ಇತ್ತೀಚೆಗೆ ಸಿನಿಮಾಗಳ ರೀ ರಿಲೀಸ್ ಟ್ರೆಂಡ್ ಹೆಚ್ಚಾಗಿದೆ. ಆಂಧ್ರ-ತೆಲಂಗಾಣಗಳಲ್ಲಿ ಈ ಟ್ರೆಂಡ್ ಸಖತ್ ವರ್ಕ್ ಆಗುತ್ತಿದ್ದು, ಹಳೆಯ ಕ್ಲಾಸಿಕ್ ಸಿನಿಮಾಗಳು ಮರು ಬಿಡುಗಡೆ ಆಗಿ ಮತ್ತೆ ಸೂಪರ್ ಹಿಟ್ ಆಗುತ್ತಿವೆ. ಇದೀಗ ಕನ್ನಡದಲ್ಲಿಯೂ ಸಹ ಹಳೆಯ ಸಿನಿಮಾಗಳ ಮರು ಬಿಡುಗಡೆ ಟ್ರೆಂಡ್ ನಡೆಯುತ್ತಿದೆ. ಇತ್ತೀಚೆಗಿನ ಕೆಲ ದಿನಗಳಲ್ಲಿ ಕನ್ನಡದ ಕೆಲವು ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ. ಈಗಾಗಲೇ ಉಪೇಂದ್ರ, ಪುನೀತ್ ರಾಜ್ಕುಮಾರ್ (Puneeth Rajkumar) ಇನ್ನೂ ಕೆಲವು ನಟರ ಹಳೆ ಸಿನಿಮಾಗಳು ಮರು ಬಿಡುಗಡೆ ಆಗಿವೆ. ಕೆಲವು ಒಳ್ಳೆಯ ಕಲೆಕ್ಷನ್ ಮಾಡಿದರೆ, ಕೆಲವು ಸಿನಿಮಾಗಳು ನೆಲಕಚ್ಚಿವೆ. ಇದೀಗ ಧ್ರುವ ಸರ್ಜಾ ನಟನೆಯ ಹಳೆಯ ಸಿನಿಮಾ ಮರು ಬಿಡುಗಡೆ ಆಗುತ್ತಿದೆ.
ಆರ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಶ್ರೀನಿವಾಸ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಚೇತನ್ ಕುಮಾರ್ ನಿರ್ದೇಶನದ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಾಯಕ ಹಾಗೂ ರಾಧಿಕಾ ಪಂಡಿತ್ ನಾಯಕಿಯಾಗಿ ನಟಿಸಿದ್ದ ಸೂಪರ್ ಹಿಟ್ ‘ಬಹದ್ದೂರ್‘ ಚಿತ್ರ 2014 ರಲ್ಲಿ ಬಿಡುಗಡೆಯಾಗಿ ದೊಡ್ಡ ಹಿಟ್ ಎನಿಸಿಕೊಂಡಿತ್ತು. ಈಗ ಹತ್ತು ವರ್ಷಗಳ ನಂತರ ಜೂನ್ 21 ರಂದು ಈ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಗೋಕುಲ್ ಫಿಲಂಸ್ ಅವರು ಅದ್ದೂರಿಯಾಗಿ ಅನೇಕ ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ.
ಇದನ್ನೂ ಓದಿ:ಬಾಲಿವುಡ್ನ ‘ವಾರ್ 2’ ಸಿನಿಮಾದಿಂದ ಧ್ರುವ ಸರ್ಜಾಗೆ ಬಂತಾ ಆಫರ್? ಸಖತ್ ನ್ಯೂಸ್
‘ಬಹದ್ದೂರ್’ ಚಿತ್ರಕ್ಕೆ ಪುನೀತ್ ರಾಜಕುಮಾರ್ ಅವರು ಹಿನ್ನೆಲೆ ಧ್ವನಿ ನೀಡಿದ್ದರು ಎಂಬುದು ವಿಶೇಷ. ಪುನೀತ್ ಅವರು ತಮ್ಮ ಅಭಿನಯದ ಚಿತ್ರವನ್ನು ಹೊರತುಪಡಿಸಿ ಧ್ವನಿ ನೀಡಿದ ಮೊದಲ ಚಿತ್ರ ‘ಬಹದ್ದೂರ್’. ಚಿತ್ರದ ಮೊದಲ ಸನ್ನಿವೇಶಕ್ಕೆ ರವಿಚಂದ್ರನ್ ಅವರು ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಪುನೀತ್ ರಾಜಕುಮಾರ್ ಅವರೇ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದ್ದರು. ವಿ.ಹರಿಕೃಷ್ಣ ಅವರ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಬಹಳ ಜನಪ್ರಿಯಗೊಂಡಿದ್ದವು. ‘ಬಹದ್ದೂರ್’ ಬಿಡುಗಡೆಯಾದ ಹತ್ತು ವರ್ಷಗಳಲ್ಲಿ ಹಲವು ಬಾರಿ ಈಗಾಗಲೇ ಟವಿಯಲ್ಲಿ ಪ್ರಸಾರವಾಗಿ ಜನರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಧ್ರುವ ಸರ್ಜಾ ಹಾಗು ರಾಧಿಕಾ ಪಂಡಿತ್ ಅವರ ಅದ್ಭುತ ಅಭಿನಯ ಈ ಚಿತ್ರದ ಹೈಲೆಟ್. ಇದು ಧ್ರುವ ಸರ್ಜಾ ಅಭಿನಯದ ಎರಡನೇ ಚಿತ್ರ. ಹತ್ತು ವರ್ಷಗಳ ಮೇಲೆ ಈ ಚಿತ್ರ ಮರು ಬಿಡುಗಡೆಯಾಗುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕುಮಾರ್.
ಧ್ರುವ ಸರ್ಜಾ ನಟಿಸಿರುವ ‘ಮಾರ್ಟಿನ್’ ಹಾಗೂ ‘ಕೆಡಿ’ ಸಿನಿಮಾಗಳಲ್ಲಿ ನಟಿಸಿದ್ದು, ಈ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ‘ಮಾರ್ಟಿನ್’ ಸಿನಿಮಾ ಅಂತೂ ವರ್ಷಗಳ ಹಿಂದೆಯೇ ಚಿತ್ರೀಕರಣ ಮುಗಿಸಿದೆ. ಆದರೆ ಇನ್ನೂ ಸಿನಿಮಾ ಬಿಡುಗಡೆ ಆಗಿಲ್ಲ. ಸಿನಿಮಾದ ಟ್ರೈಲರ್ ಒಂದು ವರ್ಷದ ಹಿಂದೆ ಬಿಡುಗಡೆ ಆಗಿತ್ತು. ಅದಾದ ಬಳಿಕ ಈ ವರೆಗೆ ಸಿನಿಮಾದ ಸುದ್ದಿ ಇರಲಿಲ್ಲ. ಆದರೆ ಇತ್ತೀಚೆಗೆ ಸಿನಿಮಾ ದಿನಾಂಕ ಘೋಷಣೆ ಮಾಡುವ ಸೂಚನೆ ದೊರೆತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ