ಜೂನ್ 21 ರಂದು ಧ್ರುವ ಸರ್ಜಾ ಅಭಿನಯದ ಈ ಚಿತ್ರ ಮರು ಬಿಡುಗಡೆ

ಧ್ರುವ ಸರ್ಜಾ ಮತ್ತು ರಾಧಿಕಾ ಪಂಡಿತ್ ನಟಿಸಿದ್ದ ‘ಬಹದ್ಧೂರ್’ ಸಿನಿಮಾ ಮರು ಬಿಡುಗಡೆ ಆಗುತ್ತಿದೆ. ಈಗಾಗಲೇ ಕನ್ನಡದಲ್ಲಿ ನಡೆಯುತ್ತಿರುವ ಸಿನಿಮಾಗಳ ರೀ ರಿಲೀಸ್ ಟ್ರೆಂಡ್​ಗೆ ಧ್ರುವ ಸರ್ಜಾ ಸಹ ಸೇರಿದಂತಾಗಿದೆ.

ಜೂನ್ 21 ರಂದು ಧ್ರುವ ಸರ್ಜಾ ಅಭಿನಯದ ಈ ಚಿತ್ರ ಮರು ಬಿಡುಗಡೆ
Follow us
ಮಂಜುನಾಥ ಸಿ.
|

Updated on: Jun 15, 2024 | 10:47 PM

ಇತ್ತೀಚೆಗೆ ಸಿನಿಮಾಗಳ ರೀ ರಿಲೀಸ್ ಟ್ರೆಂಡ್ ಹೆಚ್ಚಾಗಿದೆ. ಆಂಧ್ರ-ತೆಲಂಗಾಣಗಳಲ್ಲಿ ಈ ಟ್ರೆಂಡ್ ಸಖತ್ ವರ್ಕ್ ಆಗುತ್ತಿದ್ದು, ಹಳೆಯ ಕ್ಲಾಸಿಕ್ ಸಿನಿಮಾಗಳು ಮರು ಬಿಡುಗಡೆ ಆಗಿ ಮತ್ತೆ ಸೂಪರ್ ಹಿಟ್ ಆಗುತ್ತಿವೆ. ಇದೀಗ ಕನ್ನಡದಲ್ಲಿಯೂ ಸಹ ಹಳೆಯ ಸಿನಿಮಾಗಳ ಮರು ಬಿಡುಗಡೆ ಟ್ರೆಂಡ್ ನಡೆಯುತ್ತಿದೆ. ಇತ್ತೀಚೆಗಿನ ಕೆಲ ದಿನಗಳಲ್ಲಿ ಕನ್ನಡದ ಕೆಲವು ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ. ಈಗಾಗಲೇ ಉಪೇಂದ್ರ, ಪುನೀತ್ ರಾಜ್​ಕುಮಾರ್ (Puneeth Rajkumar) ಇನ್ನೂ ಕೆಲವು ನಟರ ಹಳೆ ಸಿನಿಮಾಗಳು ಮರು ಬಿಡುಗಡೆ ಆಗಿವೆ. ಕೆಲವು ಒಳ್ಳೆಯ ಕಲೆಕ್ಷನ್ ಮಾಡಿದರೆ, ಕೆಲವು ಸಿನಿಮಾಗಳು ನೆಲಕಚ್ಚಿವೆ. ಇದೀಗ ಧ್ರುವ ಸರ್ಜಾ ನಟನೆಯ ಹಳೆಯ ಸಿನಿಮಾ ಮರು ಬಿಡುಗಡೆ ಆಗುತ್ತಿದೆ.

ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ‌ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ ‘ಬಹದ್ದೂರ್‘ ಚಿತ್ರ 2014 ರಲ್ಲಿ ಬಿಡುಗಡೆಯಾಗಿ ದೊಡ್ಡ ಹಿಟ್ ಎನಿಸಿಕೊಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನ ‘ವಾರ್​ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್​? ಸಖತ್​ ನ್ಯೂಸ್​

‘ಬಹದ್ದೂರ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಹಿನ್ನೆಲೆ ಧ್ವನಿ ನೀಡಿದ್ದರು ಎಂಬುದು ವಿಶೇಷ. ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ ‘ಬಹದ್ದೂರ್’. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಬಹಳ ಜನಪ್ರಿಯಗೊಂಡಿದ್ದವು. ‘ಬಹದ್ದೂರ್’ ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ಹಲವು ಬಾರಿ ಈಗಾಗಲೇ ಟವಿಯಲ್ಲಿ ಪ್ರಸಾರವಾಗಿ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಧ್ರುವ ಸರ್ಜಾ ಹಾಗು ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.

ಧ್ರುವ ಸರ್ಜಾ ನಟಿಸಿರುವ ‘ಮಾರ್ಟಿನ್’ ಹಾಗೂ ‘ಕೆಡಿ’ ಸಿನಿಮಾಗಳಲ್ಲಿ ನಟಿಸಿದ್ದು, ಈ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ‘ಮಾರ್ಟಿನ್’ ಸಿನಿಮಾ ಅಂತೂ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿಸಿದೆ. ಆದರೆ ಇನ್ನೂ ಸಿನಿಮಾ ಬಿಡುಗಡೆ ಆಗಿಲ್ಲ. ಸಿನಿಮಾದ ಟ್ರೈಲರ್ ಒಂದು ವರ್ಷದ ಹಿಂದೆ ಬಿಡುಗಡೆ ಆಗಿತ್ತು. ಅದಾದ ಬಳಿಕ ಈ ವರೆಗೆ ಸಿನಿಮಾದ ಸುದ್ದಿ ಇರಲಿಲ್ಲ. ಆದರೆ ಇತ್ತೀಚೆಗೆ ಸಿನಿಮಾ ದಿನಾಂಕ ಘೋಷಣೆ ಮಾಡುವ ಸೂಚನೆ ದೊರೆತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ