಾಡು, ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತು, ರಘು ರಾಮನಕೊಪ್ಪ, ಶಾನಿಲ್‌ ಗುರು, ಬಾಬು ಹಿರಣಯ್ಯ, ದೇವ್‌ ದೇವಯ್ಯ, ಅಭಿಷೇಕ್‌ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಸಿನಿಮಾಕ್ಕೆ ನವೀನ್‌ ಛಾಯಾಗ್ರಹಣ, ಅರ್ಜುನ್‌ ಕಿಟ್ಟು ಸಂಕಲನವಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರು ಸುತ್ತಮುತ್ತ “ಕೆಟಿಎಂ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಇದೇ ಫೆಬ್ರವರಿ 16ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದೀಕ್ಷಿತ್ ಶೆಟ್ಟಿ ಪ್ರಸ್ತುತ ತೆಲುಗಿನ ‘ಗರ್ಲ್​ಫ್ರೆಂಡ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಟಿಸುತ್ತಿದ್ದಾರೆ. ಅದರ ಜೊತೆ ಕನ್ನಡದ ‘ಬ್ಲಿಂಕ್’, ‘ಕೆಟಿಎಂ’, ‘ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸ್ತು’, ‘ಸ್ಟ್ರಾಬೆರ್ರಿ’, ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಮಾತ್ರವೇ ಅಲ್ಲದೆ ಒಂದು ತಮಿಳು ಹಾಗೂ ಮಲಯಾಳಂ ಸಿನಿಮಾದಲ್ಲಿಯೂ ದೀಕ್ಷಿತ್ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sun, 4 February 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್